ಬೆಂಗಳೂರು: ಎಸ್ಸಿ, ಎಸ್ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಈ ಮೂಲಕ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ವರದಿಯನ್ನು ಒಪ್ಪಿಕೊಂಡಿದೆ. “SC ಮೀಸಲಾತಿಯನ್ನು ಶೇ 15 ರಿಂದ ಶೇ 17ಕ್ಕೆ ಹೆಚ್ಚಿಸಲು ಮತ್ತು ST ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ.
ಸರ್ವಪಕ್ಷ ಸಭೆಯಲ್ಲಿ ತೀರ್ಮಾಣ ಮಾಡಿದ ಹಾಗೆ ಇಂದು ಸಂಪುಟ ಸಭೆಯಲ್ಲಿ ನ್ಯಾ.ನಾಗಮೋಹನ್ ದಾಸ್ ಸಮಿತಿಯ ವರದಿಗೆ ಒಪ್ಪಿಗೆ ನೀಡಿದ್ದೇವೆ. ಇದರಲ್ಲಿ ಮುಖ್ಯವಾಗಿ ಎಸ್ ಸಿಗೆ 15 ರಿಂದ 17 ಕ್ಕೆ ಹಾಗೂ ಎಸ್ ಟಿ ಗೆ 3 ರಿಂದ 7 ಕ್ಕೆ ಹೆಚ್ಚಿಸಲು ಒಪ್ಪಿಕೊಂಡು , ಕೂಡಲೇ ಆದೇಶ ಮಾಡಲು ಹಾಗೂ ಗೆಜೆಟ್ ನೋಟಿಫಿಕೇಶನ್ ಮಾಡಲು ಮುಂದಾಗಿದ್ದೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಇನ್ನೂ, ಈ ಕಾಯಿದೆಗೆ ರಕ್ಷಣೆ ನೀಡಲು ಶೆಡ್ಯೂಲ್ 9 ನ್ನು ಸೇರಿಸಲು ಬೇಕಾದ ನಿಯಮಗಳನ್ನು ಪಾಲಿಸಲು ಸಚಿವರೊಂದಿಗೆ ಹಾಗೂ ತಜ್ಞರೊಂದಿಗೆ ಚರ್ಚೆ ಮಾಡಿ ಕೂಡಲೇ ಶಿಫಾರಸ್ಸು ಮಾಡಲು ಅನುಷ್ಟಾನ ಮಾಡಿದ್ದೇವೆ . ಪರಿಶಿಷ್ಟ ಜಾತಿ ಹಾಗೂ ಪಂಗಡ ಸಲುವಾಗಿ ನಿಗಮ ಮಾಡಲು ನಾಗಮೋಹನ್ ದಾಸ್ ವರದಿಯಲ್ಲಿ ಹೇಳಿದ್ದರು. ಇದನ್ನು ಕೂಡ ಮಾಡಲು ತೀರ್ಮಾನ ಮಾಡಲಾಗಿದೆ ಎಂದರು,.
ಶುಕ್ರವಾರ ನಡೆದಿದ್ದ ಸಭೆ: ಶುಕ್ರವಾರ ವಿಧಾನಮಂಡಲದ ಉಭಯ ಸದನಗಳ ನಾಯಕರ ಸಭೆಯಲ್ಲೂ ಕೂಡ ಎಲ್ಲಾ ನಾಯಕರುಗಳು ಮೀಸಲಾತಿ ಹೆಚ್ಚಳದ ಪರ ಒಗ್ಗಟ್ಟಿನಿಂದ ಸರ್ಕಾರಕ್ಕೆ ಮನವಿ ಮಾಡಿದ್ದವು.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಯಿತು, ಸಭೆಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಸುದಿರ್ಘವಾದಸಾಧಕ ಬಾದಕ ಸಾ ಚರ್ಚೆ ನಡೆಸಿದ ಬಳಿಕ ಈ ಬಗ್ಗೆ ಅಂತಿಮವಾದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ ಈ ಬಗ್ಗೆ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಳಿಗೆ ಮಾಹಿತಿ ನೀಡಿದ ಕಾನೂನ ಸಚಿವ ಮಾಧುಸ್ವಾಮಿ, ಎಸ್ ಸಿ, ಎಸ್ ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ನ್ಯಾ. ನಾಗಮೋಹನ್ ದಾಸ್ ವರದಿ ಅನುಷ್ಠಾನಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸರ್ಕಾರ ಕೂಡಲೇ ಆದೇಶ ಮೂಲಕ ಜಾರಿ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.
‘ಕಾಂಗ್ರೆಸ್’ ಈಶಾನ್ಯವನ್ನು ಹಿಂಸಾಚಾರ ಮತ್ತು ಅರಾಜಕತೆಗೆ ತಳ್ಳಿದೆ : ಅಮಿತ್ ಶಾ| Amit Shah in Assam
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ : ಸಿಪಿಐ ಶ್ರೀಮಂತ್ ಇಲ್ಲಾಳ್ ಆರೋಗ್ಯ ವಿಚಾರಣೆ