Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಾಬಹಾರ್ ಮೇಲೆ ಅಮೆರಿಕ ಯುದ್ಧ ವಿಮಾನಗಳ ದಾಳಿ: ಇರಾನ್ ಸೇನಾ ನೆಲೆಗಳು ಧ್ವಂಸ; ಗಡಿಭಾಗದಲ್ಲಿ ಭೀಕರ ಸ್ಫೋಟ!

16/03/2026 1:20 PM

ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹೆಚ್ಚು ಹಣ ನೀಡಿ ಸ್ಮಶಾನ ಭೂಮಿ ಖರೀದಿಗೆ ಸರ್ಕಾರ ಸಿದ್ದ: ಕೃಷ್ಣ ಬೈರೇಗೌಡ

16/03/2026 1:13 PM

ALERT : ಮೊಬೈಲ್ ಬಳಕೆಯಿಂದ `ಡಿಜಿಟಲ್ ಬುದ್ಧಿಮಾಂದ್ಯತೆ’ : ವಿದ್ಯಾರ್ಥಿಗಳಿಗೆ ಓದಿದ್ದು ನೆನಪಿರಲ್ಲ.!

16/03/2026 1:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹೆಚ್ಚು ಹಣ ನೀಡಿ ಸ್ಮಶಾನ ಭೂಮಿ ಖರೀದಿಗೆ ಸರ್ಕಾರ ಸಿದ್ದ: ಕೃಷ್ಣ ಬೈರೇಗೌಡ
KARNATAKA

ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹೆಚ್ಚು ಹಣ ನೀಡಿ ಸ್ಮಶಾನ ಭೂಮಿ ಖರೀದಿಗೆ ಸರ್ಕಾರ ಸಿದ್ದ: ಕೃಷ್ಣ ಬೈರೇಗೌಡ

By kannadanewsnow0516/03/2026 1:13 PM

ಬೆಂಗಳೂರು ಮಾರ್ಚ್ 16: ಸ್ಮಶಾನ ಇಲ್ಲದ ಗ್ರಾಮಗಳಿಗೆ ಸ್ಮಶಾನ ಭೂ ಮಂಜೂರಿಗೆ ಸರ್ಕಾರಿ ಜಮೀನು ಇಲ್ಲದಿದ್ದರೆ, ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹಣ ನೀಡಿ ಖಾಸಗಿ ಜಮೀನು ಖರೀದಿಗೆ ಸರ್ಕಾರ ಸಿದ್ದ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಸೋಮವಾರ ವಿಧಾನಸಭೆಯಲ್ಲಿ ಔರಾದ್ ಕ್ಷೇತ್ರದ ಶಾಸಕ ಪ್ರಭು ಚೌವ್ಹಾಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿದ ಅವರು, “ಕಳೆದ 70 ವರ್ಷಗಳಿಂದ ಎಲ್ಲಾ ಸರ್ಕಾರಗಳೂ ಇರುವ ಭೂಮಿಯನ್ನೆಲ್ಲಾ ರೈತರಿಗೆ ಹಾಗೂ ವಿವಿಧ ಜನಪರ ಯೋಜನೆಗಳಿಗೆ ಮಂಜೂರು ಮಾಡಿದ್ದು, ಪ್ರಸ್ತುತ ಸ್ಮಶಾನಕ್ಕೂ ಭೂಮಿ ಇಲ್ಲದಂತಾಗಿದೆ” ಎಂದು ಬೇಸರ ಹೊರಹಾಕಿದರು.

“ಕಳೆದ ಹತ್ತು ವರ್ಷಗಳಿಂದ ಎಲ್ಲಾ ಸರ್ಕಾರಗಳೂ ವಸತಿ ಪ್ರದೇಶಗಳಿಗೆ ಅವಶ್ಯ ಇರುವಷ್ಟು ಸ್ಮಶಾನ ಭೂಮಿ ನೀಡಬೇಕು ಎಂದು ಪ್ರಯತ್ನಿಸಿದೆ. ಈ ವಿಚಾರದಲ್ಲಿ ಹೈಕೋರ್ಟ್ ಸಹ ಸರ್ಕಾರದ ಬೆನ್ನುಹತ್ತಿದೆ. ಸರ್ಕಾರಿ ಜಮೀನು ಇದ್ದಲ್ಲಿ ಆ ಭೂಮಿಯನ್ನೇ ಸ್ಮಶಾನಕ್ಕೆ ಕಾಯ್ದಿರಿಸಲಾಗಿದೆ. ಸರ್ಕಾರಿ ಜಮೀನು ಇಲ್ಲದಿದ್ದ ಭಾಗಗಳಲ್ಲಿ ಸ್ಮಶಾನ ಭೂಮಿ ನೀಡುವ ಸಲುವಾಗಿ ಕಳೆದ 3 ವರ್ಷದಲ್ಲಿ 58 ಕೋಟಿ ರೂ. ಕೊಟ್ಟು ಭೂಮಿಯನ್ನು ಖರೀದಿ ಮಾಡುವ ಹಂತಕ್ಕೆ ಬಂದು ನಿಂತಿದ್ದೇವೆ” ಎಂದು ವಿಷಾದಿಸಿದರು.

ಔರಾದ್ ತಾಲೂಕಿನ ಪರಿಸ್ಥಿತಿ ಬಗ್ಗೆಯೂ ಸದನಕ್ಕೆ ಮಾಹಿತಿ ನೀಡಿದ ಅವರು,” ಔರಾದ್ ತಾಲೂಕಿನ 154 ವಸತಿ ಪ್ರದೇಶಗಳ ಪೈಕಿ 9 ಪ್ರದೇಶಗಳಲ್ಲಿ ಸ್ಮಶಾನ ಇಲ್ಲ ಎಂಬ ವರದಿ ಇದೆ. ಈ 9 ಗ್ರಾಮಗಳ ಪೈಕಿ 2 ಗ್ರಾಮಗಳಿಗೆ ಆ ಗ್ರಾಮದ ಮಿತಿಯಲ್ಲೇ ಸರ್ಕಾರಿ ಭೂಮಿ ಲಭ್ಯ ಇದ್ದು, ಇನ್ನೂ ಒಂದು ವಾರದಲ್ಲಿ ಸ್ಮಶಾನ ಭೂಮಿಗೆ ಕಾಯ್ದಿರಿಸಲು ಜಿಲ್ಲಾಧಿಕಾರಿಗಳಿಗೆ ಆದೇಶ ಮಾಡಲಾಗಿದೆ. ಇನ್ನೂ 7 ವಸತಿ ಪ್ರದೇಶಗಳಿಗೆ ಪಕ್ಕದ ಗ್ರಾಮದಲ್ಲಿ ಭೂಮಿ ಇದ್ದು, ಅದನ್ನು 15 ದಿನಗಳ ಒಳಗೆ ಕಾಯ್ದಿರಿಸಲು ಸೂಚಿಸಲಾಗಿದೆ.

ಒಂದು ವೇಳೆ ಆ ಜಾಗ ಸೂಕ್ತ ಅಲ್ಲ ಅಂತ ಗೊತ್ತಾದ್ರೆ ಖಾಸಗಿ ಜಮೀನನ್ನು ಖರೀದಿಸಲು ಸಹ ಪ್ರಸ್ತಾವನೆ ಸಿದ್ದವಾಗಿದೆ. ಖಾಸಗಿ ಜಮೀನುಗಳಿಗೆ ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಅಧಿಕ ಹಣ ನೀಡಲೂ ಸರ್ಕಾರ ಮುಂದಾಗಿದೆ. ಇನ್ನೂ ಕಾಂಪೌಂಡ್ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನೂ ನರೇಗಾ ಅಡಿಯಲ್ಲಿ ಗ್ರಾಮ ಪಂಚಾಯತ್ ಮಾಡಿಕೊಡುತ್ತಾರೆ. ಈ ಸಂಬಂಧ ಗ್ರಾಮ ಪಂಚಾಯತ್ ಸಿಇಓ ಹಾಗೂ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗುವುದು” ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

ALERT : ಮೊಬೈಲ್ ಬಳಕೆಯಿಂದ `ಡಿಜಿಟಲ್ ಬುದ್ಧಿಮಾಂದ್ಯತೆ’ : ವಿದ್ಯಾರ್ಥಿಗಳಿಗೆ ಓದಿದ್ದು ನೆನಪಿರಲ್ಲ.!

16/03/2026 1:08 PM2 Mins Read

BREAKING : RCB ಫ್ಯಾನ್ಸ್‌ಗೆ ಗುಡ್ ನ್ಯೂಸ್ : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘IPL’ ಪಂದ್ಯಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

16/03/2026 12:53 PM1 Min Read

ಜನಸಾಮಾನ್ಯರ ಬದುಕಿಗೆ ಆಸರೆಯಾದ ಸರ್ಕಾರದ ಪ್ರಮುಖ ಯೋಜನೆಗಳು ಇವು : ಪ್ರತಿಯೊಬ್ಬ ಭಾರತೀಯನೂ ತಿಳಿಯಲೇಬೇಕು !

16/03/2026 12:43 PM2 Mins Read
Recent News

ಚಾಬಹಾರ್ ಮೇಲೆ ಅಮೆರಿಕ ಯುದ್ಧ ವಿಮಾನಗಳ ದಾಳಿ: ಇರಾನ್ ಸೇನಾ ನೆಲೆಗಳು ಧ್ವಂಸ; ಗಡಿಭಾಗದಲ್ಲಿ ಭೀಕರ ಸ್ಫೋಟ!

16/03/2026 1:20 PM

ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹೆಚ್ಚು ಹಣ ನೀಡಿ ಸ್ಮಶಾನ ಭೂಮಿ ಖರೀದಿಗೆ ಸರ್ಕಾರ ಸಿದ್ದ: ಕೃಷ್ಣ ಬೈರೇಗೌಡ

16/03/2026 1:13 PM

ALERT : ಮೊಬೈಲ್ ಬಳಕೆಯಿಂದ `ಡಿಜಿಟಲ್ ಬುದ್ಧಿಮಾಂದ್ಯತೆ’ : ವಿದ್ಯಾರ್ಥಿಗಳಿಗೆ ಓದಿದ್ದು ನೆನಪಿರಲ್ಲ.!

16/03/2026 1:08 PM

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳಿಗೆ ಇರಾನ್ ‘ಹಸಿರು ನಿಶಾನೆ’: ಇದರ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್. ಜೈಶಂಕರ್!

16/03/2026 12:58 PM
State News
KARNATAKA

ಮಾರ್ಗಸೂಚಿ ದರಕ್ಕಿಂತ ಮೂರು ಪಟ್ಟು ಹೆಚ್ಚು ಹಣ ನೀಡಿ ಸ್ಮಶಾನ ಭೂಮಿ ಖರೀದಿಗೆ ಸರ್ಕಾರ ಸಿದ್ದ: ಕೃಷ್ಣ ಬೈರೇಗೌಡ

By kannadanewsnow0516/03/2026 1:13 PM KARNATAKA 2 Mins Read

ಬೆಂಗಳೂರು ಮಾರ್ಚ್ 16: ಸ್ಮಶಾನ ಇಲ್ಲದ ಗ್ರಾಮಗಳಿಗೆ ಸ್ಮಶಾನ ಭೂ ಮಂಜೂರಿಗೆ ಸರ್ಕಾರಿ ಜಮೀನು ಇಲ್ಲದಿದ್ದರೆ, ಮಾರ್ಗಸೂಚಿ ದರಕ್ಕಿಂತ ಮೂರು…

ALERT : ಮೊಬೈಲ್ ಬಳಕೆಯಿಂದ `ಡಿಜಿಟಲ್ ಬುದ್ಧಿಮಾಂದ್ಯತೆ’ : ವಿದ್ಯಾರ್ಥಿಗಳಿಗೆ ಓದಿದ್ದು ನೆನಪಿರಲ್ಲ.!

16/03/2026 1:08 PM

BREAKING : RCB ಫ್ಯಾನ್ಸ್‌ಗೆ ಗುಡ್ ನ್ಯೂಸ್ : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘IPL’ ಪಂದ್ಯಗಳಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್!

16/03/2026 12:53 PM

ಜನಸಾಮಾನ್ಯರ ಬದುಕಿಗೆ ಆಸರೆಯಾದ ಸರ್ಕಾರದ ಪ್ರಮುಖ ಯೋಜನೆಗಳು ಇವು : ಪ್ರತಿಯೊಬ್ಬ ಭಾರತೀಯನೂ ತಿಳಿಯಲೇಬೇಕು !

16/03/2026 12:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.