ಮಂಗಳೂರು: ಸರ್ಕಾರ ಎಸ್ಡಿಪಿಐ ಕೂಡ ಬ್ಯಾನ್ ಮಾಡಲು ಚಿಂತನೆ ನಡೆಸ್ತಿದ್ದಾರೆ. ಬಿಜೆಪಿ ಸರ್ಕಾರ ನಮ್ಮನ್ನ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ ಎಂದು ಬೆಂಗಳೂರಿನಲ್ಲಿ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕಿಡಿಕಾರಿದ್ದಾರೆ.
BIGG NEWS: ಜೆಡಿಎಸ್ ನಲ್ಲಿ ಚುನಾವಣೆ ಅಭ್ಯರ್ಥಿಗಳಿಲ್ಲ ಆರೋಪ; ಕಾಂಗ್ರೆಸ್ – ಬಿಜೆಪಿ ವಿರುದ್ಧ ಕುಮಾರಸ್ವಾಮಿ ಗರಂ
SDPI ನಾಯಕರ ಮೇಲೆ ಸುಳ್ಳು ಕೇಸ್ ಹಾಗೂ ಬಂಧನ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಪಿಎಫ್ಐ ಮಾದರಿ ಎಸ್ಡಿಪಿಐ ಕೂಡ ಬ್ಯಾನ್ ಮಾಡುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.ಪೊಲೀಸರನ್ನ ಬಳಸಿಕೊಂಡು ನಮ್ಮನ್ನ ಹತ್ತಿಕ್ಕುವ ಪ್ರಯತ್ನ ನಡೆಯುತ್ತಿದೆ. ಎಸ್ಡಿಪಿಐ ನೋಂದಾಯಿತ ರಾಜಕೀಯ ಪಕ್ಷ. 13 ವರ್ಷಗಳಿಂದ ಆಯೋಗಕ್ಕೆ ದಾಖಲೆ ನೀಡುತ್ತ ಬಂದಿದೆ. PFI ಬ್ಯಾನ್ ಬಳಿಕ SDPI ನಿಷೇಧಿಸುವ ಚಿಂತನೆ ನಡೆದಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಸರ್ವಾಧಿಕಾರಿ ಧೋರಣೆ ಎಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಕಿಡಿಕಾರಿದ್ದಾರೆ.