ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಈ ಹಿಂದೆ ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿತ್ತು. ಇದೀಗ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಅಂದರೆ ಎಂಎಸ್ಎಂಇ ಮತ್ತು ಗಣಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನೇಮಿಸಿ ಸರ್ಕಾರ ಆದೇಶಿಸಿದೆ.
ಇಂದು ಈ ಸಂಬಂಧ ವರ್ಗಾವಣೆ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದ್ದು, ಸಮೀರ್ ಶುಕ್ಲಾ, ಐಎಎಸ್ (ಕೆಎನ್: 2005), ಸರ್ಕಾರದ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ (ಎಂಎಸ್‌ಎಂಇ ಮತ್ತು ಗಣಿ), ಬೆಂಗಳೂರು ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಸರ್ಕಾರದ ಕಾರ್ಯದರ್ಶಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು ಆಗಿ ನಿಯೋಜಿಸಲಾಗಿದೆ.
ಸಮೀರ್ ಶುಕ್ಲಾ, ಐಎಎಸ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಕರ್ನಾಟಕ ಭವನದ ಕಾರ್ಯದರ್ಶಿ (ಸಮನ್ವಯ) ಹುದ್ದೆಯ ಸಹವರ್ತಿ ಪ್ರಭಾರದಲ್ಲಿ ಇರಿಸಲಾಗಿದೆ.
ರೋಹಿಣಿ ಸಿಂಧೂರಿ ದಾಸರಿ, ಐಎಎಸ್ (ಕೆಎನ್: 2009), ಹುದ್ದೆಗಾಗಿ ಕಾಯುತ್ತಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ಮತ್ತು ಮುಂದಿನ ಆದೇಶದವರೆಗೆ ಸರ್ಕಾರದ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ (ಎಂಎಸ್‌ಎಂಇ ಮತ್ತು ಗಣಿ), ಬೆಂಗಳೂರು ಇಲ್ಲಿಗೆ ನೇಮಕ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದಂತ ಸಮೀರ್ ಶುಕ್ಲಾ, ಐಎಎಸ್ ವರ್ಗಾವಣೆ ಮಾಡಲಾಗಿದೆ.
ಸಾಗರದ ‘ಗಣಪತಿ ದೇವಸ್ಥಾನ’ದ ಅಭಿವೃದ್ಧಿಗೆ ಸಂಪೂರ್ಣ ಒತ್ತು: ಶಾಸಕ ಗೋಪಾಲಕೃಷ್ಣ ಬೇಳೂರು
‘RBD ಮೋಟಾರ್ಸ್’ನ ನೂತನ ‘ರಾಯಲ್ ಎನ್ ಫೀಲ್ಡ್ ಶೋ ರೂಂ’ ಉದ್ಘಾಟಿಸಿದ ‘ಶಾಸಕ ಗೋಪಾಲಕೃಷ್ಣ ಬೇಳೂರು’