ಬೆಂಗಳೂರು: ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾಗಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಸಂಪೂರ್ಣ ಜವಾಬ್ದಾರಿ ಹಾಗೂ ಅಧಿಕಾರವನ್ನು ನಿರ್ದೇಶಕರಿಗೆ ಪುನಃ ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಂಸ್ಥೆಯಲ್ಲಿ ನಡೆದಿದ್ದ ಅವ್ಯವಹಾರ ಹಾಗೂ ಅಕ್ರಮಗಳಿಗೆ ಸಂಬಂಧಿಸಿದಂತೆ ತನಿಖೆಗೆ ನೇಮಿಸಲಾಗಿದ್ದ ಸಮಿತಿಯ ಶಿಫಾರಸುಗಳನ್ನು ಆಧರಿಸಿ ಸರ್ಕಾರ ಕೆಲವು ಮಹತ್ವದ ಬದಲಾವಣೆಗಳನ್ನು ಮಾಡಿ ಆದೇಶ ಹೊರಡಿಸಿದೆ.
ಆಡಳಿತಾಧಿಕಾರಿಗಳಾಗಿ ನೇಮಕಗೊಂಡಿದ್ದ ಅಧಿಕಾರಿಗಳಿಗೆ ನೀಡಲಾಗಿದ್ದ ಎಲ್ಲಾ ಜವಾಬ್ದಾರಿಗಳನ್ನು ಹಿಂಪಡೆಯಲು ಸರ್ಕಾರ ಆದೇಶ ಹೊರಡಿಸಿದೆ.
ಆಡಳಿತಾತ್ಮಕ ವಿಷಯ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಸಿಬ್ಬಂದಿ ಸೇವಾ ವಿಷಯ, ಹಣಕಾಸು ನಿರ್ವಹಣೆ, ಸಂಗ್ರಹಣೆ, ಖರೀದಿ, ಮಾನವ ಸಂಪನ್ಮೂಲ ನಿರ್ವಹಣೆ ಸೇರಿದಂತೆ ಎಲ್ಲಾ ಪೂರ್ಣ ಜವಾಬ್ದಾರಿಯನ್ನು ಈ ಹಿಂದೆ ಇದ್ದರಂತೆ ನಿರ್ದೇಶಕರಿಗೆ ಪುನಃ ಸ್ಥಾಪಿಸಿ ಆದೇಶ ಹೊರಡಿಸಲಾಗಿದೆ.
BIG NEWS: ಬಿಗ್ ಬಾಸ್ ಮನೆಗೆ ನೋಟಿಸ್ ನೀಡಲಾಗಿದೆ: ಸಚಿವ ಈಶ್ವರ ಖಂಡ್ರೆ
BREAKING: ಅ.18ರವರೆಗೆ ರಾಜ್ಯದ ಸರ್ಕಾರಿ, ಅನುದಾನಿತ ಶಾಲೆಗಳಿಗೆ ‘ದಸರಾ ರಜೆ’ ವಿಸ್ತರಣೆ: CM ಸಿದ್ದರಾಮಯ್ಯ ಘೋಷಣೆ