Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಕ್ರಿಯೇಟಿವ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಅಕ್ರಮ ಮರಳು ದಾಸ್ತಾನು: ಶಾಲಾ ಆಡಳಿತ ಮಂಡಳಿ ವಿರುದ್ಧ ದೂರು ದಾಖಲು

08/04/2026 8:33 PM

ವಿಮಾನಯಾನ ಸಂಸ್ಥೆಗಳಿಗೆ ಬಂಪರ್ ಕೊಡುಗೆ: ಲ್ಯಾಂಡಿಂಗ್ ಮತ್ತು ಪಾರ್ಕಿಂಗ್ ಶುಲ್ಕದಲ್ಲಿ ಶೇ. 25 ರಷ್ಟು ಕಡಿತ!

08/04/2026 8:30 PM

ಚಂದ್ರದ್ರೋಣ ಪರ್ವತದಲ್ಲಿ ಚಾರಣಕ್ಕೆ ಹೋಗಿದ್ದ ಬಾಲಕಿ ನಾಪತ್ತೆ: ಶೋಧಕ್ಕೆ ಅರಣ್ಯ ಇಲಾಖೆ ಬೆಂಬಲಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

08/04/2026 8:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ‘ಹೃದಯಾಘಾತ’ ತಡೆಗೆ ಸರ್ಕಾರ ಮಹತ್ವದ ಕ್ರಮ: ಎಲ್ಲಾ ತಾಲ್ಲೂಕುಗಳಿಗೆ ‘ಸ್ಟೆಮಿ ಯೋಜನೆ’ ವಿಸ್ತರಣೆ
KARNATAKA

ರಾಜ್ಯದಲ್ಲಿ ‘ಹೃದಯಾಘಾತ’ ತಡೆಗೆ ಸರ್ಕಾರ ಮಹತ್ವದ ಕ್ರಮ: ಎಲ್ಲಾ ತಾಲ್ಲೂಕುಗಳಿಗೆ ‘ಸ್ಟೆಮಿ ಯೋಜನೆ’ ವಿಸ್ತರಣೆ

By kannadanewsnow0930/06/2025 5:04 PM

ಬೆಂಗಳೂರು: ದಿನೇ ದಿನೇ ಕರ್ನಾಟಕದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹೃದಯಾಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಇದೀಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಅದೇ ರಾಜ್ಯಾಧ್ಯಂತ ಎಲ್ಲಾ ತಾಲ್ಲೂಕುಗಳಿಗೂ ಸ್ಟೆಮಿ ಯೋಜನೆ ವಿಸ್ತರಣೆಗೆ ನಿರ್ಧರಿಸಿರುವುದಾಗಿ ಆರೋಗ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಮಾಹಿತಿ ನೀಡಿದ್ದಾರೆ.

ರಾಜ್ಯಾಧ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಸ್ಟೆಮಿ ಯೋಜನೆ ವಿಸ್ತರಣೆ ಮಾಡಲಾಗುತ್ತಿದೆ. ಈ ಮೊದಲು 86 ತಾಲ್ಲೂಕು ಕೇಂದ್ರಗಳಲ್ಲಿ ಮಾತ್ರವೇ ಸ್ಟೆಮಿ ಯೋಜನೆ ಇತ್ತು. ಮುಂದಿನ ವರ್ಷದೊಳಗೆ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ ಯೋಜನೆ ಆರಂಭಗೊಳ್ಳಲಿದೆ ಎಂದರು.

ಅಂದಹಾಗೇ ರಾಜ್ಯ ಸರ್ಕಾರ ರಾಜ್ಯಾಧ್ಯಂತ ವಿಸ್ತರಿಸುತ್ತಿರುವಂತ ಸ್ಟೆಮಿ ಯೋಜನೆ ಅಂದರೆ ಹಬ್ ಆಂಡ್ ಸ್ಟೋಕ್ ಮಾಡೆಲ್ ಎಂಬುದಾಗಿದೆ. ಈ ಯೋಜನೆಯ ಅಡಿಯಲ್ಲಿ ತಾಲ್ಲೂಕು ಕೇಂದ್ರಗಳಲ್ಲೇ ಹೃದಯಾಘಾತಕ್ಕೆ ಒಳಗಾದವರಿಗೆ ತುರ್ತು ವೈದ್ಯಕೀಯ ನೆರವು ಸಿಗಲಿದೆ. ಆ ಮೂಲಕ ಪ್ರಾಣಾಪಾಯದಿಂದ ಹೃದಯಾಘಾತಕ್ಕೆ ಒಳಗಾದವರನ್ನು ಪಾರು ಮಾಡುವಂತ ಚಿಕಿತ್ಸಾ ವಿಧಾನ ಇದಾಗಿದೆ.

ಹಾಸನದಲ್ಲಿ ಇಂದು ಒಂದೇ ದಿನ ‘ಹೃದಯಾಘಾತಕ್ಕೆ’ 3 ಬಲಿ : ಕಳೆದ 40 ದಿನಗಳಲ್ಲಿ 21 ಜನರು ಸಾವು

ಹಾಸನದಲ್ಲಿ ಹೃದಯಾಘಾತದಿಂದ ಮರಣ ಮೃದಂಗ ಮುಂದುವರೆದಿದ್ದು ಕಳೆದ 40 ದಿನಗಳಲ್ಲಿ ಇದುವರೆಗೂ 21 ಜನರು ಹೃದಯಘಾತದಿಂದ ಸಾವನಪ್ಪಿದ್ದಾರೆ. ಇದೀಗ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಮಹಿಳೆ ಒಬ್ಬರು ಮನೆಯಲ್ಲಿಯೇ ಕುಸಿದು ಬಿದ್ದು ಸಾವನಪ್ಪಿದ್ದಾರೆ. ಹೌದು ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆಪಿ ನಗರದ ಲೇಪಾಕ್ಷಿ (50) ಎನ್ನುವವರು ಬೆಳಿಗ್ಗೆ ಮನೆಯಲ್ಲಿದ್ದಾಗಲೇ ಸುಸ್ತು ಎಂದು ಕುಸಿದು ಬಿದಿದ್ದರು. ಲೇಪಾಕ್ಷಿ ಅವರನ್ನು ತಕ್ಷಣ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಲೇಪಾಕ್ಷಿ ಸಾವನ್ನಪ್ಪಿದ್ದಾರೆ.ಹಾಸನ ಜಿಲ್ಲೆಯಲ್ಲಿ 40 ದಿನಗಳಲ್ಲಿ ಇದುವರೆಗು 21ಜನ ಬಲಿಯಾಗಿದ್ದಾರೆ.

ಟೀ ಕುಡಿಯುತ್ತಿರುವಾಗಲೇ ಕುಸಿದು ಬಿದ್ದು ಪ್ರಾಧ್ಯಾಪಕ ಸಾವು!

ಅಲ್ಲದೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಟೀ ಕುಡಿಯುತ್ತಿರುವಾಗಲೇ ಪ್ರಾಧ್ಯಾಪಕ ಒಬ್ಬರು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಳೆನರಸೀಪುರದಲ್ಲಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಮುತ್ತಯ್ಯ (58) ಸಾವನಪ್ಪಿದ್ದಾರೆ. ಇಂದು ಬೆಳಿಗ್ಗೆ ಕಾಲೇಜಿನ ಎದುರುಗಡೆ ಇರುವ ಕ್ಯಾಂಟೀನ್ ನಲ್ಲಿ ಟೀ ಕುಡಿಯುತ್ತಿರುವಾಗ ಏಕಾಎಕಿ ಹೃದಯಘಾತದಿಂದ ಮುತ್ತಯ್ಯ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಜಮೀನಲ್ಲಿ ಉಳುಮೆ ಮಾಡುವಾಗಲೇ ಯೋಧ ಸಾವು!

ಇನ್ನು ಹಾಸನ ಜಿಲ್ಲೆಯ ಜನರಾಯಪಟ್ಟಣದಲ್ಲಿ ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಯೋಧ ಸಾವನ್ನಪ್ಪಿದ್ದಾನೇ. ಮೃತ ಯೋಧನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಎಂದು ತಿಳಿದುಬಂದಿದೆ. 18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಲೋಹಿತ್ ರಜೆಗೆಂದು ಊರಿಗೆ ತೆರಳಿದ್ದಾಗ ಜಮೀನು ಉಳುಮೆ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಭಾನುವಾರ ಸಾವನ್ನಪ್ಪಿದ್ದಾರೆ.

ಜೂ.28ರಂದು ತಮ್ಮ ಜಮೀನಿನಲ್ಲಿ ಟ್ರ್ಯಾಕ್ಟರ್ ಮೂಲಕ ಜಮೀನನ್ನು ಉಳುಮೆ ಮಾಡುವ ವೇಳೆ ಹೃದಯಾಘಾತವಾಗಿತ್ತು. ಆಗ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಹಿನ್ನೆಲೆ ಲೋಹಿತ್ ಅವರಿಗೆ ಸಣ್ಣಪುಟ್ಟ ಗಾಯಗಳೂ ಆಗಿದ್ದವು. ತಕ್ಷಣ ಸ್ಥಳೀಯರು ಲೋಹಿತ್​ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದ್ರೆ ದುರಾದೃಷ್ಟವಶಾತ್ ಚಿಕಿತ್ಸೆಗೆ ಸ್ಪಂದಿಸದೆ ಲೋಹಿತ್ ಸಾವನ್ನಪ್ಪಿದ್ದಾರೆ.

BIG NEWS : ರಾಜ್ಯದಲ್ಲಿ ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೊಂದು ಬಲಿ : ಸೆಲ್ಫಿ ವಿಡಿಯೋ ಮಾಡಿ ವ್ಯಕ್ತಿ ಆತ್ಮಹತ್ಯೆ

SSLC ವಿದ್ಯಾರ್ಥಿಗಳೇ ಗಮನಿಸಿ: ಪರೀಕ್ಷೆ-3ಕ್ಕೆ ಉಚಿತವಾಗಿ ಬಿಎಂಟಿಸಿ ಬಸ್ಸಿನಲ್ಲಿ ತೆರಳಲು ಅವಕಾಶ

Share. Facebook Twitter LinkedIn WhatsApp Email

Related Posts

ಸಾಗರದ ಕ್ರಿಯೇಟಿವ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಅಕ್ರಮ ಮರಳು ದಾಸ್ತಾನು: ಶಾಲಾ ಆಡಳಿತ ಮಂಡಳಿ ವಿರುದ್ಧ ದೂರು ದಾಖಲು

08/04/2026 8:33 PM1 Min Read

ಚಂದ್ರದ್ರೋಣ ಪರ್ವತದಲ್ಲಿ ಚಾರಣಕ್ಕೆ ಹೋಗಿದ್ದ ಬಾಲಕಿ ನಾಪತ್ತೆ: ಶೋಧಕ್ಕೆ ಅರಣ್ಯ ಇಲಾಖೆ ಬೆಂಬಲಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

08/04/2026 8:29 PM1 Min Read

ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾದರೆ ಅಧಿಕಾರಿಗಳೇ ಜವಾಬ್ದಾರರು: ಜಿಪಂ ಸಿಇಒಗಳಿಗೆ ಪ್ರಿಯಾಂಕ್‌ ಖರ್ಗೆ ಖಡಕ್ ಎಚ್ಚರಿಕೆ

08/04/2026 8:25 PM2 Mins Read
Recent News

ಸಾಗರದ ಕ್ರಿಯೇಟಿವ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಅಕ್ರಮ ಮರಳು ದಾಸ್ತಾನು: ಶಾಲಾ ಆಡಳಿತ ಮಂಡಳಿ ವಿರುದ್ಧ ದೂರು ದಾಖಲು

08/04/2026 8:33 PM

ವಿಮಾನಯಾನ ಸಂಸ್ಥೆಗಳಿಗೆ ಬಂಪರ್ ಕೊಡುಗೆ: ಲ್ಯಾಂಡಿಂಗ್ ಮತ್ತು ಪಾರ್ಕಿಂಗ್ ಶುಲ್ಕದಲ್ಲಿ ಶೇ. 25 ರಷ್ಟು ಕಡಿತ!

08/04/2026 8:30 PM

ಚಂದ್ರದ್ರೋಣ ಪರ್ವತದಲ್ಲಿ ಚಾರಣಕ್ಕೆ ಹೋಗಿದ್ದ ಬಾಲಕಿ ನಾಪತ್ತೆ: ಶೋಧಕ್ಕೆ ಅರಣ್ಯ ಇಲಾಖೆ ಬೆಂಬಲಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

08/04/2026 8:29 PM

ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾದರೆ ಅಧಿಕಾರಿಗಳೇ ಜವಾಬ್ದಾರರು: ಜಿಪಂ ಸಿಇಒಗಳಿಗೆ ಪ್ರಿಯಾಂಕ್‌ ಖರ್ಗೆ ಖಡಕ್ ಎಚ್ಚರಿಕೆ

08/04/2026 8:25 PM
State News
KARNATAKA

ಸಾಗರದ ಕ್ರಿಯೇಟಿವ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಅಕ್ರಮ ಮರಳು ದಾಸ್ತಾನು: ಶಾಲಾ ಆಡಳಿತ ಮಂಡಳಿ ವಿರುದ್ಧ ದೂರು ದಾಖಲು

By kannadanewsnow0908/04/2026 8:33 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ತಾಲೂಕಿನ ಆನಂದಪುರ ಸಮೀಪದ ಆಚಾಪುರ ಬಳಿ ಇರುವ ‘ಕ್ರಿಯೇಟಿವ್ ಇಂಟರ್ ನ್ಯಾಷನಲ್ ಸ್ಕೂಲ್’ ಆವರಣದಲ್ಲಿ ಅಕ್ರಮವಾಗಿ ಮರಳು…

ಚಂದ್ರದ್ರೋಣ ಪರ್ವತದಲ್ಲಿ ಚಾರಣಕ್ಕೆ ಹೋಗಿದ್ದ ಬಾಲಕಿ ನಾಪತ್ತೆ: ಶೋಧಕ್ಕೆ ಅರಣ್ಯ ಇಲಾಖೆ ಬೆಂಬಲಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

08/04/2026 8:29 PM

ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೊಂದರೆಯಾದರೆ ಅಧಿಕಾರಿಗಳೇ ಜವಾಬ್ದಾರರು: ಜಿಪಂ ಸಿಇಒಗಳಿಗೆ ಪ್ರಿಯಾಂಕ್‌ ಖರ್ಗೆ ಖಡಕ್ ಎಚ್ಚರಿಕೆ

08/04/2026 8:25 PM

ಜಾಗತಿಕ ನಾವೀನ್ಯತೆ ಕೇಂದ್ರವಾಗಿ ಕರ್ನಾಟಕದ ಸ್ಥಾನ ಮತ್ತಷ್ಟು ಭದ್ರ: ಸಚಿವ ಪ್ರಿಯಾಂಕ್ ಖರ್ಗೆ

08/04/2026 8:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.