ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅವ್ಯವಹಾರ ಸಂಬಂಧ ಸಚಿವ ಸ್ಥಾನಕ್ಕೆ ಬಿ ನಾಗೇಂದ್ರ ರಾಜೀನಾಮೆ ಸಲ್ಲಿಸಿದ್ದರು. ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ, ತಮ್ಮ ರಾಜೀನಾಮೆ ಪತ್ರವನ್ನು ನಿನ್ನೆ ಸಲ್ಲಿಸಿದ್ದರು. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಚಿವ ಬಿ ನಾಗೇಂದ್ರ ರಾಜೀನಾಮೆ ಅಂಗೀಕರಿಸಿ, ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸಿದ್ದಾರೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯ ಸಂಪುಟದ ಮೊದಲ ವಿಕೆಟ್ ಪತನಗೊಂಡಿತ್ತು. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿದ್ದಂತ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ಒಂದೇ ಸಾಲಿನಲ್ಲಿ ನನ್ನ ಸ್ವಇಚ್ಛೆಯಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರೋದಾಗಿ ಉಲ್ಲೇಖಿಸಿ, ಸಲ್ಲಿಸಿದ್ದರು.
ಬಿ.ನಾಗೇಂದ್ರ ಸಲ್ಲಿಸಿದ್ದಂತ ರಾಜೀನಾಮೆ ಪತ್ರವನ್ನು ಅಂಗೀಕರಿಸುವಂತೆ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಳುಹಿಸಿಕೊಟ್ಟಿದ್ದರು. ಇಂದು ಬಿ.ನಾಗೇಂದ್ರ ಅವರು ಸಲ್ಲಿಸಿದ್ದಂತ ಸಚಿವ ಸ್ಥಾನದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಗೀಕರಿಸಿ, ಗೆಜೆಟ್ ಅಧಿಸೂಚನೆಯಲ್ಲಿ ಪ್ರಕಟಿಸಿದ್ದಾರೆ. ಈ ಮೂಲಕ ಬಿ.ನಾಗೇಂದ್ರ ಸಚಿವ ಸ್ಥಾನಕ್ಕೆ ನೀಡಿದ್ದಂತ ರಾಜೀನಾಮೆ ಅಂಗೀಕಾರಗೊಂಡೆತೆ ಆಗಿದೆ.
ಜೂ.12ರಂದು ಚಂದ್ರಬಾಬು ನಾಯ್ಡು ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ
ಜು.13ರಂದು ರಾಜ್ಯಾದ್ಯಂತ `ರಾಷ್ಟ್ರೀಯ ಲೋಕ್ ಅದಾಲತ್’: ಈ ಎಲ್ಲಾ ಪ್ರಕರಣಗಳಿಗೆ ಸಿಗಲಿದೆ ತಕ್ಷಣ ಪರಿಹಾರ