ಬೆಂಗಳೂರು: ರಾಜ್ಯ ಸರ್ಕಾರ ಸರ್ಕಾರಿ ಜಾಹೀರಾತಿನಲ್ಲಿ ನೆಹರೂ ಅವರ ಭಾವಚಿತ್ರವನ್ನೇ ಕೈಬಿಟ್ಟಿದೆ. ಹೀಗಾಗಿ ನಾಳೆ ನಡೆಯುವ ರಾಜ್ಯ ಬಿಜೆಪಿ ಸರ್ಕಾರದ ( BJP Government ) 75ನೇ ಸ್ವಾತಂತ್ರ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷ ( Congress Party ) ಬಹಿಷ್ಕರಿಸಬೇಕು. ಸರ್ಕಾರದ ಕಾರ್ಯಕ್ರಮ ಬಹಿಷ್ಕಾರ ಮಾಡಿ ಇಡೀ ರಾಜ್ಯದಲ್ಲಿ ಪಕ್ಷದ ವತಿಯಿಂದ 75ನೇ ಅಮೃತ ಮಹೋತ್ಸವ ಅದ್ದೂರಿಯಾಗಿ ಆಚರಿಸಬೇಕು ಎಂಬುದಾಗಿ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ( Farmer MLC Ramesh Babu ) ಕರೆ ನೀಡಿದ್ದಾರೆ.

ಕಾಂಗ್ರೆಸ್, ಬಿಜೆಪಿಗಿಂತ ಜೆಡಿಎಸ್ ಪಕ್ಷವು ಹೆಚ್ಚು ಕ್ಷೇತ್ರಗಳಲ್ಲಿ ಜಯ – HD ಕುಮಾರಸ್ವಾಮಿ ವಿಶ್ವಾಸ

ಈ ಕುರಿತಂತೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವಂತ ಅವರು, ಯಾವುದೇ ರಾಜಕೀಯ ಪಕ್ಷ ಅಧಿಕಾರ ನಡೆಸುವಾಗ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ರಾಜಧರ್ಮ ಪಾಲಿಸಬೇಕು. ಶಾಸಕರಾಗಿ, ಸಚಿವರಾಗಿ, ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ, ವಚನಕ್ಕೆ ವಿರುದ್ಧವಾಗಿ ಸರಕಾರ ನಡೆಸುವುದು ಲಜ್ಜೆಗೆಡಿತನದ ಪರಮಾವದಿ ಎಂದು ಹೇಳಿದ್ದಾರೆ.

BREAKING NEWS: ನವ ಭಾರತ ಉದಯಿಸುವುದನ್ನು ಜಗತ್ತು ನೋಡಿದೆ – ರಾಷ್ಟ್ರಪತಿ ದ್ರೌಪದಿ ಮುರ್ಮು | President Droupadi Murmu address

ರಾಜ್ಯ ಬಿಜೆಪಿ ಸರ್ಕಾರ ಈ ದಿನ 75ನೇ ಸ್ವಾತಂತ್ರ್ಯ ಸುವರ್ಣ ಮಹೋತ್ಸವದ ಅಂಗವಾಗಿ ಜಾಹಿರಾತು ನೀಡಿರುತ್ತದೆ. ಈ ಜಾಹಿರಾತಿನಲ್ಲಿ ಸ್ವತಂತ್ರ ಸೇನಾನಿ ಮಾಜಿ ಪ್ರಧಾನಿ ಶ್ರೀ ಪಂಡಿತ್ ಜವಹರ್ ಲಾಲ್ ಭಾವಚಿತ್ರ ಮತ್ತು ವಿವರ ಪ್ರಜ್ಞಾ ಪೂರ್ವಕವಾಗಿ ಕೈ ಬಿಡಲಾಗಿದೆ. ಇದು ಈ ದೇಶದ ಸ್ವತಂತ್ರ ಹೋರಾಟಕ್ಕೆ ಮಾಡಿದ ಅತಿ ದೊಡ್ಡ ಅಪಚಾರ. ನೆಹರು ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಹುನ್ನಾರ. ಇತಿಹಾಸ ತಿರುಚುವ ಸಂಚು ಎಂದು ಕಿಡಿಕಾರಿದ್ದಾರೆ.

ಭಾರತದಲ್ಲಿ VLC ಮೀಡಿಯಾ ಏಕೆ ನಿಷೇಧಿಸಲಾಗಿದೆ.? ನೀವು ಏನು ಮಾಡಬೇಕು? ಇಲ್ಲಿದೆ ಮಾಹಿತಿ | VLC Player Is Banned In India

ಕಾಶ್ಮೀರ ಪಂಡಿತ್ ಕುಟುಂಬದ ನೆಹರು 1912ರಲ್ಲಿ ವ್ಯಾಸಂಗ ಮುಗಿಸಿ ಭಾರತಕ್ಕೆ ಬಂದು ಸ್ವತಂತ್ರ ಚಳುವಳಿಯಲ್ಲಿ ತೊಡಗಿಸಿಕೊಂಡರು. ನೆಹರು ಮಹಾತ್ಮಾ ಗಾಂಧೀಜಿಯವರ ಪ್ರತಿ ಹೋರಾಟದ ಬಾಗವಾಗಿದ್ದರು. 1916ರ ಸ್ವದೇಶೀ ಚಳುವಳಿ, 1920ರ ಅಸಹಕಾರ ಚಳುವಳಿ,1930 ಉಪ್ಪಿನ ಸತ್ಯಾಗ್ರಹ,1940 ನಾಗರೀಕ ಅವಿಧೇಯತೆ ಹೋರಾಟ, 1943-45ರ ಜೈಲು ವಾಸದ ಮೂಲಕ ಸ್ವತಂತ್ರ ಚಳುವಳಿಯ ಗಾಂಧೀಜಿ ನಂತರದ ಮುಂಚೂಣಿ ನಾಯಕರಾಗಿದ್ದರು. ಆರು ವರ್ಷ ವಿವಿಧ ಅವಧಿಗೆ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ನೆಹರು, 18 ವರ್ಷ ಈ ದೇಶದ ಪ್ರಧಾನಿ ಆಗಿ ದೇಶದ ಉನ್ನತಿಗೆ ಅಪ್ರತಿಮ ಕೊಡುಗೆ ನೀಡಿದ್ದಾರೆ. ಅವರ ಪ್ರಗತಿಪರ ಚಿಂತನೆಗಳು ಸಂಸದೀಯ ಮೌಲ್ಯಗಳು ಜನತಂತ್ರದ ಆಶಯಗಳು ಗಾಂಧೀಜಿ ಚಿಂತನೆಗಳೊಂದಿಗೆ ಸಮೀಕರಣಗೊಂಡಿದ್ದು ಭಾರತ ನಿರಂತರ ಅಭಿರುದ್ಧಿಯತ್ತ ಮುಖ ಮಾಡಲು ಕಾರಣವಾಗಿದೆ. ಇಂತಹ ಮಹಾನ್ ಚೇತನ ಪಂಡಿತ್ ಜವಾಹರ್ ನೆಹರು ಅವರ ಭಾವಚಿತ್ರ ಮತ್ತು ವಿವರಣೆ ಸರ್ಕಾರದ ಜಾಹಿರಾತಿನಲ್ಲಿ ನೀಡದೆ ಬಿಜೆಪಿ ಜನರ ಮುಂದೆ ಬೆತ್ತಲಾಗಿದೆ! ಲಜ್ಜೆಗೆಟ್ಟವರಿಗೆ ಬೆತ್ತಲಾಗುವುದು ಸಾಮಾನ್ಯ ಕ್ರಿಯೆ ಇರಬಹುದು? ಎಂದು ಪ್ರಶ್ನಿಸಿ್ದದಾರೆ.

ಸ್ವಾತಂತ್ರ್ಯದ ಜಾಹೀರಾತು ವಿವಾದ: ಸಿಎಂ ಬೊಮ್ಮಾಯಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪತ್ರ

ರಾಜ್ಯ ಬಿಜೆಪಿ ಸರ್ಕಾರದ ಈ ಲಜ್ಜೆಗೇಡಿ ಕೃತ್ಯವನ್ನು ಕಾಂಗ್ರೆಸ್ ಮತ್ತು ನಾಡಿನ ಸಮಸ್ತ ಜನ ಖಂಡಿಸ ಬೇಕಾಗಿದೆ. ಈ ನಿಟ್ಟಿನಲ್ಲಿ ನಾಳೆ ನಡೆಯುವ ರಾಜ್ಯ ಬಿಜೆಪಿ ಸರ್ಕಾರದ 75ನೇ ಸ್ವಾತಂತ್ರ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಕಾಂಗ್ರೆಸ್ ಪಕ್ಷ ಬಹಿಷ್ಕರಿಸಲು ಮನವಿ ಮಾಡುತ್ತೇನೆ. ಸರ್ಕಾರದ ಕಾರ್ಯಕ್ರಮ ಬಹಿಷ್ಕಾರ ಮಾಡಿ ಇಡೀ ರಾಜ್ಯದಲ್ಲಿ ಪಕ್ಷದ ವತಿಯಿಂದ 75ನೇ ಅಮೃತ ಮಹೋತ್ಸವ ಅದ್ದೂರಿಯಾಗಿ ಆಚರಿಸಲು ಕರೆ ನೀಡಿ. ಪಕ್ಷದ ಶಾಸಕರು, ಸಂಸದರು ಸರ್ಕಾರದ ಕಾರ್ಯಕ್ರಮ ಬಹಿಷ್ಕಾರ ಮಾಡಿ ಪಕ್ಷದ ಪ್ರತಿಭಟನೆ ದಾಖಲಿಸಬೇಕಾಗಿ ಮನವಿ ಮಾಡುತ್ತೇನೆ. ಇದು ಈ ಸಂದರ್ಭದ ಅನಿವಾರ್ಯತೆ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

Share.
Exit mobile version