ಬೆಂಗಳೂರು: ದಿನಾಂಕ 26-01-2024ರಿಂದ ಜಾರಿಗೆ ಬರುವಂತೆ ಮುಂದಿನ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿತ್ತು. ಇದೀಗ ದಿನಾಂಕ 26-01-2026ರಿಂದ ಜಾರಿಗೆ ಬರುವಂತೆ ಮುಂದುವರೆಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಶಿವಮೊಗ್ಗದ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಿಎಂ ಸಿದ್ಧರಾಮಯ್ಯ ಬಂಫರ್ ಗಿಫ್ಟ್ ಎನ್ನುವಂತೆ ಕಳೆದ ಜನವರಿ 26, 2024ರಂದು ಅವರನ್ನು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ಎರಡು ವರ್ಷದ ಅವಧಿಗೆ ನೇಮಕ ಮಾಡಿ ಆದೇಶಿಸಿದ್ದರು.
ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರಾವಧಿ ಜನವರಿ.26, 2026ಕ್ಕೆ ಅಂತ್ಯಗೊಂಡಿತ್ತು. ಇದೀಗ ಸರ್ಕಾರ ಮತ್ತೆ ಮುಂದಿನ ಆದೇಶದವರೆಗೆ ದಿನಾಂಕ 26-01-2026ರಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ಮುಂದುವರೆಸಿ ಆದೇಶಿಸಿದೆ.
ಇದಷ್ಟೇ ಅಲ್ಲದೇ ದಿನಾಂಕ 26-01-2024ರ ಆದೇಶದನ್ವಯ ಸಚಿವ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಅಂದರೇ ಸಚಿವ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ಮುಂದುವರೆಸಿ ಆದೇಶಿಸಿದೆ.
ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು

‘ಪಿಯು ಉಪನ್ಯಾಸಕ’ರ ಹುದ್ದೆಗೆ ಬಡ್ತಿ ನಿರೀಕ್ಷೆಯಲ್ಲಿದ್ದ ‘ಸರ್ಕಾರಿ ಪ್ರೌಢ ಶಾಲಾ ಸಹಶಿಕ್ಷಕ’ರಿಗೆ ಗುಡ್ ನ್ಯೂಸ್
BREAKING: ಅನಂತ್ ಸುಬ್ಬರಾವ್ ನಿಧನ ಹಿನ್ನಲೆ: ನಾಳೆಯ ಸಾರಿಗೆ ನೌಕರರ ಬೆಂಗಳೂರು ಚಲೋ ಪ್ರತಿಭಟನೆ ಮುಂದೂಡಿಕೆ








