ಬೆಂಗಳೂರು : ರಾಜ್ಯ ಸಿವಿಲ್ ಸೇವೆ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಟ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (As a one time messure) 5 ವರ್ಷಗಳ ಸಡಿಲಿಕೆ ನೀಡಿ ಸರ್ಕಾರವು 2026 ನೇ ಜನವರಿ 29 ರಂದು ಆದೇಶ ಹೊರಡಿಸಿದೆ.
ಹಲವಾರು ಉದ್ಯೋಗಾಕಾಂಕ್ಷಿಗಳು, ಜನಪ್ರತಿನಿಧಿಗಳು ಮತ್ತು ಸಂಘಸಂಸ್ಥೆಗಳು ಮನವಿ ಸಲ್ಲಿಸಿ, ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿರುತ್ತಾರೆ. ಸದರಿ ಮನವಿಗಳನ್ನು ಸರ್ಕಾರವು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಕೆ ನೀಡಲು ತೀರ್ಮಾನಿಸಿ ಆದೇಶ ಹೊರಡಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಸೇವಾ ನಿಯಮಗಳು-1) ಸರ್ಕಾರದ ಅಧೀನ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮದುವೆ ಮಂಟಪದವರು ವಧು-ವರರ ವಯಸ್ಸಿನ ದಾಖಲೆ ಪರಿಶೀಲಿಸಬೇಕೆಂಬ ನಿಯಮಗಳಿಲ್ಲ : ಹೈಕೋರ್ಟ್








