ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯಲ್ಲಿ 2026ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ನಡೆಸೋದಕ್ಕೆ ಅಧಿಕಾರಿ, ಸಿಬ್ಬಂದಿಗಳನ್ನು ನೇಮಕ ಮಾಡಿ ಆದೇಶಿಸಲಾಗಿತ್ತು. ಈ ಆದೇಶವನ್ನು ದಿಢೀರ್ ಹಿಂಪಡೆಯಲಾಗಿದೆ.
ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಆಡಳಿತಾಧಿಕಾರಿ ಆದೇಶ ಮಾಡಿದ್ದು, 2026ನೇ ಸಾಲಿನ ವರ್ಗಾವಣೆ ಪ್ರಕ್ರಿಯೆ ನಡೆಸಲು ಅಧಿಕಾರಿ, ಸಿಬ್ಬಂದಿಗಳನ್ನು ನೇಮಿಸಿ ಆದೇಶಿಸಲಾಗಿತ್ತು ಎಂದಿದ್ದಾರೆ.
ದಿನಾಂಕ 16-01-2026ರಂದು ಅಧಿಕೃತ ಜ್ಞಾಪನಾ ಪತ್ರದಲ್ಲಿ ಹೊರಡಿಸಿದ್ದಂತ ಆದೇಶವನ್ನು ಈ ಕೂಡಲೇ ಹಿಂಪಡೆಯಲಾಗಿದೆ. ಸದರಿ ಕಾರ್ಯಕ್ಕೆ ನೇಮಿಸಿದ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ತಮ್ಮ ಮೂಲ ಸ್ಥಳದಲ್ಲಿಯೇ ಕಾರ್ಯ ನಿರ್ವಹಿಸುವಂತೆ ಸೂಚಿಸಿದ್ದಾರೆ.
ಶಿವಮೊಗ್ಗ: ಜ.22ರಂದು ಸೊರಬದ ‘ಉಳವಿ ವ್ಯಾಪ್ತಿ’ಯ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut








