Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ‘KERC ಮಾದರಿ’ಯಲ್ಲಿ ‘ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ’ ರಚಿಸಿ ಸರ್ಕಾರ ಅಧಿಸೂಚನೆ
KARNATAKA

ರಾಜ್ಯದಲ್ಲಿ ‘KERC ಮಾದರಿ’ಯಲ್ಲಿ ‘ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ’ ರಚಿಸಿ ಸರ್ಕಾರ ಅಧಿಸೂಚನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರವು ಕೆ ಇ ಆರ್ ಸಿ ಮಾದರಿಯಲ್ಲೇ ಸಾರ್ವಜನಿಕ ಸಾರಿಗೆ ದರ ನಿಯಂತ್ರಣಕ್ಕೆ ಸಮಿತಿಯನ್ನು ರಚಿಸಿ ಮಹತ್ವದ ಅಧಿಸೂಚನೆ ಹೊರಡಿಸಿದೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ‌ವೈಜ್ಞಾನಿಕವಾಗಿ ಪ್ರಯಾಣ ದರ ಹೆಚ್ಚಿಸುವ ಸಲುವಾಗಿ ಈ ಹಿಂದೆ ಯಾವುದೇ ಸಮಿತಿಗಳು ರಚನೆಯಾಗಿರುವುದಿಲ್ಲ. ರಾಜಕೀಯ ಇಚ್ಛಾಶಕ್ತಿಗಳಿಂದ ಪ್ರಯಾಣ ದರವನ್ನು ಏರಿಕೆ ಮಾಡುವುದಿಲ್ಲ.ಕಾಲಕಾಲಕ್ಕೆ ಹೆಚ್ಚಳವಾಗುವ ಡೀಸೆಲ್ ಬೆಲೆ ಮತ್ತು ಇತರೆ ವೆಚ್ಚವನ್ನು ಸರಿದೂಗಿಸಲು ಇಂತಿಷ್ಟು ದರ ಪರಿಷ್ಕರಣೆ ಅವಶ್ಯಕ. ಇಲ್ಲವಾದಲ್ಲಿ ಸಾರಿಗೆ ಸಂಸ್ಥೆಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗಿ, ಸದೃಢತೆಯಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುವುದಿಲ್ಲ. ಉದಾಹರಣಗೆ ಬಿ.ಎಂ.ಟಿ‌.ಸಿ 2014 ರಲ್ಲಿ , ಇತರೆ ಸಾರಿಗೆ ನಿಗಮಗಳಲ್ಲಿ 2020 ರಲ್ಲಿ ಪ್ರಯಾದ ದರ ಹೆಚ್ಚಳವಾಗಿತ್ತು.

2014 ರಲ್ಲಿನ ಪ್ರತಿ‌ದಿನ ಡೀಸೆಲ್ ವೆಚ್ಚ ರೂ.7 ಕೋಟಿ ಇದು 2025 ಕ್ಕೆ ರೂ.13 ಕೋಟಿಗೆ ಏರಿಕೆಯಾಗಿದೆ. 2014 ರಲ್ಲಿದ್ದ‌ ಪ್ರತಿದಿನದ ಸಿಬ್ದಂದಿ ವೆಚ್ಚವು ರೂ. 6 ಕೋಟಿಯಿಂದ ರೂ.12 ಕೋಟಿಗೆ ಏರಿಕೆಯಾಗಿದೆ. ವೆಚ್ಚಗಳಲ್ಲಿ ಸುಮಾರು 100% ಏರಿಕೆಯಾಗಿರುವುದನ್ನು‌ ಗಮನಿಸಬೇಕು.

ಇದರೊಂದಿಗೆ 10 ಅಥವಾ 8 ವರ್ಷಗಳಿಗೊಮ್ಮೆ ಒಮ್ಮೆಲೇ ಹೆಚ್ಚು ದರ ಪರಿಷ್ಕರಣೆ ಸಾರ್ವಜನಿಕ ‌ಪ್ರಯಾಣಿಕರಿಗೂ ಹೊರೆಯಾಗುತ್ತದೆ. ಕಾಲಕಾಲಕ್ಕೆ ಅತ್ಯಲ್ಪ ಪ್ರಯಾಣ‌ ದರ ಏರಿಕೆಯು‌ ವೈಜ್ಞಾನಿಕವಾಗಿ ಸಮಂಜಸವಾಗಿರುತ್ತದೆ. ರಾಜಕೀಯ ಇಚ್ಛಾಶಕ್ತಿಗಳಿಂದ ದೂರವಿರಿಸಿ, ಪ್ರಯಾಣ ದರ‌ ನಿರ್ವಹಣಾ ಸಮಿತಿಯು KERC ಮಾದರಿಯಲ್ಲಿ ಸ್ವತಂತ್ರವಾಗಿ ಕಾರ್ಯನಿರ್ವಹಿಸುವುದರಿಂದ ಸಾರಿಗೆ ಸಂಸ್ಥೆಗಳನ್ನು ಬಲಪಡಿಸಲು ಸಾಧ್ಯವಾಗುತ್ತದೆ.

ಈ ಕಾರಣಗಳಿಂದಾಗಿ, ಕರ್ನಾಟಕ ಮೋಟಾರು ವಾಹನ ನಿಯಮಗಳು, 1989 ರಡಿಯಲ್ಲಿ ರಾಜ್ಯ ಸರ್ಕಾರವು ಸಾರ್ವಜನಿಕ ಸಾರಿಗೆ ದರ ನಿಯಂತ್ರಣ ಸಮಿತಿ ಎಂಬ ಸಮಿತಿಯನ್ನು ರಚಿಸಿರುತ್ತದೆ. ಇದು ಅಧ್ಯಕ್ಷರು ಮತ್ತು ಇಬ್ಬರು ಸದಸ್ಯರನ್ನು ಒಳಗೊಂಡಿರುತ್ತದೆ.

ಅಧ್ಯಕ್ಷರು ಸರ್ಕಾರದ ನಿವೃತ್ತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಥವಾ ಕರ್ನಾಟಕದ ಗೌರವಾನ್ವಿತ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರಾಗಿರಬೇಕು. ಇಬ್ಬರು ಸದಸ್ಯರಲ್ಲಿ ಒಬ್ಬರು ಕಾನೂನಿನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರುವ ನಿವೃತ್ತ ಪ್ರಧಾನ ಕಾರ್ಯದರ್ಶಿ ಅಥವಾ ಸರ್ಕಾರದ ಕಾರ್ಯದರ್ಶಿಯಾಗಿರಬೇಕು. ಇನ್ನೊಬ್ಬ ಸದಸ್ಯರು ಕೈಗಾರಿಕಾ ತಜ್ಞರು ಅಥವಾ ಹಣಕಾಸು ತಜ್ಞರಾಗಿರಬಹುದು. ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸದಸ್ಯ- ಕಾರ್ಯದರ್ಶಿಯಾಗಿರುತ್ತಾರೆ.

ಸಮಿತಿಯ ಕಾರ್ಯಗಳು-

I. ಸಮಿತಿಯು ರಸ್ತೆ ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿಗಳನ್ನು ಅಧ್ಯಯನ ಮಾಡುತ್ತದೆ ಮತ್ತು ಕಾಲಕಾಲಕ್ಕೆ ವಿವಿಧ ದರಗಳ ಪರಿಷ್ಕರಣೆಯನ್ನು ಆಯಾ ರಸ್ತೆ ಸಾರಿಗೆ ನಿಗಮಕ್ಕೆ ಸೂಚಿಸುತ್ತದೆ.
II. ಹಣಕಾಸು ಮತ್ತು ಕಾರ್ಯಾಚರಣೆಯನ್ನು ಸುಧಾರಿಸಲು ದರಗಳ ಮೇಲೆ ವಿವಿಧ ಸರ್ ಚಾರ್ಜ್ ಗಳು, ಶುಲ್ಕಗಳನ್ನು ವಿಧಿಸಲು ಸಮಿತಿಯು ಸೂಚಿಸಬಹುದು.

ಸಮಿತಿಯು, ರಸ್ತೆ ಸಾರಿಗೆ ನಿಗಮಗಳಿಗೆ ನೀಡಲಾದ ಶಿಫಾರಸುಗಳ ಪ್ರತಿಯನ್ನು, ರಾಜ್ಯ ವಿಧಾನಮಂಡಲದ ಉಭಯ ಸದನಗಳ ಮುಂದೆ ಮಂಡಿಸಲು ಸರ್ಕಾರಕ್ಕೆ, ಪ್ರತಿ ವರ್ಷ ಏಪ್ರಿಲ್ 1 ರ ನಂತರ ಸಾಧ್ಯವಾದಷ್ಟು ಬೇಗ ಮತ್ತು ಡಿಸೆಂಬರ್ 31 ರ ಒಳಗೆ ವಾರ್ಷಿಕ ವರದಿಯಾಗಿ ಸಲ್ಲಿಸಬೇಕು.

PTFRC ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರವು ಸಾರಿಗೆ ಸಂಸ್ಥೆಗಳನ್ನು ಆರ್ಥಿಕವಾಗಿ ಬಲಗೊಳಿಸಲು ಮಹತ್ವದ ಹೆಜ್ಜೆಯಿಟ್ಟಿದೆ.

ಮೈಸೂರು ದಸರಾಗೆ KSRTCಯಿಂದ 2300ಕ್ಕೂ ಹೆಚ್ಚು ವಿಶೇಷ ಬಸ್ ಸೌಲಭ್ಯ: ಪ್ರವಾಸಿಗರಿಗೆ ಸ್ಪೆಷಲ್‌ ಪ್ಯಾಕೇಜ್ ಆರಂಭ

ನಾಳೆಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ/ಜಾತಿ ಸಮೀಕ್ಷೆ ಆರಂಭ: ಈ ಪ್ರಶ್ನೆಗಳಿಗೆ ಉತ್ತರ ಕಡ್ಡಾಯ

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

2 Mins Read

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read
Recent News

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

State News
KARNATAKA

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾದ ಭೀಕರ ದಂಧೆಯೊಂದು ಬಯಲಿಗೆ ಬಂದಿದೆ. ಸತ್ತವರ ಹೆಸರಿನಲ್ಲಿ ನಕಲಿ…

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.