ಬೆಂಗಳೂರು : 2024-25ನೇ ಸಾಲಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದ ಆಯವ್ಯಯ ಘೋಷಿತ ಕಂಡಿಕೆ 96(d) ರಡಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯಗಳನ್ನು ಎರಡು ವರ್ಷಗಳ ಪ್ಯಾಕೇಜ್ ಅಡಿಯಲ್ಲಿ ಕಾರ್ಯಕ್ರಮ ಅನುಷ್ಠಾನಕ್ಕೆ ಆಡಳಿತಾತ್ಮಕ ಅನುಮೋದನೆ ನೀಡುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
2024-25ನೇ ಸಾಲಿನಲ್ಲಿ ಸರ್ಕಾರವು ಮಂಡಿಸಿರುವ ಆಯವ್ಯಯ ಕಂಡಿಕೆ 96(d) ರಲ್ಲಿ ಕೆಳಕಂಡಂತೆ ಘೋಷಣೆ ಮಾಡಲಾಗಿದೆ;
“ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯಗಳನ್ನು ಎರಡು ವರ್ಷಗಳ ಪ್ಯಾಕೇಜ್ ಅಡಿಯಲ್ಲಿ ಒದಗಿಸಲು 50 ಕೋಟಿ ರೂ. ಮೀಸಲಿಡಲಾಗುವುದು”
ಮೇಲೆ ಓದಲಾದ ಕ್ರಮಾಂಕ (2) ರಲ್ಲಿ 2024-25ನೇ ಸಾಲಿನ ಆಯವ್ಯಯ ಲೆಕ್ಕಶೀರ್ಷಿಕೆ 4202-01-201-1-04 ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಮೂಲಭೂತ ಸೌಕರ್ಯ ಉಪ ಲೆಕ್ಕಶೀರ್ಷಿಕೆ: 180 ಯಂತ್ರೋಪಕರಣ ಮತ್ತು ಸಾಧನ ಸಾಮಗ್ರಿಗಳು ರೂ. 2500.00 ಲಕ್ಷಗಳನ್ನು ಸದರಿ ಕಂಡಿಕೆಯ ಅನುಷ್ಠಾನಕ್ಕೆ ನಿಗದಿಪಡಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮಾಂಕ (3) ರಲ್ಲಿ ನಿರ್ದೇಶಕರು, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರು, ಇವರು 2024-25ನೇ ಸಾಲಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದ ಆಯವ್ಯಯ ಘೋಷಿತ ಕಾರ್ಯಕ್ರಮಗಳ ಆಯವ್ಯಯ ಕಂಡಿಕೆ 96(d) ಅನುಷ್ಠಾನಗೊಳಿಸಲು ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ.
ಮೇಲ್ಕಂಡ ಪ್ರಸ್ತಾವನೆಯ ಎಲ್ಲಾ ಅಂಶಗಳನ್ನು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.
2024-25ನೇ ಸಾಲಿನ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಸಂಬಂಧಿಸಿದ ಆಯವ್ಯಯ ಘೋಷಣೆ ಕಂಡಿಕೆ 96 (d) ರಂತೆ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿರುವ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ, ಕಂಪ್ಯೂಟರ್ ಲ್ಯಾಬ್, ಇಂಟರ್ನೆಟ್ ಸೌಲಭ್ಯಗಳನ್ನು ಎರಡು ವರ್ಷಗಳ ಪ್ಯಾಕೇಜ್ ಆಡಿಯಲ್ಲಿ ರೂ. 50 ಕೋಟಿಗಳ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ.
ಸದರಿ ಕಾರ್ಯಕ್ರಮ ಅನುಷ್ಠಾನಗೊಳಿಸಲು 2024-25ನೇ ಸಾಲಿನ ಆಯವ್ಯಯದಲ್ಲಿ : 4202-01-201-1-04 Infrastructure for Primary Schools and High Schools, ໙ : 180- Machinery and Equipments a 5.2500.00 ಲಕ್ಷಗಳನ್ನು ಒದಗಿಸಲಾಗಿದ್ದು, ಕೆಳಕಂಡ ಷರತ್ತುಗಳಿಗೊಳಪಟ್ಟು ಅನುಷ್ಠಾನಗೊಳಿಸತಕ್ಕದ್ದು.