Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ಕೈಗೊಳ್ಳುವ ಶಿಕ್ಷಕರಿಗೆ ಗೌರವಧನ ಬಿಡುಗಡೆ ಮಾಡಿ ಸರ್ಕಾರ ಆದೇಶ
KARNATAKA

BREAKING: ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ಕೈಗೊಳ್ಳುವ ಶಿಕ್ಷಕರಿಗೆ ಗೌರವಧನ ಬಿಡುಗಡೆ ಮಾಡಿ ಸರ್ಕಾರ ಆದೇಶ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಬರದಿಂದ ಸಾಗಿದೆ. ಹೀಗೆ ಜಾತಿಗಣತಿ ಸಮೀಕ್ಷೆ ಕೈಗೊಳ್ಳುವ ಶಿಕ್ಷಕರಿಗೆ ಗೌರವಧನವನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಉಲ್ಲೇಖ(1)ರ ಆದೇಶದನ್ವಯ ರಾಜ್ಯಾದ್ಯಂತ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ದಿನಾಂಕ:22.09.2025 ರಿಂದ 07.10.2025ರ ವರೆಗೆ ಕೈಗೊಳ್ಳಲಾಗುತ್ತಿದೆ. ಈಗಾಗಲೇ ಜಿಲ್ಲೆಗಳಲ್ಲಿ ಸಮೀಕ್ಷಾ ಕಾರ್ಯವನ್ನು ಪ್ರಾರಂಭಿಸಿದ್ದು, ಸಮೀಕ್ಷೆಯ ಕಾರ್ಯ ಪ್ರಗತಿಯಲ್ಲಿದೆ ಎಂದಿದೆ.

ಉಲ್ಲೇಖ (2)ರ ಆದೇಶದಲ್ಲಿ ಆಯೋಗದಿಂದ ಕೈಗೊಳ್ಳಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಆರ್ಥಿಕ ಇಲಾಖೆಯಿಂದ ಪೂರಕ ಆಯವ್ಯಯ-2 ರಲ್ಲಿ ಅನುದಾನ ಒದಗಿಸುವ ಷರತ್ತುಗಳಿಗೆ ಒಳಪಟ್ಟು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ನಿಗಮಗಳ ಪಿ.ಡಿ. ಖಾತೆಗಳಲ್ಲಿ ಲಭ್ಯವಿರುವ ರೂ.348.36 ಕೋಟಿಗಳನ್ನು ಸಮೀಕ್ಷೆಯ ಉದ್ದೇಶಕ್ಕೆ ಬಳಸಿಕೊಳ್ಳಲು ಅನುಮೋದನೆ ನೀಡಿ ಆದೇಶಿಸಲಾಗಿದೆ.

ಉಲ್ಲೇಖ (3)ರ ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ದಿನಾಂಕ:22.09.2025 ರಿಂದ 07.05.2025ರ ವರೆಗೆ ಕೈಗೊಳ್ಳಲಾಗುವ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರಿಗೆ ಈ ಕೆಳಕಂಡಂತೆ ಗೌರವಧನವನ್ನು ನಿಗದಿಪಡಿಸಿ ಆದೇಶಿಸಿದೆ.

ಸರ್ಕಾರದ ಕಾರ್ಯದರ್ಶಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರ ಸೂಚನೆಯನ್ವಯ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ 1,20,728 ಸಮೀಕ್ಷಾದಾರರಿಗೆ (GBA ಹೊರತುಪಡಿಸಿ) ಮೊದಲನೇ ಕಂತಿನಲ್ಲಿ ಗೌರವಧನ ತಲಾ ರೂ.5000/- ಗಳಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಒಟ್ಟು ರೂ. 60,36,40,000/- (ರೂಪಾಯಿ ಅರವತ್ತು ಕೋಟಿ ಮೂವತ್ತಾರು ಲಕ್ಷದ ನಲವತ್ತು ಸಾವಿರಗಳು ಮಾತ್ರ) ಗಳನ್ನು ಬಿಡುಗಡೆ ಮಾಡಲು ತೀರ್ಮಾನಿಸಿದೆ. ಅದರಂತೆ ಈ ಆದೇಶಿಸಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ 1,20,728 ಸಮೀಕ್ಷಾದಾರರಿಗೆ (GBA ಹೊರತುಪಡಿಸಿ) ಅನುಬಂಧದಲ್ಲಿ ವಿವರಿಸಿರುವಂತೆ ಮೊದಲನೇ ಕಂತಿನಲ್ಲಿ ಗೌರವಧನ ತಲಾ ರೂ.5000/- ಗಳಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಒಟ್ಟು ರೂ. 60,36,40,000/- (ರೂಪಾಯಿ ಅರವತ್ತು ಕೋಟಿ ಮೂವತ್ತಾರು ಲಕ್ಷದ ನಲವತ್ತು ಸಾವಿರಗಳು ಮಾತ್ರ) ಗಳನ್ನು ಸಮೀಕ್ಷಾ ಉದ್ದೇಶಕ್ಕಾಗಿ ನಿಗಮಗಳಿಂದ ಆಯೋಗದ ಠೇವಣಿ ಖಾತೆ ಲೆಕ್ಕ ಶೀರ್ಷಿಕೆ ಸಂಖ್ಯೆ: 8449-00-120-0-18-677 ಹಾಗೂ ಠೇವಣಿ ಸಂಖ್ಯೆ: 26572A010 ಗೆ ವರ್ಗಾವಣೆ ಮಾಡಿರುವ ಅನುದಾನದಿಂದ ಜಿಲ್ಲಾಧಿಕಾರಿಗಳ ಹೆಸರಿನಲ್ಲಿರುವ ಪಿ.ಡಿಖಾತೆ/ಬ್ಯಾಂಕ್ ಖಾತೆಗೆ ಈ ಕೆಳಕಂಡ ನಿಬಂಧನೆಗಳಿಗೆ ಒಳಪಟ್ಟು, ಬಿಡುಗಡೆ ಮಾಡಿ ಆದೇಶಿಸಿದೆ.

1. ಈ ಅನುದಾನವನ್ನು ಸಮೀಕ್ಷಾದಾರರಿಗೆ ತಲಾ ರೂ.5,000 ರಂತೆ ಮೊದಲನೇ ಕಂತಿನ ಗೌರವಧನ ನೀಡಲು ಬಳಕೆ ಮಾಡುವುದು, ಉಳಿದ ಅನುದಾನವನ್ನು ಮುಂದಿನ ಕಂತುಗಳಲ್ಲಿ ಬಿಡುಗಡೆ ಮಾಡಲಾಗುವುದು.

2. ಸಮೀಕ್ಷೆಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾಗುವ ಅನುದಾನ ಹಾಗೂ ವೆಚ್ಚದ ವಿವರಗಳನ್ನು ಪ್ರತ್ಯೇಕವಾಗಿ ನಿರ್ವಹಿಸುವುದು ಹಾಗೂ ನಿಯಮಾನುಸಾರ ವೆಚ್ಚಗಳನ್ನು ಭರಿಸಿದ ನಂತರ ಹಣ ವಿನಿಯೋಗ ಪಮಾಣ ಪತ್ರವನ್ನು ಆಯೋಗಕ್ಕೆ ಸಲ್ಲಿಸುವುದು.

Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

2 Mins Read

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read
Recent News

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

State News
KARNATAKA

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾದ ಭೀಕರ ದಂಧೆಯೊಂದು ಬಯಲಿಗೆ ಬಂದಿದೆ. ಸತ್ತವರ ಹೆಸರಿನಲ್ಲಿ ನಕಲಿ…

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.