Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿದ್ಯಾರ್ಥಿಗಳ ಜನಿವಾರ ಕಳಚಿದ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ನೀಡಲು ಸರ್ಕಾರ ಬದ್ಧ: DKS
KARNATAKA

ವಿದ್ಯಾರ್ಥಿಗಳ ಜನಿವಾರ ಕಳಚಿದ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ನೀಡಲು ಸರ್ಕಾರ ಬದ್ಧ: DKS

By kannadanewsnow0921/04/2025 2:20 PM

ಬೆಳ್ತಂಗಡಿ: “ವಿದ್ಯಾರ್ಥಿಗಳ ಜನಿವಾರ ಕಳಚಿಸಿರುವ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಕೊಡಲು ಸರ್ಕಾರ ಬದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಭಾನುವಾರ ಮಾತನಾಡಿದರು.

“ಧರ್ಮ ಆಚರಣೆ ವಿಚಾರದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ. ಆಯಾ ಧರ್ಮ ಉಳಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ನಮ್ಮ ಸರ್ಕಾರ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಕೆಲಸ ಮಾಡಲಿದೆ” ಎಂದು ತಿಳಿಸಿದರು.

“ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವ ಒಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ. ಕರ್ಮ ಹಲವಾದರೂ ನಿಷ್ಠೆ ಒಂದೇ, ದೇವನೊಬ್ಬ ನಾಮ ಹಲವು. ನಾವು ಹುಟ್ಟುವಾಗ ಇಂತಹುದೇ ಜಾತಿ, ಧರ್ಮದಲ್ಲಿ ಹುಟ್ಟಬೇಕು ಎಂದು ಅರ್ಜಿ ಹಾಕಿ ಹುಟ್ಟಿಲ್ಲ. ನಾವು ಜಾತಿ ಧರ್ಮ ಬೇಡ ಎಂದು ಎಷ್ಟೇ ಹೇಳಿದರೂ, ನಮ್ಮ ಹುಟ್ಟು ಹಾಗೂ ಸಾವು ನಮ್ಮ ಜಾತಿ ಹಾಗೂ ಧರ್ಮಗಳನ್ನು ನೆನಪಿಸುತ್ತದೆ” ಎಂದರು.

“ಅನೇಕರು ರಾಜಕೀಯ ಟೀಕೆ ಮಾಡುತ್ತಿದ್ದಾರೆ. ಮಾಡಕೊಳ್ಳಲಿ. ಟೀಕೆ ಮಾಡಿದರೆ ನಾವು ತಿದ್ದುಕೊಳ್ಳಲು ಅವಕಾಶ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ನಮ್ಮಲ್ಲಿ ದೋಷ ಇದ್ದರೆ ಮಾತ್ರ ತಿದ್ದುಕೊಳ್ಳಲು ಸಾಧ್ಯ” ಎಂದು ಹೇಳಿದರು.

“ಅಮ್ಮನ ನೆನಪು ಪ್ರೀತಿಯ ಮೂಲ, ಗುರುವಿನ ನೆನಪು ಜ್ಞಾನದ ಮೂಲ, ದೇವರ ನೆನಪು ಭಕ್ತಿಯ ಮೂಲ, ಈ ಮೂರರ ನೆನಪು ಮನುಷ್ಯತ್ವದ ಮೂಲ, ಮನುಷ್ಯತ್ವ ಮೋಕ್ಷಕ್ಕೆ ಮೂಲ. ಅದೇ ರೀತಿ ನಾವು ಇಂದು ಜ್ಞಾನ, ಗುರು, ದೇವರನ್ನು ಸ್ಮರಿಸಲು ಇಲ್ಲಿ ಸೇರಿದ್ದೇವೆ. ನಿಮ್ಮೆಲ್ಲರಿಗೂ ಒಳ್ಳೆಯದಾಗಲಿ ಎಂದು ಶೃಂಗೇರಿಯ ಶಾರದಾ ಪೀಠದ ಶ್ರೀಗಳು ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿದ್ದಾರೆ” ಎಂದರು.

“1983ರಲ್ಲಿ ಈ ಭಾಗದ ಜನರ ಪ್ರೋತ್ಸಾಹದೊಂದಿಗೆ ಬೆಳ್ತಂಗಡಿ ತಾಲೂಕಿನ ಒಕ್ಕಲಿಗರ ಸೇವಾ ಸಂಘದ ಟ್ರಸ್ಟ್ ನಿಂದ ಶಾಲೆ ಆರಂಭಿಸಲಾಗಿದೆ. ಶಿಕ್ಷಣ ಸಂಸ್ಥೆ ಕಟ್ಟಿರುವಈ ಸಮುದಾಯದ ಪ್ರತಿನಿಧಿಯಾಗಿ, ಉಪಮುಖ್ಯಮಂತ್ರಿಯಾಗಿ ಸರ್ಕಾರದ ಪರವಾಗಿ ಈ ಸಂಸ್ಥೆಯವರಿಗೆ ತುಂಬು ಹೃದಯದ ಅಭಿನಂದನೆ ಸಲ್ಲಿಸುತ್ತೇನೆ. ನಾನು ಅನೇಕ ಶಿಕ್ಷಣ ಸಂಸ್ಥೆಗಳನ್ನು ಕಟ್ಟಿದ್ದೇನೆ. ಅದನ್ನು ನೋಡಿಕೊಳ್ಳಲು ಸಮಯವಿಲ್ಲದ ಕಾರಣ ನನ್ನ ಮಗಳಿಗೆ ಜವಾಬ್ದಾರಿ ವಹಿಸಿದ್ದೇನೆ. ಸಮುದಾಯದ ಸೇವೆಗೆ ಈ ಸಂಸ್ಥೆ ನಡೆಸುತ್ತಿರುವ ನಿಮ್ಮ ಜತೆ ನಾನು ಇದ್ದೇನೆ ಎಂದು ಹೇಳಲು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದೇನೆ. ಈ ಸಂಸ್ಥೆಯ ಬೇಡಿಕೆಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ” ಎಂದು ಭರವಸೆ ನೀಡಿದರು.

“ಈ ಸಂಸ್ಥೆಯು ಕಡಿಮೆ ಶುಲ್ಕ ಪಡೆದು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡಲಾಗುತ್ತಿದೆ. ಎಲ್ಲರಿಗೂ ತಮಗೆ ಸಿಗುವ ಶಿಕ್ಷಣದ ಬೆಲೆ ಅರಿವಾಗಬೇಕು. ವಿದ್ಯಾ ದದಾತಿ ವಿನಯಂ ವಿನಯಾ ದದಾತಿ ಪಾತ್ರತಾಂ। ಪಾತ್ರತ್ವಂ ಧನಮಾಪ್ರೋತಿ ಧನಧರ್ಮಂ ತತಃ ಸುಖಮ್. ಅಂದರೆ ಮನುಷ್ಯನಿಗೆ ವಿದ್ಯೆ ಇದ್ದರೆ ವಿನಯ ಬರುತ್ತದೆ. ವಿನಯವಿದ್ದರೆ ಯೋಗ್ಯತೆ ಬರುತ್ತದೆ. ಯೋಗ್ಯತೆಯಿಂದ ಹಣ, ಹಣದಿಂದ ಧರ್ಮ, ಧರ್ಮದಿಂದ ಸುಖ ಪಡೆಯುತ್ತೇವೆ. ವಿದ್ಯೆ ಇದ್ದರೆ ಇದೆಲ್ಲವೂ ಸಿಗುತ್ತದೆ” ಎಂದರು.

“ನಮ್ಮ ಸಂಸ್ಕೃತಿ ನಮ್ಮ ದೇಶದ ಆಸ್ತಿ. ಇದನ್ನು ನಾವೆಲ್ಲರೂ ಉಳಿಸಿಕೊಂಡು, ಬೆಳೆಸಿಕೊಂಡು ಹೋಗಬೇಕು. ಪ್ರಪಂಚದಲ್ಲಿ ಜ್ಞಾನಕ್ಕಿಂತ ಮಿಗಿಲಾದದ್ದು ಬೇರೇನೂ ಇಲ್ಲ. ರುಪರಪಹರಿಸದ, ದಾಯಾದಿ ದಕ್ಕಿಸದ, ನೀರಿನಲ್ಲಿ ನೆನೆಯದ, ಅಗ್ನಿಯಲ್ಲಿ ಸುಡದ ಗುಪ್ತ ನಿಧಿ ಎಂದರೆ ಅದು ವಿದ್ಯೆ. ಹೀಗಾಗಿ ನಮ್ಮ ಸಮುದಾಯದ ಮಕ್ಕಳಿಗೆ ವಿದ್ಯೆ ಎಂಬ ನಿಧಿಯನ್ನು ಕೊಟ್ಟು ಅವರನ್ನು ಬಲಿಷ್ಟರನ್ನಾಗಿ ಮಾಡಲು ಈ ಸಂಘ ಮುಂದಾಗಿದೆ” ಎಂದರು.

ಮಠಗಳು, ಶಿಕ್ಷಣ ಸಂಸ್ಥೆಗಳಿಗೆ ಕೈಲಾದ ಸಹಾಯ ಮಾಡಿ

“ಸಂಪತ್ತಿಗೆ ಬೆಲೆ ಕಟ್ಟಬಹುದು, ಆದರೆ ಸರಳತೆಗೆ ಬೆಲೆ ಕಟ್ಟಲು ಆಗುವುದಿಲ್ಲ. ಸರಳತೆಗೆ ಹೆಸರಾಗಿರುವ ಪೀಠ ಶೃಂಗೇರಿ ಮಠದ ಪೀಠ. ನಿರ್ಮಲಾನಂದ ಶ್ರೀಗಳು ಸೇರಿದಂತೆ ಅನೇಕ ಸ್ವಾಮೀಜಿಗಳು ಬಂದು ನಿಮಗೆ ಆಶೀರ್ವದಿಸಿದ್ದಾರೆ. ಮನೆ ಹುಷಾರು, ಮಠ ಹುಷಾರು ಎಂದು ಹಿರಿಯರು ಹೇಳಿದ್ದಾರೆ. ನಾವು ನಮ್ಮ ಮನೆ ಕಾಪಾಡಿಕೊಳ್ಳುವಂತೆ ಮಠಗಳನ್ನು ಕಪಾಡಿಕೊಳ್ಳಬೇಕು. ಆಗ ಮಾತ್ರ ಧರ್ಮ ಉಳಿಸಲು ಸಾಧ್ಯ. ದೇವರು ನಮಗೆ ಎರಡು ಆಯ್ಕೆ ನೀಡುತ್ತಾನೆ. ಒಂದು ಕೊಟ್ಟು ಹೋಗುವುದು, ಮತ್ತೊಂದು ಬಿಟ್ಟು ಹೋಗುವುದು. ದೇವರು ವರ ಹಾಗೂ ಶಾಪ ನೀಡುವುದಿಲ್ಲ. ಕೇವಲ ಅವಕಾಶ ಮಾತ್ರ ನೀಡುತ್ತಾನೆ. ಈ ಅವಕಾಶದಲ್ಲಿ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯ. ಹೀಗಾಗಿ ಇಂತಹ ಸಂಸ್ಥೆಗಳಿಗೆ ನೀವು ನಿಮ್ಮ ಕೈಲಾದ ದಾನ ಧರ್ಮದ ಮೂಲಕ ಸಹಾಯ ಮಾಡಿ.

ಪರೋಪಕಾರಾಯ ಫಲಂತಿ ವೃಕ್ಷಾಃ ಪರೋಪಕಾರಾಯ ವಹಂತಿ ನದ್ಯಃ, ಪರೋಪಕಾರಾಯ ದುಹಂತಿ ಗಾವಃ ಪರೋಪಕಾರಾರ್ಥಮ್ ಇದಂ ಶರೀರಮ್ ಎಂಬ ಶ್ಲೋಕವಿದೆ. ಅಂದರೆ ಮರ, ನದಿ, ಹಸು ಎಲ್ಲವೂ ಪರರ ಉಪಕಾರಕ್ಕಾಗಿ ಇವೆ. ಅದೇ ರೀತಿ ನಮ್ಮ ದೇಹ ಕೂಡ ಪರೋಪಕಾರಕ್ಕೆ ಸೀಮಿತವಾಗಬೇಕು ಎಂಬುದು ಈ ಶ್ಲೋಕದ ಅರ್ಥ. ಅದೇ ರೀತಿ ನೀವು ನಿಮ್ಮ ಜೀವನದಲ್ಲಿ ಬೇರೆಯವರಿಗೆ ಸಹಾಯ ಮಾಡಿ” ಎಂದು ತಿಳಿಸಿದರು.

ಮಂಗನ ಕಾಯಿಲೆ ನಿಯಂತ್ರಣ ಕ್ರಮಕ್ಕಾಗಿ ಐಸಿಎಂಆರ್ ನಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಸೀರೋ ಸರ್ವೆ

BIG NEWS: ಎಲ್ಲಾ ಪೌರ ಕಾರ್ಮಿಕರನ್ನು ಖಾಯಂ, ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ: ಸಿಎಂ ಸಿದ್ದರಾಮಯ್ಯ ಘೋಷಣೆ

Share. Facebook Twitter LinkedIn WhatsApp Email

Related Posts

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

11/04/2026 8:25 PM2 Mins Read

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM2 Mins Read

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM2 Mins Read
Recent News

​ಬೇಸಿಗೆಯಲ್ಲಿ ಹೆಚ್ಚುತ್ತಿರುವ ‘ಎಸಿ ಶೀತ’ : ಹವಾನಿಯಂತ್ರಿತ ಗಾಳಿ ನಿಮ್ಮನ್ನು ಅನಾರೋಗ್ಯಕ್ಕೀಡು ಮಾಡಬಲ್ಲದೇ?

11/04/2026 9:12 PM

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
nitish kumar

ಬಿಹಾರದಲ್ಲಿ ನಿತೀಶ್ ಯುಗಾಂತ್ಯ: ಏಪ್ರಿಲ್ 13ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ; ಹೊಸ ನಾಯಕನ ಆಯ್ಕೆಗೆ ಕ್ಷಣಗಣನೆ!

11/04/2026 8:29 PM
State News
KARNATAKA

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

By kannadanewsnow0911/04/2026 8:25 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ವ್ಯಾಪ್ತಿಯಲ್ಲಿ ರಸ್ತೆ…

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

11/04/2026 4:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.