ನವದೆಹಲಿ : ಇತ್ತೀಚಿನ ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೊಳಗಾದ ಜನರೊಂದಿಗೆ ತಮ್ಮ ಸರ್ಕಾರ ಹೆಗಲಿಗೆ ಹೆಗಲು ಕೊಟ್ಟು ನಿಲ್ಲುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.
ವಿಪತ್ತು ಪೀಡಿತ ಪ್ರದೇಶಗಳಲ್ಲಿನ ವಾಸ್ತವ ಪರಿಸ್ಥಿತಿಯನ್ನ ನಿರ್ಣಯಿಸಲು ಅವರು ಬೆಳಿಗ್ಗೆ ಹಿಮಾಚಲ ಪ್ರದೇಶ ಮತ್ತು ಪಂಜಾಬ್’ಗೆ ತೆರಳಿದರು. ಪ್ರವಾಹ ಮತ್ತು ಭೂಕುಸಿತದ ಪರಿಸ್ಥಿತಿಯನ್ನ ಪರಿಶೀಲಿಸಲು ನಾನು ಹಿಮಾಚಲ ಪ್ರದೇಶ ಮತ್ತು ಪಂಜಾಬ್’ಗೆ ತೆರಳುತ್ತಿದ್ದೇನೆ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ನಲ್ಲಿ ಬರೆದಿದ್ದಾರೆ. ಈ ಕಷ್ಟದ ಸಮಯದಲ್ಲಿ ಸರ್ಕಾರ ಸಂತ್ರಸ್ತ ಜನರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ನಿಂತಿದೆ ಎಂದರು.
ಮಧ್ಯಾಹ್ನ 1:30ಕ್ಕೆ ಕಾಂಗ್ರಾ ತಲುಪಲಿದ ಪ್ರಧಾನಿ ಮೋದಿ!
ಉತ್ತರದ ಎರಡೂ ರಾಜ್ಯಗಳಲ್ಲಿ ಮಳೆಗಾಲದಿಂದ ಉಂಟಾದ ಪ್ರವಾಹ ಮತ್ತು ಭೂಕುಸಿತಗಳು ವ್ಯಾಪಕ ಹಾನಿಯನ್ನುಂಟು ಮಾಡಿದ ನಂತರ ನಡೆಯುತ್ತಿರುವ ವಿಪತ್ತು ಪ್ರತಿಕ್ರಿಯೆ ಮತ್ತು ಪುನರ್ವಸತಿ ಕ್ರಮಗಳನ್ನ ಪ್ರಧಾನಿ ಪರಿಶೀಲಿಸಲಿದ್ದಾರೆ. ಮಧ್ಯಾಹ್ನ 1.30ರ ಸುಮಾರಿಗೆ, ಪ್ರಧಾನಿ ಮೋದಿ ಹಿಮಾಚಲ ಪ್ರದೇಶದ ಕಾಂಗ್ರಾ ತಲುಪಲಿದ್ದಾರೆ, ಅಲ್ಲಿ ಅವರು ಅಧಿಕಾರಿಗಳನ್ನ ಭೇಟಿ ಮಾಡಿ ಪ್ರಸ್ತುತ ಪರಿಸ್ಥಿತಿಯ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಅವರು ಸಂತ್ರಸ್ತ ಕುಟುಂಬಗಳು ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ತೊಡಗಿರುವ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ಮತ್ತು ಆಪ್ಡಾ ಮಿತ್ರ ತಂಡಗಳ ಸದಸ್ಯರೊಂದಿಗೆ ಸಂವಹನ ನಡೆಸಲಿದ್ದಾರೆ.
ಉಪರಾಷ್ಟ್ರಪತಿ ಚುನಾವಣೆ; ನಮ್ಮ ಅಭ್ಯರ್ಥಿ ಪರವಾಗಿ ಆತ್ಮಸಾಕ್ಷಿಯ ಮತಗಳನ್ನು ಕೇಳಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್