ಬೆಂಗಳೂರು: ರಾಜ್ಯದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಅಪಘಾತ ವಿಮಾ ಪರಿಹಾರ ಮೊತ್ತವನ್ನು 20 ಲಕ್ಷದಿಂದ 50 ಲಕ್ಷಕ್ಕೆ ಹೆಚ್ಚಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈ ಕುರಿತಂತೆ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ರಾಜ್ಯ ಸೇವೆಗಳು ಪೊಲೀಸ್ ಮಹಾ ನಿರ್ದೇಶಕರು ಹಾಗೂ ಮಹಾ ನಿರ್ದೇಶಕರು ಅಧಿಕೃತ ಆದೇಶ ಹೊರಡಿಸಿದ್ದು, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಅಗ್ನಿಶಾಮಕ ಹುದ್ದೆಯಿಂದ ನಿರ್ದೇಶಕರ ಹುದ್ದೆಯವರೆಗೆ ಮಾತ್ರ ಕರ್ತವ್ಯದ ಮೇಲಿರುವಾಗ ಮೃತಪಟ್ಟಲ್ಲಿ ಗುಂಪು ವಿಮಾ ಮೊತ್ತವನ್ನು ರೂ, 20.00 ಲಕ್ಷಗಳಿಂದ ರೂ. 50,00 ಲಕ್ಷಗಳಿಗೆ ಹೆಚ್ಚಿಸಲಾಗಿದೆ. ಈ ಯೋಜನೆಯನ್ನು ವಿಮಾ ಕಂಪನಿಗೆ ವಹಿಸದೇ ಆಕಸ್ಮಿಕ ಅಪಘಾತದಲ್ಲಿ ಮೃತಪಟ್ಟ ಕರ್ತವ್ಯ ನಿರತ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ನೌಕರರ ಕುಟುಂಬಗಳಿಗೆ ನೀಡುವ ವಿಶೇಷ ಗುಂಪು ವಿಮಾ ಮೊತ್ತವನ್ನು ನೇರವಾಗಿ ಇಲಾಖೆಯ ಸಂಬಂಧಪಟ್ಟ ಲೆಕ್ಕಶೀರ್ಷಿಕೆಯಡಿ ಪಾವತಿ ಮಾಡಲು ಸೂಚಿಸಿ ಆದೇಶಿಸಲಾಗಿದೆ.
ಆದ್ದರಿಂದ ಸದರಿ ಸುತ್ತೋಲೆಯಲ್ಲಿ ನಮೂದಿರುವ ಸೇವಾ ಸೌಲಭ್ಯವನ್ನು ಎಲ್ಲಾ ಅಗ್ನಿಶಾಮಕ ಠಾಣಾಧಿಕಾರಿಗಳು ಹಾಜರಾತಿ (ರೋಲ್ ಕಾಲ್) ಸಮಯದಲ್ಲಿ ಕರ್ತವ್ಯ ನಿರತ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳ ಗಮನಕ್ಕೆ ತರಲು ಸೂಚಿಸಲಾಗಿದೆ.
ಭಾರತೀಯ ಸೈನಿಕರಿಗೆ ದೀಪಾವಳಿ ಉಡುಗೊರೆ: ಗುರೆಜ್‌ನಲ್ಲಿ ಜಿಯೋದಿಂದ ಐದು ಹೊಸ ಟವರ್ ಸ್ಥಾಪನೆ