ಬೆಳಗಾವಿ : ‘ಸಂಪುಟ ವಿಸ್ತರಣೆ’ ಕುರಿತು ಸಚಿವ ‘ಗೋವಿಂದ ಕಾರಜೋಳ’ ಮಹತ್ವದ ಸುಳಿವು ನೀಡಿದ್ದು, ಪಂಚರಾಜ್ಯಗಳ ಚುನಾವಣೆ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿದ್ದಾರೆ.
ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ವರಿಷ್ಟರು ಪಂಚರಾಜ್ಯ ಚುನಾವಣೆಯಲ್ಲಿ ಬ್ಯುಸಿಯಾಗಿದ್ದಾರೆ. ಈ ವಿಚಾರದ ಬಗ್ಗೆ ಸಿಎಂ ಸ್ಪಷ್ಟಪಡಿಸಿದ್ದಾರೆ. ಸಂಪುಟ ವಿಸ್ತರಣೆ ಮಾಡುವುದಾದರೆ ಬೇಗನೆ ಮಾಡಲಿ, ಮೂರು ತಿಂಗಳ ನಂತರ ಬೇಡ ಎನ್ನುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ‘ಗೋವಿಂದ ಕಾರಜೋಳ ಪ್ರತಿಕ್ರಿಯೆ ನೀಡಿದ್ದಾರೆ. ಪಂಚರಾಜ್ಯಗಳ ಚುನಾವಣೆ ಬಳಿಕ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿದ್ದಾರೆ.