ಬೆಂಗಳೂರು: ವಿಶೇಷ ವಿಧಾನ ಮಂಡಲದ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ವಿವಾದದ ಬಳಿಕ, ರಾಜ್ಯ ಸರ್ಕಾರ ಎಚ್ಚರಿಕೆಯ ಹೆಜ್ಜೆ ಇರಿಸಿದೆ. ರಾಜ್ಯಪಾಲರ ಆಕ್ಷೇಪಕ್ಕೆ ಅವಕಾಶ ನೀಡದಂತೆ ಗಣರಾಜ್ಯೋತ್ಸವ ಭಾಷಣ ಸಿದ್ಧಪಡಿಸಿತ್ತು. ಇದನ್ನು ರಾಜ್ಯಪಾಲರ ಒಪ್ಪಿಗೆಯ ಮುದ್ರೆಗೆ ಕಳುಹಿಸಿ ಕೊಡಲಾಗಿತ್ತು. ಇದಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ಸೂಚಿಸಿದ್ದಾರೆ.
ಜನವರಿ.26, 2026ರ ಗಣರಾಜ್ಯೋತ್ಸವ ಸಂಬಂಧ ರಾಜ್ಯದ ಜನತೆ ಉದ್ದೇಶಿಸಿ ಭಾಷಣ ಮಾಡುವಂತ ಭಾಷಣವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ನಿನ್ನೆ ಲೋಕಭವನಕ್ಕೆ ಕಳುಹಿಸಿಕೊಡಲಾಗಿತ್ತು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗಣರಾಜ್ಯೋತ್ಸವ ಭಾಷಣ ಪರಿಶೀಲಿಸಿದ್ದು, ಭಾಷಣ ಓದೋದಕ್ಕೆ ಓಕೆ ಮಾಡಿ ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದಾರೆ ಎಂಬುದಾಗಿ ಸರ್ಕಾರದ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ.
ಅಂದಹಾಗೇ ಜನವರಿ.26ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯುವಂತ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ರಾಜ್ಯ ಸರ್ಕಾರ ಸಿದ್ಧಪಡಿಸಿರುವಂತ ಗಣರಾಜ್ಯೋತ್ಸವದ ಭಾಷಣ ಮಾಡಲಿದ್ದಾರೆ.
ಇನ್ಮುಂದೆ ಸರ್ಕಾರಿ ಅಧಿಕಾರಿಗಳು ‘ಜನಪ್ರತಿನಿಧಿ’ಗಳ ಪೋನ್ ಕಾಲ್ ಸ್ವೀಕರಿಸಲೇಬೇಕು: ರಾಜ್ಯ ಸರ್ಕಾರ ಖಡಕ್ ಆದೇಶ
CRIME NEWS: ಹಣಕಾಸಿನ ವಿಚಾರಕ್ಕೆ ‘ಅಣ್ಣ-ತಮ್ಮ’ನನ್ನೇ ಕೊಂದ ಸ್ನೇಹಿತ; ಹೊನ್ನಾವರ ಪೊಲೀಸರಿಂದ ಮೂವರು ಅರೆಸ್ಟ್








