ಕೊಪ್ಪಳ : ಇಂದು ಬೆಳಗ್ಗೆ 7.40 ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಇತ್ತೀಚಿಗಷ್ಟೇ ಅಂಜನಾದ್ರಿಯಲ್ಲಿ ಹನುಮಮಾಲಾ ವಿಸರ್ಜನೆ ಕಾರ್ಯಕ್ರಮ ನಡೆದಿತ್ತು. ಇನ್ನು ರಾಜ್ಯಪಾಲರ ಆಗಮನ ಹಿನ್ನೆಲೆ ಅಂಜನಾದ್ರಿ ಬೆಟ್ಟದಲ್ಲಿ ಬೀಗಿ ಪೋಲಿಸ್ ಭದ್ರತೆ ಆಯೋಜಿಸಲಾಗಿತ್ತು. ಇನ್ನು ಪೂಜೆ ಸಲ್ಲಿಸಿದ ಬಳಿಕ ರಾಜ್ಯಪಾಲ ಗೆಹ್ಲೋಟ್ ಬಳ್ಳಾರಿಗೆ ತೆರಳಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ