Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM

Gas Booking Rules Change : ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಬದಲಾವಣೆ ; ಇನ್ನು 21 ದಿನ ಕಾಯಲೇಬೇಕು!

07/03/2026 10:06 PM

ಹೊರಗಡೆ ಊಟ ಮಾಡಿದ ಮೇಲೆ ನಿದ್ರೆ ಆವರಿಸುತ್ತಿದೆಯೇ? ‘ಫುಡ್ ಕೋಮಾ’ ತಪ್ಪಿಸಲು ಇಲ್ಲಿವೆ 5 ಸರಳ ಸೂತ್ರಗಳು!

07/03/2026 9:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಘಜ್ನಿ, ಘೋರಿ ನಾಚುವಂತೆ ಜನರ ಮೇಲೆ ಸರಕಾರದಿಂದ ದರ ಏರಿಕೆ ದಂಡಯಾತ್ರೆ: ಹೆಚ್.ಡಿ. ಕುಮಾರಸ್ವಾಮಿ ಕಿಡಿ
KARNATAKA

ಘಜ್ನಿ, ಘೋರಿ ನಾಚುವಂತೆ ಜನರ ಮೇಲೆ ಸರಕಾರದಿಂದ ದರ ಏರಿಕೆ ದಂಡಯಾತ್ರೆ: ಹೆಚ್.ಡಿ. ಕುಮಾರಸ್ವಾಮಿ ಕಿಡಿ

By kannadanewsnow0901/04/2025 1:05 PM

ನವದೆಹಲಿ/ಬೆಂಗಳೂರು: ರಾಜ್ಯದಲ್ಲಿ ‘ದರಬೀಜಾಸುರ’ ಸರಕಾರ ಜನರ ರಕ್ತ ಹೀರುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ! ಜನರ ರಕ್ತ ಹೀರುತ್ತಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯ ಸರಕಾರ ದಿನಕ್ಕೊಂದು ಸುಳ್ಳು ಹೇಳುತ್ತಿದೆ. ತಿಂಗಳಿಗೊಂದು ದರ ಏರಿಕೆ ಮಾಡುತ್ತಿದೆ. ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್ ಕಂಪನಿ ಸರಕಾರದ ಆಡಳಿತದ ವೈಖರಿ ಇದು! ಇಂದಿನಿಂದ ಕಾಂಗ್ರೆಸ್ ಕಂಪನಿ ಸರಕಾರ ಕಸದ ಮೇಲೆಯೂ ಸೆಸ್ ವಿಧಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದರ ಏರಿಕೆಗೆ ಪಂಚ ಗ್ಯಾರೆಂಟಿಯನ್ನು ನೆಪ ಮಾಡಿಕೊಂಡಿದೆ. ಆದರೆ ಸರ್ಕಾರದ ದುರುದ್ದೇಶ: ಜನರ ಲೂಟಿ ಮಾಡುವುದಷ್ಟೇ. ಭಾರತದ ಮೇಲೆ ಆಕ್ರಮಣ ನಡೆಸಿ ನಿರಂತರ ಲೂಟಿ ಮಾಡಿದ ಮಹಮ್ಮದ್ ಘಜ್ನಿ, ಮಹಮ್ಮದ್ ಘೋರಿ ಅವರಿಬ್ಬರೂ ನಾಚುವಂತೆ ಕನ್ನಡಿಗರ ಮೇಲೆ ರಾಜ್ಯ ಕಾಂಗ್ರೆಸ್ ಸರಕಾರ ದರ ಏರಿಕೆ ದಂಡಯಾತ್ರೆ ನಡೆಸುತ್ತಿದೆ ಎಂದು ಅವರು ಆರೋಪ ಮಾಡಿದ್ದಾರೆ.

ದುರಾಡಳಿತದಿಂದ ಸಮೃದ್ಧ ಕರ್ನಾಟಕವನ್ನು ಬರ್ಬಾದ್ ಮಾಡಿರುವ ಕಾಂಗ್ರೆಸ್ ಕಂಪನಿ ಸರಕಾರ ದರಬೀಜಾಸುರ ರೂಪ ತಳೆದು ಜನರ ರಕ್ತ ಹೀರುತ್ತಿದೆ ಎಂದು ಗುರುತರ ಆರೋಪ ಮಾಡಿರುವ ಅವರು; ನೀರು, ಮೆಟ್ರೋ ರೈಲು, KSRTC ಬಸ್ ಟಿಕೆಟ್, ಹಾಲು (3 ಸಲ ದರ ಏರಿಕೆ), ವಿದ್ಯುತ್, ಮುದ್ರಾಂಕ, ಮಾರ್ಗದರ್ಶಿ ಮೌಲ್ಯ, ಅಬ್ಕಾರಿ ಸುಂಕ, ಸರ್ಕಾರಿ ಆಸ್ಪತ್ರೆಗಳಲ್ಲಿ ಹೊರ ರೋಗಗಳ ಶುಲ್ಕ, ಶವದ ಮರಣೋತ್ತರ ಪರೀಕ್ಷೆ ಶುಲ್ಕ, ವೈದ್ಯಕೀಯ ಪ್ರಮಾಣ ಪತ್ರದ ದರ, ಲ್ಯಾಬ್ ನಲ್ಲಿ ಪರೀಕ್ಷೆ ಶುಲ್ಕ, ವೃತ್ತಿಪರ ತೆರಿಗೆ, ಬಿತ್ತನೆ ಬೀಜಗಳ ದರವನ್ನು ಏರಿಕೆ ಮಾಡಿದೆ. ಇದು ದರ ಬೀಜಾಸುರ ಕಾಂಗ್ರೆಸ್ ಸರಕಾರ ಎಂದು ದೂರಿದ್ದಾರೆ.

ಇಷ್ಟು ಸಾಲದೆಂಬಂತೆ ಜನರ ಮೇಲೆ ಏಪ್ರಿಲ್ 1ರಿಂದ ಕಸದ ಸೆಸ್ (Garbage Cess) ಹೇರುತ್ತಿದೆ ದರಬೀಜಾಸುರ ಸರಕಾರ!! ಕಸ ಹೆಸರಿನಲ್ಲಿ ಕೋಟಿ ಕೋಟಿ ಸುಲಿಗೆ ಗುರಿ ಹಾಕಿಕೊಂಡಿದೆ ಎಂದಿರುವ ಸಚಿವರು; ಸರಕಾರವನ್ನು ದರ ಬೀಜಾಸುರ ಸರಕಾರ ಎಂದು ಕರೆದಿದ್ದಾರೆ ಹಾಗೂ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಗೆ ಹೋಲಿಸಿ ಕರ್ನಾಟಕ ಈಸ್ಟ್ ಇಂಡಿಯಾ ಕಾಂಗ್ರೆಸ್, ಕಾಂಗ್ರೆಸ್ ಕಂಪನಿ ಸರಕಾರ ಎಂದು ಮೂಡಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM1 Min Read

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

07/03/2026 9:37 PM1 Min Read

ಸೀ ಬರ್ಡ್ ಸಂತ್ರಸ್ಥರಿಗೆ ರೂ.27.70 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

07/03/2026 9:27 PM2 Mins Read
Recent News

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM

Gas Booking Rules Change : ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಬದಲಾವಣೆ ; ಇನ್ನು 21 ದಿನ ಕಾಯಲೇಬೇಕು!

07/03/2026 10:06 PM

ಹೊರಗಡೆ ಊಟ ಮಾಡಿದ ಮೇಲೆ ನಿದ್ರೆ ಆವರಿಸುತ್ತಿದೆಯೇ? ‘ಫುಡ್ ಕೋಮಾ’ ತಪ್ಪಿಸಲು ಇಲ್ಲಿವೆ 5 ಸರಳ ಸೂತ್ರಗಳು!

07/03/2026 9:55 PM

ದುಬೈ-ಅಬುಧಾಬಿ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ ; ಪರಿಣಾಮವೇನು.? ಎಷ್ಟು ಹಾನಿ? ಎಷ್ಟು ವಿಮಾನಗಳು ರದ್ದಾಗಿವೆ?

07/03/2026 9:45 PM
State News
KARNATAKA

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

By kannadanewsnow0907/03/2026 11:03 PM KARNATAKA 1 Min Read

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರವನ್ನು ಸುಂದರ ಮತ್ತು ಸ್ವಚ್ಛವಾಗಿಡಲು ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರನ್ನು ಗೌರವಿಸಲು ವಿಶೇಷ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ.…

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

07/03/2026 9:37 PM

ಸೀ ಬರ್ಡ್ ಸಂತ್ರಸ್ಥರಿಗೆ ರೂ.27.70 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

07/03/2026 9:27 PM

ನನಗೆ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವಲ್ಲಿ ನಂಬಿಕೆ ಇಲ್ಲ- ಮಾಜಿ ಸಚಿವ ಹರತಾಳು ಹಾಲಪ್ಪ

07/03/2026 8:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.