ಮಂಗಳೂರು : ಇದುವರೆಗೂ ರಾಜ್ಯದಲ್ಲಿ ಸುಮಾರು 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಆದರೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಯಾವುದೇ ಪರಿಹಾರ ವಿತರಣೆಯಾಗಿಲ್ಲ ಎಂದು ಮಂಗಳೂರು ಬಿಜೆಪಿ ಶಾಸಕ ಶಾಸಕ ವೇದವ್ಯಾಸ ಕಾಮತ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.
ಗಮನಿಸಿ: ಕೊಂಕಣ ರೈಲ್ವೆಯಿಂದ ‘ಮಾನ್ಸೂನ್ ರೈಲು ವೇಳಾಪಟ್ಟಿ’ ಜಾರಿ, ಇಲ್ಲಿದೆ ಡೀಟೆಲ್ಸ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲ ನಿರ್ವಹಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ವೇದವ್ಯಾಸ ಕಾಮತ್ ಹೇಳಿಕೆ ನೀಡಿದರು. ಕಳೆದ ಹತ್ತು ತಿಂಗಳಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಕುಂಠಿತವಾಗಿದೆ. ರಾಜ್ಯದಲ್ಲಿ 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಇದುವರೆಗೂ ಪರಿಹಾರ ಕೊಟ್ಟಿಲ್ಲ ಎಂದರು.
ಯುವ, ಮಹಿಳಾ ಮತ್ತು ಹೊಸ ಮುಖಗಳಿಗೆ ‘ಲೋಕಸಭಾ ಟಿಕೆಟ್’ ಹಂಚಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್
ರಾಜ್ಯದ ಮುಖ್ಯಮಂತ್ರಿಗಳು ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ ಅಲ್ಲದೆ ಕುಡಿಯುವ ನೀರಿನ ವಿಚಾರದಲ್ಲೂ ಕೂಡ ರಾಜಕೀಯ ಮಾಡುತ್ತಿದ್ದಾರೆ 252ಕ್ಕೂ ಹೆಚ್ಚು ತಾಲೂಕುಗಳು ಬರಬೇಡಿದ ಎಂದು ಘೋಷಣೆ ಮಾಡಿದ್ದಾರೆ ಬರಪೀಡಿತ ಪ್ರದೇಶಗಳಿಗೆ ಇದುವರೆಗೂ ಯಾವೊಬ್ಬ ಸಚಿವರು ಕೂಡ ಭೇಟಿ ನೀಡಿಲ್ಲ ಎಂದು ಕಿಡಿ ಕಾರಿದರು.