ಕೋಲಾರ: ಜಿಲ್ಲೆಯಲ್ಲಿ ಕಳೆದೆರಡು ದಿನ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದ ಅವಾಂತರ ಹೆಚ್ಚಾಗಿದ್ದು, ಸರ್ಕಾರಿ ಶಾಲೆಗಳ ಗೋಡೆಗಳು ಕುಸಿತಗೊಂಡಿದೆ. ಜಿಲ್ಲೆಯ 300 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳ ಕಟ್ಟಡಗಳನ್ನು ದುರಸ್ಥಿ ಮಾಡಬೇಕಿದ್ದು, ಆತಂಕದಲ್ಲೆ ವಿದ್ಯಾರ್ಥಿಗಳು ಪಾಠ ಕೇಳಬೇಕಾದ ಪರಿಸ್ಥಿತಿ ಎದುರಾಗಿದೆ.
BIGG NEWS: ಇನ್ನೊಮ್ಮೆ ದೇವರು ದೊಡ್ಡಪ್ಪನಿಗೆ ಜೀವ ಕೊಡಲಿ ಎಂದು ಕಣ್ಣೀರು ಹಾಕಿದ ಪೃಥ್ವಿ ಕತ್ತಿ
ಕೋಲಾರ ತಾಲ್ಲೂಕಿನ ದೊಡ್ಡ ಹಸಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೋಡೆ ಕುಸಿದು ಬಿದ್ದಿದೆ. ನಿರಂತರ ಮಳೆಯ ಪರಿಣಾಮ ಸರ್ಕಾರಿ ಶಾಲೆ ಗೋಡೆ ಕುಸಿದು ಬಿದ್ದಿದೆ. ಇನ್ನೂ ಶಾಲೆಯಲ್ಲಿ ನಾಲ್ಕು ಕೊಠಡಿಗಳಿದ್ದು, ಇದರಲ್ಲಿ 2 ಹಳೆಯದಾಗಿ ಕುಸಿಯುವ ಭೀತಿ ಎದುರಾಗಿದ್ದರೆ, ಉಳಿದ ಎರಡು ಮಾತ್ರ ಚನ್ನಾಗಿದೆ. ಇನ್ನೂ ಅದೃಷ್ಠವಶಾತ್ ಯಾವುದೆ ಪ್ರಾಣಾಪಾಯ ಸಂಭವಿಸಿಲ್ಲ, ಕೊಠಡಿಗಳಿಲ್ಲದೆ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿರುವ ಮರದ ಕೆಳಗೆ ಕುಳಿತು ಪಾಠ ಕೇಳುವ ಸ್ಥಿತಿ ನಿರ್ಮಾಣ ವಾಗಿತ್ತು. ಇನ್ನೂ ಕೋಲಾರ ತಹಶೀಲ್ದಾರ್ ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.