Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕೇಂದ್ರ ಸರ್ಕಾರದಿಂದ ‘ಅಗತ್ಯ ವಸ್ತುಗಳ ಕಾಯ್ದೆ’ ಜಾರಿ : ಏನಿದು ಕಾನೂನು ?

11/03/2026 5:28 AM

ರಾಜ್ಯದ ಜನತೆಯ ಗಮನಕ್ಕೆ : `ವಂಶವೃಕ್ಷ ಪ್ರಮಾಣಪತ್ರ’ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

11/03/2026 5:05 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ನು ಕೇವಲ 2 ದಾಖಲೆಗಳಿದ್ದರೆ ಸಾಕು, ಕೈ ಸೇರಲಿದೆ ‘ದರಖಾಸ್ತು ಪೋಡಿ’!

11/03/2026 5:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ‘ದುರ್ನಡತೆ’ ತಡೆಗೆ ಸರ್ಕಾರ ಮಹತ್ವದ ಆದೇಶ
KARNATAKA

BIG NEWS: ರಾಜ್ಯದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ‘ದುರ್ನಡತೆ’ ತಡೆಗೆ ಸರ್ಕಾರ ಮಹತ್ವದ ಆದೇಶ

By kannadanewsnow0906/12/2025 5:42 AM

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳ ದುರ್ನಡತೆ ತಡೆಗೆ ಸರ್ಕಾರ ಮಹತ್ವದ ಕ್ರಮವಹಿಸಿದೆ. ಇದಕ್ಕಾಗಿ ಘಟಕಾಧಿಕಾರಿಗಳು ಕೆಲ ಕ್ರಮಗಳನ್ನು ಕೈಗೊಳ್ಳುವಂತೆ ಖಡಕ್ ಆದೇಶ ಮಾಡಲಾಗಿದೆ.

ಈ ಕುರಿತಂತೆ ಪೊಲೀಸ್ ಮಹಾನಿರ್ದೇಶಕರು ಹಾಗೂ ಮಹಾ ನಿರೀಕ್ಷಕರಾದಂತ ಡಾ.ಎಂ.ಎ ಸಲೀಂ ಅವರು ಆದೇಶ ಹೊರಡಿಸಿದ್ದು, ಇತ್ತೀಚೆಗೆ ಕೆಲವು ದರೋಡೆ, ಕಳ್ಳತನ ಮತ್ತು ವಂಚನೆ ಕೃತ್ಯಗಳಲ್ಲಿ ಕೆಲವು ಪೊಲೀಸ್ ಸಿಬ್ಬಂದಿಯವರುಗಳ ಹೆಸರುಗಳು ತಳಕು ಹಾಕಿಕೊಂಡಿರುವುದು ತೀರಾ ಕಳವಳಕಾರಿ ಬೆಳವಣಿಗೆಯಾಗಿದೆ. ಇಂತಹ ಪ್ರವೃತ್ತಿಗಳು ಪೊಲೀಸ್ ಇಲಾಖೆಯ ಮೇಲಿನ ವಿಶ್ವಾಸಾರ್ಹತೆಗೆ ಧಕ್ಕೆಯಾಗುವುದರೊಂದಿಗೆ ಇಲಾಖೆಯನ್ನು ಅಪಕೀರ್ತಿಗೆ ಗುರಿ ಮಾಡುತ್ತವೆ. ಈ ರೀತಿಯ ದುಷ್ಕೃತ್ಯಗಳು ಸಾರ್ವಜನಿಕರಿಗೆ ಪೊಲೀಸರ ಮೇಲಿನ ನಂಬಿಕೆಯನ್ನು ಕುಂದಿಸುವುದಲ್ಲದೆ, ಕಾನೂನು ಜಾರಿಯ ಸಂಪೂರ್ಣ ವ್ಯವಸ್ಥೆಯ ಮೂಲ ಸಿದ್ಧಾಂತಗಳನ್ನೇ ಸಂಶಯಾಸ್ಪದವಾಗಿ ನೋಡುವಂತಹ ಸನ್ನಿವೇಶವನ್ನು ನಿರ್ಮಾಣ ಮಾಡುತ್ತದೆ. ಆದ್ದರಿಂದ ಇಂತಹ ಘಟನೆಗಳನ್ನು ಸಮರ್ಥವಾಗಿ ತಡೆಗಟ್ಟಿ, ಹೊಣೆಗಾರಿಕೆಯನ್ನು ನಿಗಧಿಪಡಿಸುವ ಮೂಲಕ ಪೊಲೀಸ್ ಇಲಾಖೆಯ ಸಮಗ್ರತೆಯನ್ನು ಪುನರ್ನಿಮಿ್ರಸುವ ಕ್ರಮಗಳನ್ನು ಕೈಗೊಳ್ಳುವ ಅವಶ್ಯಕತೆ ಇದೆ ಎಂದಿದ್ದಾರೆ.

ಇತ್ತೀಚೆಗೆ ದಾವಣಗೆರೆಯಲ್ಲಿ ಒಬ್ಬ ಚಿನ್ನದ ವ್ಯಾಪಾರಿಯ ಮೇಲೆ ದರೋಡೆ ನಡೆಸಿದ ಆರೋಪದಲ್ಲಿ ಇಬ್ಬರು ಪೊಲೀಸ್ ಉಪನಿರೀಕ್ಷಕರನ್ನು ದಸ್ತಗಿರಿ ಮಾಡಲಾಗಿದೆ. ಅವರು ಸಂತ್ರಸ್ತ ವ್ಯಕ್ತಿಗೆ ತಾವಿಬ್ಬರೂ ಐಜಿ ಸ್ಯಾಡ್ ಅಧಿಕಾರಿಗಳೆಂದು ಸುಳ್ಳು ಹೇಳಿ, ಬಸ್ ನಿಲ್ದಾಣದಲ್ಲಿ ಆತನನ್ನು ವಶಕ್ಕೆ ಪಡೆದುಕೊಂಡು, ನಕಲಿ ಬಂದೂಕಿನಿಂದ ಸಂತ್ರಸ್ತ ವ್ಯಕ್ತಿಯನ್ನು ಬೆದರಿಸಿ, ಆತನಿಂದ ಸುಮಾರು 80 ಗ್ರಾಂ ಬೆಲೆಬಾಳುವ ಚಿನ್ನಾಭರಣಗಳನ್ನು ದೋಚಿ, ನಂತರ ಅದೇ ಬಸ್ ನಿಲ್ದಾಣದಲ್ಲಿ ಆತನನ್ನು ಬಿಟ್ಟು ಹೋಗಿರುತ್ತಾರೆ. ಸಂತ್ರಸ್ತ ವ್ಯಕ್ತಿಯ ಆಪ್ತ ವಲಯದ ಅಕ್ಕಸಾಲಿಗರೊಬ್ಬರ ಸಹಾಯದೊಂದಿಗೆ ಒಳಸಂಚು ರೂಪಿಸುವ ಮೂಲಕ ಈ ದರೋಡೆಯನ್ನು ಯೋಜಿತವಾಗಿತ್ತು ಎನ್ನಲಾಗಿದೆ.

ಬೆಂಗಳೂರು ನಗರದಲ್ಲಿ ನಗದು ನಿರ್ವಹಣಾ ಸೇವೆಯ (ಕ್ಯಾಷ್ ಮ್ಯಾನೇಜ್‌ಮೆಂಟ್ ಸರ್ವಿಸಸ್) ಮಾಜಿ ಸಿಬ್ಬಂದಿಯೊಂದಿಗೆ ಅತ್ಯಂತ ಕರಾರುವಕ್ಕಾಗಿ ಒಳಸಂಚು ರೂಪಿಸಿ ಕೋಟ್ಯಂತರ ರೂಪಾಯಿಗಳ ದರೋಡೆ ಮಾಡಿರುವ ಪ್ರಕರಣದಲ್ಲಿ ಬೆಂಗಳೂರು ನಗರದ ಗೋವಿಂದಪುರ ಪೊಲೀಸ್ ಠಾಣೆಯ ಪೊಲೀಸ್ ಕಾನ್ಸ್ಟೇಬಲ್ ಒಬ್ಬಾತನನ್ನು ಬಂಧಿಸಲಾಗಿದೆ. ಅತ್ಯಂತ ಎಚ್ಚರಿಕೆಯಿಂದ ಒಳಸಂಚು ರೂಪಿಸಿ, ಅತಿ ಹೆಚ್ಚು ಮೌಲ್ಯದ ನಗದು ದರೋಡೆ ಕೃತ್ಯದಲ್ಲಿ ಪೊಲೀಸರ ಸಹಭಾಗಿತ್ವವಿರುವ ಈ ಪ್ರಕರಣವು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿರುತ್ತದೆ.

ಅದೇ ರೀತಿ ಬಿ.ಪಿ.ಒ ಸಂಸ್ಥೆಯ ಮ್ಯಾನೇಜರ್‌ನ ಅಪಹರಣ, ಹಣದ ಸುಲಿಗೆ ಯತ್ನದ ಪ್ರಕರಣದಲ್ಲಿ ಮಾಲೂರಿನ ಹೆಡ್ ಕಾನ್ಸ್ಟೇಬಲ್ ಒಬ್ಬರನ್ನು ಶಂಕಿಸಿ, ಆತನನ್ನು ದಸ್ತಗಿರಿ ಮಾಡಲಾಗಿದೆ.

ಇಂತಹ ಅಪರಾಧ ಪ್ರಕರಣಗಳಲ್ಲಿ ಮತ್ತು ಅಕ್ರಮ ಚಟುವಟಿಕೆಗಳಲ್ಲಿ ಪೊಲೀಸರು ಒಳಗೊಂಡಿರುವುದು ಯಾವುದೇ ಕಾರಣಕ್ಕೂ ಒಪ್ಪಲಾಗದು. ಇಡೀ ಪೊಲೀಸ್ ಇಲಾಖೆಯ ಅಪಕೀರ್ತಿಗೆ ಕಾರಣವಾಗುವ ಇಂತಹ ಸನ್ನಿವೇಶಗಳು ಸಾರ್ವಜನಿಕರಲ್ಲಿ ಪೊಲೀಸರ ಮೇಲಿನ ವಿಶ್ವಾಸಾರ್ಹತೆಗೆ ತೀವ್ರತರವಾದ ಹಾನಿ ಮಾಡುತ್ತವೆ ಮತ್ತು ಕಾನೂನು ಜಾರಿಯ ಸಂಪೂರ್ಣ ವ್ಯವಸ್ಥೆಯ ಮೂಲ ಸಿದ್ಧಾಂತಗಳನ್ನೇ ಸಂಶಯಾಸ್ಪದವಾಗಿ ನೋಡುವಂತಹ ಸನ್ನಿವೇಶವನ್ನು ನಿರ್ಮಾಣ ಮಾಡುತ್ತದೆ.
ಅಪರಾಧ ಕೃತ್ಯಗಳಲ್ಲಿ ತೊಡಗಿಕೊಳ್ಳುವ ಪೊಲೀಸ್ ಇಲಾಖೆಯ ಪ್ರತಿಯೊಬ್ಬ ಅಧಿಕಾರಿ/ಸಿಬ್ಬಂದಿಯವರುಗಳಿಗೆ ತೀವ್ರತರವಾದ ಶಿಸ್ತಿನ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂಬ ಕಠಿಣ ಎಚ್ಚರಿಕೆಯನ್ನು ಈ ಜ್ಞಾಪನದ ಮೂಲಕ ನೀಡಲಾಗಿದೆ.

ಘಟಕಾಧಿಕಾರಿಗಳು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವುದು:-

ಘಟಕದ ಎಲ್ಲಾ ಅಧಿಕಾರಿಗಳು ಅಧೀನದ ಪೊಲೀಸ್ ಅಧಿಕಾರಿ/ಸಿಬ್ಬಂದಿಯವರುಗಳ ಪೂರ್ವಾಪರಗಳ ಪರಿಶೀಲನೆ ಮತ್ತು ಸಮಗ್ರತೆಯ ಮೌಲ್ಯಮಾಪನಗಳನ್ನು ನಿಯತವಾಗಿ ನಡೆಸುವುದು.

ನೈತಿಕ ಮಾನದಂಡಗಳು, ಕಾನೂನುಬದ್ಧ ಕರ್ತವ್ಯಗಳು, ಮತ್ತು ಭ್ರಷ್ಟಾಚಾರ/ಅಪರಾಧಗಳ ಗಂಭೀರ ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವುದು ಮತ್ತು ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.

ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರುಗಳ ದುರ್ವತ್ರನೆ, ಅಕ್ರಮ ಚಟುವಟಿಕೆಗಳು ಹಾಗೂ ಅಪರಾಧಿಕ ಕೃತ್ಯಗಳಲ್ಲಿ ತೊಡಗಿರುವ ಮಾಹಿತಿಗಳನ್ನು ತಕ್ಷಣವೇ ಪೊಲೀಸ್ ಪ್ರಧಾನ ಕಛೇರಿಗೆ ವರದಿ ಮಾಡುವುದು.

ಇಲಾಖೆಯ ಘನತೆಯನ್ನು ಕಾಪಾಡುವ ಹೊಣೆಗಾರಿಕೆ ಮತ್ತು ಸಮಗ್ರತೆಯ ಸಂಸ್ಕೃತಿಯು ಎಲ್ಲಾ ಹಂತದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರುಗಳ ಸಮಾನ ಹೊಣೆಗಾರಿಕೆ ಎಂಬುದನ್ನು ಸಾರಿ ಹೇಳುವುದು.

ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರುಗಳ ಮನೋಬಲ ಕಗ್ಗುವಿಕೆಯನ್ನು ಮತ್ತು ಇತರ ನೈತಿಕ ಲೋಪದೋಷಗಳಿಗೆ ಕಾರಣವಾಗುವ ಅಂಶಗಳಿಗೆ ಸೂಕ್ತವಾಗಿ ಮತ್ತು ಸೂಕ್ಷ್ಮವಾಗಿ ಸ್ಪಂದಿಸಿ, ಪರಿಹರಿಸಲು ಅಗತ್ಯ ಮಾರ್ಗದರ್ಶನ ಮತ್ತು ಸಲಹಾ ಕಾರ್ಯಕ್ರಮಗಳನ್ನು ಉತ್ತೇಜಿಸುವುದು.

ಪ್ರಸ್ತುತ ಜಾರಿಯಲ್ಲಿರುವ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು ಮತ್ತು ಈ ಸಂಹಿತೆಯ ಅಡ್ಡದಾರಿಗಳಿಗೆ ಆಸ್ಪದವಾಗದಂತೆ ಕ್ರಮವಹಿಸುವುದು.
ಇಲಾಖೆಯಲ್ಲಿ ದುರ್ನಡತೆಯನ್ನು ತಡೆಯುವ ಮೇಲ್ಕಂಡ ಎಲ್ಲಾ ಕ್ರಮಗಳನ್ನು ಸ್ವಯಂಪ್ರೇರಿತರಾಗಿ ಅನುಷ್ಠಾನಗೊಳಿಸುವಲ್ಲಿ ವಿಫಲರಾಗುವ ಘಟಕಾಧಿಕಾರಿಗಳ ವಿರುದ್ಧ ಘೋರ ನಿರ್ಲಕ್ಷತೆ ಎಂದು ಪರಿಗಣಿಸಿ ಅವರುಗಳನ್ನು ಇಲಾಖಾ ಶಿಸ್ತಿನ ಕ್ರಮಕ್ಕೆ ಗುರಿಪಡಿಸಲಾಗುವುದು. ಪೊಲೀಸ್ ಇಲಾಖೆಯ ಘನತೆ, ಗೌರವ ಮತ್ತು ಸಮಗ್ರತೆಗಳಲ್ಲಿನ ರಾಜಿ ಸಮಂಜಸವಲ್ಲ ಮತ್ತು ಸಹಿಸಲು ಸಾಧ್ಯವಿಲ್ಲ.

ಪೊಲೀಸ್ ಇಲಾಖೆಯ ಹಿರಿಮೆ ಮತ್ತು ಗೌರವಾದರಗಳನ್ನು ಹೆಚ್ಚಿಸುವ ಶಿಸ್ತುಬದ್ಧ ಜವಾಬ್ದಾರಿಗಳು ಘಟಕಾಧಿಕಾರಿಗಳದ್ದಾಗಿವೆ. ಈ ಸಂಸ್ಥೆಯ ಗೌರವವನ್ನು ಕಾಪಾಡುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ ಎಂಬುದನ್ನು ನಾವಾರೂ ಮರೆಯಕೂಡದು.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು..

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಯ ಗಮನಕ್ಕೆ : `ವಂಶವೃಕ್ಷ ಪ್ರಮಾಣಪತ್ರ’ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

11/03/2026 5:05 AM2 Mins Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ನು ಕೇವಲ 2 ದಾಖಲೆಗಳಿದ್ದರೆ ಸಾಕು, ಕೈ ಸೇರಲಿದೆ ‘ದರಖಾಸ್ತು ಪೋಡಿ’!

11/03/2026 5:00 AM1 Min Read

`ಸ್ಯಾಲರಿ ಅಕೌಂಟ್’ ಹೊಂದಿದ್ದೀರಾ? ಹಾಗಾದ್ರೆ ನಿಮಗೆ ಸಿಗಲಿದೆ ಈ 10 ಅದ್ಭುತ ಪ್ರಯೋಜನಗಳು !

11/03/2026 4:58 AM2 Mins Read
Recent News

BIG NEWS : ಕೇಂದ್ರ ಸರ್ಕಾರದಿಂದ ‘ಅಗತ್ಯ ವಸ್ತುಗಳ ಕಾಯ್ದೆ’ ಜಾರಿ : ಏನಿದು ಕಾನೂನು ?

11/03/2026 5:28 AM

ರಾಜ್ಯದ ಜನತೆಯ ಗಮನಕ್ಕೆ : `ವಂಶವೃಕ್ಷ ಪ್ರಮಾಣಪತ್ರ’ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

11/03/2026 5:05 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ನು ಕೇವಲ 2 ದಾಖಲೆಗಳಿದ್ದರೆ ಸಾಕು, ಕೈ ಸೇರಲಿದೆ ‘ದರಖಾಸ್ತು ಪೋಡಿ’!

11/03/2026 5:00 AM

`ಸ್ಯಾಲರಿ ಅಕೌಂಟ್’ ಹೊಂದಿದ್ದೀರಾ? ಹಾಗಾದ್ರೆ ನಿಮಗೆ ಸಿಗಲಿದೆ ಈ 10 ಅದ್ಭುತ ಪ್ರಯೋಜನಗಳು !

11/03/2026 4:58 AM
State News
KARNATAKA

ರಾಜ್ಯದ ಜನತೆಯ ಗಮನಕ್ಕೆ : `ವಂಶವೃಕ್ಷ ಪ್ರಮಾಣಪತ್ರ’ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5711/03/2026 5:05 AM KARNATAKA 2 Mins Read

ಬೆಂಗಳೂರು: ಕುಟುಂಬದ ಆಸ್ತಿ ಹಂಚಿಕೆ, ಪಿಂಚಣಿ ಸೌಲಭ್ಯ ಅಥವಾ ಸರ್ಕಾರಿ ಕೆಲಸಗಳಲ್ಲಿ ವಾರಸುದಾರಿಕೆಯನ್ನು ಸಾಬೀತುಪಡಿಸಲು ‘ವಂಶವೃಕ್ಷ’ ಅಥವಾ ‘ವಂಶಾವಳಿ ಪ್ರಮಾಣಪತ್ರ’…

ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇನ್ನು ಕೇವಲ 2 ದಾಖಲೆಗಳಿದ್ದರೆ ಸಾಕು, ಕೈ ಸೇರಲಿದೆ ‘ದರಖಾಸ್ತು ಪೋಡಿ’!

11/03/2026 5:00 AM

`ಸ್ಯಾಲರಿ ಅಕೌಂಟ್’ ಹೊಂದಿದ್ದೀರಾ? ಹಾಗಾದ್ರೆ ನಿಮಗೆ ಸಿಗಲಿದೆ ಈ 10 ಅದ್ಭುತ ಪ್ರಯೋಜನಗಳು !

11/03/2026 4:58 AM

ಕರ್ನಾಟಕದ ಗ್ರಾಮಪಂಚಾಯಿತಿಗಳಲ್ಲಿ ಸಾರ್ವಜನಿಕರಿಗೆ ಈ ಮಾಹಿತಿ ಒದಗಿಸುವುದು ಕಡ್ಡಾಯ !

11/03/2026 4:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.