ಬೆಂಗಳೂರು: ರಾಜ್ಯ ಸರ್ಕಾರದಿಂದ ಬೀದರ್ ಜಿಲ್ಲೆಯಲ್ಲಿ ಡಾ.ಜಯದೇವಿತಾಯಿ ಲಿಗಾಡೆ ಹಾಗೂ ಶ್ರೀ ಪ್ರಭುರಾವ ಕಂಬಳಿವಾಲೆ ಟ್ರಸ್ಟ್‌ಗಳನ್ನು ರಚಿಸಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ.
ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಜಿಲ್ಲಾಧಿಕಾರಿ, ಬೀದರ್ ಇವರ ದಿನಾಂಕ:05.12.2023ರ ಪತ್ರದಲ್ಲಿ, ದಿನಾಂಕ:07.11.2023ರಂದು ನಡೆದ ಸಭೆಯಲ್ಲಿ ಚರ್ಚಿಸಿದಂತೆ ಕರ್ನಾಟಕ ಏಕೀಕರಣ ಚಳುವಳಿ ಮತ್ತು ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಬೀದರ್ ಜಿಲ್ಲೆಯ ಮಹಾನ್ ಸಾಧಕರಾದ ಜಯದೇವಿ ತಾಯಿ ಲಿಗಾಡೆ ಹಾಗೂ ಪ್ರಭುರಾವ ಕಂಬಳಿವಾಲೆ ಇವರ ಹೆಸರಿನಲ್ಲಿ ಟ್ರಸ್ಟ್ ರಚನೆಗಾಗಿ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಲ್ಲಿಸಿದ್ದರು ಎಂದಿದ್ದಾರೆ.
ಅದರನ್ವಯ, 2025-26ನೇ ಸಾಲಿನ ಕ್ರಿಯಾಯೋಜನೆಯಲ್ಲಿ ಹೊಸದಾಗಿ ರಚನೆಯಾಗುವ ಟ್ರಸ್ಟ್‌ಗಳಿಗೆ ರೂ.35.00 ಲಕ್ಷಗಳನ್ನು ಅವಕಾಶ ಮಾಡಿಕೊಳ್ಳಲಾಗಿದ್ದು, ಜಿಲ್ಲಾಧಿಕಾರಿ, ಬೀದರ್ ಜಿಲ್ಲೆ ಇವರ ಪುಸ್ತಾವನೆಯಂತೆ ಜಯದೇವಿ ತಾಯಿ ಲಿಗಾಡೆ ಹಾಗೂ ಪ್ರಭುರಾವ ಕಂಬಳಿವಾಲೆ ಇವರ ಹೆಸರಿನಲ್ಲಿ ಟ್ರಸ್ಟ್‌ಗಳನ್ನು ರಚಿಸುವ ಕುರಿತು ಸರ್ಕಾರದ ಹಂತದಲ್ಲಿ ತೀರ್ಮಾನಿಸುವಂತೆ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರು ಕೋರಿರುತ್ತಾರೆ ಎಂದು ತಿಳಿಸಿದ್ದಾರೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ಏಕೀಕರಣ ಚಳುವಳಿ ಮತ್ತು ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿರುವ ಮಹಾನ್ ವ್ಯಕ್ತಿಗಳಾದ ಡಾ. ಜಯದೇವಿತಾಯಿ ಲಿಗಾಡೆ ಹಾಗೂ ಶ್ರೀ ಪ್ರಭುರಾವ ಕಂಬಳಿವಾಲೆ ಅವರ ಹೆಸರಿನಲ್ಲಿ ಬೀದರ್ ಜಿಲ್ಲೆಯಲ್ಲಿ ಡಾ. ಜಯದೇವಿತಾಯಿ ಲಿಗಾಡೆ ಹಾಗೂ ಶ್ರೀ ಪ್ರಭುರಾವ ಕಂಬಳಿವಾಲೆ ಟ್ರಸ್ಟ್‌ಗಳನ್ನು ರಚಿಸಿ ಆದೇಶಿಸಿದ್ದಾರೆ.

ನಾನು ‘ದೀರ್ಘಾವಧಿಯ ಸಿಎಂ ದಾಖಲೆ’ಯನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ: ಸಿದ್ಧರಾಮಯ್ಯ
ಸಾಗರದ ‘ಮಾರಿಜಾತ್ರೆ’ ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ಕರೆ








