ಬೆಂಗಳೂರು : ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು(NEP) ನಮ್ಮ ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಯ ಭವಿಷ್ಯವನ್ನು ಉಜ್ವಲ ಮತ್ತು ಸುರಕ್ಷಿತಗೊಳಿಸಲಿದೆ. ಈ ಶಿಕ್ಷಣ ನೀತಿಯನ್ನು ಜಾರಿಗೆ ತರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.
ಎಂ ಎಸ್ ರಾಮಯ್ಯ ತಾಂತ್ರಿಕ ಶಿಕ್ಷಣ ಸಂಸ್ಥೆಯ ವಜ್ರ ಮಹೋತ್ಸವದ ಕಾರ್ಯಕ್ರಮದಲ್ಲಿ ವರ್ಚುವಲ್ ಮೂಲಕ ಭಾಗವಹಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತನಾಡಿದರು.
ದೇಶದ ಅಭಿವೃದ್ಧಿಯಲ್ಲಿ ತಾಂತ್ರಿಕ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಇದು ತಂತ್ರಜ್ಞಾನದ ಸಮಯ. ತಾಂತ್ರಿಕ ಗುಣಮಟ್ಟದ ಶಿಕ್ಷಣವು ಖಂಡಿತವಾಗಿಯೂ ಯುವಕರಿಗೆ ಕೌಶಲ್ಯ ನೀಡುತ್ತದೆ ಎಂದರು.
ನಮ್ಮ ಯುವ ಕೌಶಲ್ಯ, ಪ್ರತಿಭೆ ಮತ್ತು ಶಕ್ತಿಯನ್ನು ಸಂಯೋಜಿಸುವ ಮೂಲಕ ನಾವು ಹೊಸ ಪ್ರಯತ್ನಗಳನ್ನು ಮಾಡಬೇಕು ಮತ್ತು ಇದರಲ್ಲಿ ಯುವಕರ ಪಾತ್ರವು ಮುಖ್ಯವಾಗಿದೆ ಎಂದರು. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು(NEP) ನಮ್ಮ ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಯ ಭವಿಷ್ಯವನ್ನು ಉಜ್ವಲ ಮತ್ತು ಸುರಕ್ಷಿತಗೊಳಿಸಲಿದೆ. ಈ ಶಿಕ್ಷಣ ನೀತಿಯನ್ನು ಜಾರಿಗೆ ತರುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
‘ಅತ್ಯಾಚಾರ ಆರೋಪಿ’ಗೆ ಹೈಕೋರ್ಟ್ ಜಾಮೀನು, ಬಿಡುಗಡೆಯಾದ 15 ದಿನಗಳೊಳಗೆ ‘ಮದುವೆ’ಯಾಗುವಂತೆ ಷರತ್ತು