ಬೆಂಗಳೂರು: PSI ಹಗರಣದದಿಂದ ( PSI Recruitment Scam ) ಸಂತ್ರಸ್ತರಾಗಿರುವ ಪ್ರಾಮಾಣಿಕ ಅಭ್ಯರ್ಥಿಗಳನ್ನು ಎದುರುಗೊಳ್ಳಲು, ಅವರ ನೋವು ಆಲಿಸಲು ಧೈರ್ಯವಿಲ್ಲದೆ ಪೊಲೀಸರನ್ನು ಬಿಟ್ಟು ಹೊಡೆಸುತ್ತೀರಾ ಅರಗ ಜ್ಞಾನೇಂದ್ರ ( Araga Jnanendra ) ಅವರೇ? ಅಕ್ರಮ ನಡೆಸಿದ ಸರ್ಕಾರ ಅಪರಾಧಿ ಸ್ಥಾನದಲ್ಲಿದೆ ಆದರೆ ಶಿಕ್ಷೆ ಮಾತ್ರ ಅಭ್ಯರ್ಥಿಗಳಿಗೆ. ಅವರು ಉದ್ಯೋಗ ಕೇಳುತ್ತಿದ್ದಾರೆ ಹೊರತು ನಿಮ್ಮ ಕುರ್ಚಿಯನ್ನಲ್ಲ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ) ಕಿಡಿಕಾರಿದೆ.
ಈ ಬಗ್ಗೆ ಟ್ವಿಟ್ ಮಾಡಿರುವಂತ ಕಾಂಗ್ರೆಸ್, PSI ಅಕ್ರಮದಿಂದ ಸಂತ್ರಸ್ತರಾದ ಪ್ರಾಮಾಣಿಕ ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಸಿದ ತುಮಕೂರು ಡಿವೈಎಸ್ಪಿಯ ವಿರುದ್ಧ ಕ್ರಮ ಕೈಗೊಳ್ಳಬೇಕು. ಅರಗ ಜ್ಞಾನೇಂದ್ರ ಅವರೇ, ಅಭ್ಯರ್ಥಿಗಳನ್ನು ಭೇಟಿಯಾಗಲು, ಅವರ ನೋವು ಆಲಿಸಲು ಹಿಂದೇಟು ಹಾಕುವುದೇಕೆ? ಅವರ ಸಮಸ್ಯೆಗೆ ಇದುವರೆಗೂ ಪರಿಹಾರ ಸೂಚಿಸದಿರುವುದೇಕೆ? ಯೋಗ್ಯತೆ ಇಲ್ಲದ ಮೇಲೆ ಕುರ್ಚಿಯಿಂದ ಇಳಿಯಿರಿ ಎಂದು ಹೇಳಿದೆ.
PSI ಅಕ್ರಮದಿಂದ ಸಂತ್ರಸ್ತರಾದ ಪ್ರಾಮಾಣಿಕ ಅಭ್ಯರ್ಥಿಗಳ ಮೇಲೆ ಹಲ್ಲೆ ನಡೆಸಿದ ತುಮಕೂರು ಡಿವೈಎಸ್ಪಿಯ ವಿರುದ್ಧ ಕ್ರಮ ಕೈಗೊಳ್ಳಬೇಕು.@JnanendraAraga ಅವರೇ, ಅಭ್ಯರ್ಥಿಗಳನ್ನು ಭೇಟಿಯಾಗಲು, ಅವರ ನೋವು ಆಲಿಸಲು ಹಿಂದೇಟು ಹಾಕುವುದೇಕೆ? ಅವರ ಸಮಸ್ಯೆಗೆ ಇದುವರೆಗೂ ಪರಿಹಾರ ಸೂಚಿಸದಿರುವುದೇಕೆ?
ಯೋಗ್ಯತೆ ಇಲ್ಲದ ಮೇಲೆ ಕುರ್ಚಿಯಿಂದ ಇಳಿಯಿರಿ.
— Karnataka Congress (@INCKarnataka) November 1, 2022
ಪೊಲೀಸ್ ಕಾನ್ಸ್ಟೇಬಲ್ ಅಭ್ಯರ್ಥಿಗಳು ನೇಮಕಾತಿ ಮಾಡುವಂತೆ ಮನವಿ ಸಲ್ಲಿಸಲು ಬಂದಾಗ ಗೃಹಸಚಿವರ ಉಡಾಫೆ, ದುರಹಂಕಾರದ ನಡವಳಿಕೆ ಇದು. ಅರಗ ಜ್ಞಾನೇಂದ್ರ ಅವರೇ, ಜನರೊಂದಿಗೆ ನಡೆದುಕೊಳ್ಳುವ ರೀತಿ ಇದೇನಾ? ಉದ್ಯೋಗಕ್ಕಾಗಿ ಪರಿತಪಿಸುವ ಯುವಜನರಿಗೆ ನಿಮ್ಮ ಸ್ಪಂದನೆ ಇದೇನಾ? ಈ ದರ್ಪ, ದೌಲತ್ತುಗಳು ಆಯಸ್ಸು ಕೆಲವೇ ತಿಂಗಳುಗಳಷ್ಟೇ, ನೆನಪಿರಲಿ ಎಂದು ವಾಗ್ಧಾಳಿ ನಡೆಸಿದೆ.
ಪೊಲೀಸ್ ಕಾನ್ಸ್ಟೇಬಲ್ ಅಭ್ಯರ್ಥಿಗಳು ನೇಮಕಾತಿ ಮಾಡುವಂತೆ ಮನವಿ ಸಲ್ಲಿಸಲು ಬಂದಾಗ ಗೃಹಸಚಿವರ ಉಡಾಫೆ, ದುರಹಂಕಾರದ ನಡವಳಿಕೆ ಇದು.@JnanendraAraga ಅವರೇ, ಜನರೊಂದಿಗೆ ನಡೆದುಕೊಳ್ಳುವ ರೀತಿ ಇದೇನಾ? ಉದ್ಯೋಗಕ್ಕಾಗಿ ಪರಿತಪಿಸುವ ಯುವಜನರಿಗೆ ನಿಮ್ಮ ಸ್ಪಂದನೆ ಇದೇನಾ?
ಈ ದರ್ಪ, ದೌಲತ್ತುಗಳು ಆಯಸ್ಸು ಕೆಲವೇ ತಿಂಗಳುಗಳಷ್ಟೇ, ನೆನಪಿರಲಿ. pic.twitter.com/Xls7y2sVYD
— Karnataka Congress (@INCKarnataka) November 1, 2022