ಬೆಂಗಳೂರು: ರಾಜ್ಯದ ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಶಾಲೆಗಳನ್ನು ಆರಂಭಿಸಲಾಗುತ್ತಿದೆ ಅಂತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಇಂದು ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ, ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಗವರ್ನಮೆಂಟ್ ಮಾಂಟೆಸ್ಸರಿ ಆರಂಭ
ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಆರಂಭಿಸಲಾಗುತ್ತಿದೆ. ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡುವುದೇ ಇಲಾಖೆಯ ಉದ್ದೇಶ. ಈಗಾಗಲೇ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಗುಣಮಟ್ಟದ ಆಹಾರ, ಶಿಕ್ಷಕಿಯರಿಗೆ ಸೀರೆ ನೀಡಲಾಗಿದೆ. ಯಾವುದೇ ಕಾರಣಕ್ಕೂ ಅಂಗನವಾಡಿ ಶಿಕ್ಷಕಿಯರನ್ನು ತೆಗೆಯುವ ಪ್ರಶ್ನೆಯೇ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
30 ವರ್ಷಕ್ಕಿಂತ ಮೇಲ್ಪಟ್ಟ ಅಂಗನವಾಡಿ ಕೇಂದ್ರಗಳನ್ನು ಉನ್ನತ ದರ್ಜೆಗೆ ಏರಿಸಲಾಗುವುದು. ನನ್ನ ಅಧಿಕಾರ ಅವಧಿಯಲ್ಲಿ ಇಲಾಖೆಗೆ ಕೈಲಾದಷ್ಟು ಉತ್ತಮ ಕೆಲಸ ಮಾಡುವೆ. ಕಾರ್ಯಕರ್ತೆಯರ ಹೋರಾಟದ ಶಕ್ತಿಯೇ ಅಂಗನವಾಡಿ ಉನ್ನತೀಕರಣಕ್ಕೆ ಕಾರಣ ಎಂದರು.
BREAKING: ಜು.22ರಿಂದ ‘ಅಂಗನವಾಡಿ ಕೇಂದ್ರ’ಗಳಲ್ಲಿ ‘LKG, UKG ತರಗತಿ’ ಆರಂಭ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ರಾಜ್ಯದ ‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ಶೀಘ್ರವೇ ‘ಜೀವವಿಮಾ ಯೋಜನೆ’ ಜಾರಿ