ಕೊಪ್ಪಳ : ಇಂದು ( ಡಿ.9) ಅಂಜನಾದ್ರಿ ಬೆಟ್ಟಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಲಿದ್ದು, ಈ ಹಿನ್ನೆಲೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿರುವ ಅಂಜನಾದ್ರಿ ಬೆಟ್ಟಕ್ಕೆ ಆಗಮಿಸಲಿರುವ ರಾಜ್ಯಪಾಲರು ಹನುಮನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಂತರ ಬಳ್ಳಾರಿಗೆ ತೆರಳಲಿರುವ ರಾಜ್ಯಪಾಲರು ಶ್ರೀಕೃಷ್ಣ ದೇವರಾಯ ವಿವಿ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದು, ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್ , ಇಸ್ರೋ ಮಾಜಿ ಅಧ್ಯಕ್ಷ ಕಿರಣ್ ಕುಮಾರ್ ಸೇರಿ ಹಲವರು ಉಪಸ್ಥಿತರಿರಲಿದ್ದಾರೆ.
BIGG NEWS : ಕ್ರೀಡಾ ಸಾಧಕರಿಗೆ ಭರ್ಜರಿ ಗುಡ್ ನ್ಯೂಸ್ : ನೇರ ನೇಮಕಾತಿಯಡಿ ಸರ್ಕಾರಿ ನೌಕರಿ
BIGG NEWS : ಸನ್ನಡತೆಯ ಆಧಾರದ ಮೇಲೆ 42 ಕೈದಿಗಳಿಗೆ ಬಿಡುಗಡೆ ಭಾಗ್ಯ…!