ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಸರ್ಕಾರಿ ನೌಕರರು ಸಿಡಿದೆದ್ದಿದ್ದಾರೆ. ರಾಜ್ಯದಲ್ಲಿ ಎನ್ ಪಿಎಸ್ ರದ್ದುಗೊಳಿಸಿ ಓಪಿಎಸ್ ಜಾರಿಗೊಳಿಸುವಂತೆ ಒತ್ತಾಯಿಸಿ ಓಪಿಎಸ್ ಹಕ್ಕೊತ್ತಾಯ ಧರಣಿಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಈ ಕುರಿತಂತೆ ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ದಿನಾಂಕ:13.10.2022 ರಿಂದ ಒಂದು ತಿಂಗಳು OPS ಸಂಕಲ್ಪ ಯಾತ್ರೆಯನ್ನು ಹಾಗೂ 14 ದಿನಗಳ ಕಾಲ OPS ಜಾರಿಗಾಗಿ ಫ್ರೀಡಂ ಪಾರ್ಕ್‌ನಲ್ಲಿ ಅಹೋ ರಾತ್ರಿ ಧರಣಿ ನಡೆಸಲಾಗಿತ್ತು ಹಾಗೂ ಜನವರಿ ತಿಂಗಳಿಂದ ಮೂರು ತಿಂಗಳ ಕಾಲ Vote for OPS ಅಭಿಯಾನವನ್ನು ನಡೆಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವು NPS ಯೋಜನೆಯನ್ನು ರದ್ದುಗೊಳಿಸುವ ಭರವಸೆಯನ್ನು ತನ್ನ ಪುಣಾಳಿಕೆಯಲ್ಲಿ ಸೇರಿಸಲಾಗಿತ್ತು ಎಂಬುದಾಗಿ ತಿಳಿಸಿದ್ದಾರೆ.
ಮುಂದುವರೆದು, ಮಾನ್ಯ ಮುಖ್ಯಮಂತ್ರಿಯವರು ಅಧಿಕಾರ ವಹಿಸಿಕೊಂಡ ತಕ್ಷಣ ನಮ್ಮ ಸಂಘದ ಪದಾಧಿಕಾರಿಗಳೊಂದಿಗೆ ದಿನಾಂಕ:13.06.2023 ರಂದು ಗ್ರಹ ಕಛೇರಿ ಕೃಷ್ಣಾದಲ್ಲಿ ಮಾನ್ಯ ಮುಖ್ಯಮಂತ್ರಿಯವರು ಸಭೆ ನಡೆಸಿ ಭರವಸೆಯನ್ನು ನೀಡಲಾಗಿತ್ತು. ಮುಂದುವರೆದು, ತಾವು ಸಹ ನಮ್ಮ ಸಂಘಟನೆಯೊಂದಿಗೆ ಸಭೆ ನಡೆಸಿ NPS ಯೋಜನೆಯನ್ನು ರದ್ದುಗೊಳಿಸುವ ಕುರಿತು ಕ್ರಮಕೈಗೊಳ್ಳುವುದಾಗಿ ಎಂದಿದ್ದಾರೆ.
ಮುಖ್ಯಮಂತ್ರಿಯವರು ದಿನಾಂಕ:06.01.2024 ರಂದು ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಮುಂದಿನ ಸಂಪುಟ ಸಭೆಯಲ್ಲಿ NPS ಯೋಜನೆಯ ರದ್ದತಿಯ ವಿಷಯವನ್ನು ಸಂಪುಟದ ಸಹದ್ಯೋಗಿಗಳೊಂದಿಗೆ ಚರ್ಚಿಸಿ, ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದರು. ಆದರೆ ಈ ನಡುವೆ ಕೇಂದ್ರ ಸರ್ಕಾರವು NPS ಬದಲು UPS ಏಕೀಕೃತ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲು ತೀರ್ಮಾನಿಸಿದ್ದು, ಇದನ್ನು ರಾಷ್ಟ್ರಮಟ್ಟದಲ್ಲಿ NMOPS ಮತ್ತು ರಾಜ್ಯದಲ್ಲಿ ನಮ್ಮ ಸಂಘಟನೆಯು ಈ ಪುಸ್ತಾವನೆಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದು, ನಮ್ಮ ಬೇಡಿಕೆಯು ಕೇವಲ ಹಳೆ ಪಿಂಚಣೆ ಯೋಜನೆಯನ್ನು ಮರುಜಾರಿಗೊಳಿಸುವುದಾಗಿದೆ ಎಂದಿದ್ದಾರೆ.
ಈ ನಡುವೆ ರಾಜ್ಯ ಸರ್ಕಾರವು ಕೆಲವು ರಾಜ್ಯಗಳಲ್ಲಿ OPS ಅನ್ನು ಜಾರಿಗೊಳಿಸಿದ್ದು, ಆ ರಾಜ್ಯಗಳಿಗೆ ಬೇಟಿ ನೀಡಿ ವರದಿ ಪಡೆದು ಪರಿಶೀಲಿಸುವ ಬಗ್ಗೆ ಸಮಿತಿಯನ್ನು ರಚಿಸಿದ್ದು, ಸರ್ಕಾರದ ಈ ಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘವು ವಿರೋಧಿಸಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ.
ದಿನಾಂಕ:19.01.2025 ರಂದು ಬೆಂಗಳೂರಿನಲ್ಲಿ ನಡೆದ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆಯು “ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ, NPS ಯೋಜನೆಯನ್ನು 2025-26ನೇ ಸಾಲಿನ ಆಯವ್ಯಯದಲ್ಲಿ ರದ್ದುಗೊಳಿಸುವ ಭರವಸೆಯು ದೊರಕದೇ ಇದ್ದಲ್ಲಿ, ದಿನಾಂಕ:07.02.2025 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘OPS ಹಕ್ಕೊತ್ತಾಯ’ ಧರಣಿ ನಡೆಸಲು ನಡೆಸಲು ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿರುತ್ತದೆ. ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆಯ ನಿರ್ಧಾರದ ಹಿನ್ನೆಲೆಯಲ್ಲಿ, 2025-26ನೇ ಸಾಲಿನ ಆಯವ್ಯಯದಲ್ಲಿ ರದ್ದುಗೊಳಿಸುವ ಭರವಸೆಯು ದೊರಕದೇ ಇದ್ದಲ್ಲಿ; ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಿಶ್ಚಿತ ಪಿಂಚಣಿಗೆ ಒತ್ತಾಯಿಸಿ, ದಿನಾಂಕ:07.02.2025 ರಂದು ‘OPS ಹಕ್ಕೊತ್ತಾಯ’ ಧರಣಿ ನಡೆಸಲು ತೀರ್ಮಾನಿಸಲಾಗಿದೆ ಎಂಬುದಾಗಿ ಹೇಳಿದ್ದಾರೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
ಶಿವಮೊಗ್ಗ: ಆನೆ ದಾಳಿಯಿಂದ ಹಾನಿಗೊಂಡಿದ್ದ ಪ್ರದೇಶಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ, ಪರಿಶೀಲನೆ