ಬೆಂಗಳೂರು: ಆಯುಷ್ಮಾನ್ ಕಾರ್ಡ್ ( Ayushman Card ) ಬಳಸಲು ಸರಳ ನಿಯಮಾವಳಿಗಳನ್ನು ಅತಿ ಶೀಘ್ರದಲ್ಲಿ ಹೊರಡಿಸಲಾಗುವುದು. ಇದಲ್ಲದೇ ಸುಮಾರು 81 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ( Primary Health Center ) ನಿರ್ಮಿಸಲಾಗುತ್ತಿದೆ. ಹಿರಿಯ ನಾಗರಿಕರಿಗೆ ಆರೋಗ್ಯ ತಪಾಸಣೆ ಶಿಬಿರಗಳನ್ನು ಗ್ರಾಮೀಣ ಹಾಗೂ ತಾಲ್ಲೂಕು ಮಟ್ಟದಲ್ಲಿ ಹಾಗೂ ಬೆಂಗಳೂರಿನಲ್ಲಿ ವಲಯಮಟ್ಟದಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ( CM Basavaraja Bommai ) ತಿಳಿಸಿದ್ದಾರೆ.
ಸಮುದಾಯ ಆರೋಗ್ಯ ಕೇಂದ್ರಗಳಿಗೆ 6 ಕಮಾಂಡರ್ ಸೆಂಟರ್ ಗಳ ಜೋಡಣೆ – ಸಿಎಂ ಬಸವರಾಜ ಬೊಮ್ಮಾಯಿ
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹಿರಿಯ ನಾಗರಿಕರಿಗೆ ಕಣ್ಣಿನ ತಪಾಸಣೆ, ಅವಶ್ಯಕತೆಯಿದ್ದಲ್ಲಿ ಶಸ್ತ್ರಚಿಕಿತ್ಸೆ, ಬಡವರಿಗೆ ಉಚಿತ ಕನ್ನಡಕ ನೀಡುವ ಕಾರ್ಯಕ್ರಮ ಶೀಘ್ರದಲ್ಲಿ ಪ್ರಾರಂಭಿಸಲಾಗುವುದು. ಕಿವುಡರಿಗೆ ಕಾಕ್ಲಿಯರ್ ಇಂಪ್ಲಾಂಟ್ ವ್ಯವಸ್ಥೆಯನ್ನು ಬಡವರಿಗೆ ಉಚಿತವಾಗಿ ಪೂರೈಸಲಾಗುತ್ತಿದ್ದು, ಇದಕ್ಕಾಗಿ 500 ಕೋಟಿ ರೂ. ಮೀಸಲಿರಿಸಲಾಗಿದೆ. ಡಯಾಲಿಸಿಸ್ ಸೈಕಲ್ ಗಳನ್ನು 30 ಸಾವಿರಗಳಿಂದ 60 ಸಾವಿರಗಳನ್ನು ಹೆಚ್ಚಿಸಲಾಗಿದೆ. ಕಿಮೋಥೆರಪಿ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಆಯುಷ್ಮಾನ್ ಕಾರ್ಡ್ ಬಳಸಲು ಸರಳ ನಿಯಮಾವಳಿಗಳನ್ನು ಅತಿ ಶೀಘ್ರದಲ್ಲಿ ಹೊರಡಿಸಲಾಗುವುದು ಎಂದರು.
ರೈತರಿಗೆ ಆರೋಗ್ಯ ಸೌಲಭ್ಯ ನೀಡುವ ‘ಯಶಸ್ವಿನಿ’ ಯೋಜನೆಯನ್ನು ನವೆಂಬರ್ 1 ರಂದು ಚಾಲನೆಗೊಳಿಸಲಾಗುವುದು. ಹೀಗೆ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಕಾಳಜಿ ವಹಿಸಲಾಗಿದೆ. ಪೌಷ್ಟಿಕ ಆಹಾರ ಪೂರೈಸುವ ಜೊತೆಗೆ 4000 ಅಂಗನವಾಡಿಗಳ ಸ್ಥಾಪನೆಗೆ ಕ್ರಮ ವಹಿಸಲಾಗುತ್ತಿದೆ. ಉತ್ತಮ ಆರೋಗ್ಯಕ್ಕೆ ಸ್ವಚ್ಛತೆ ಬಹಳ ಮುಖ್ಯ. ಮುಂದಿನ ಆಗಸ್ಟ್ 15 ರೊಳಗೆ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ಇದು ‘ಸಿನಿಮಾ ಕತೆ’ಯಲ್ಲ, ‘ರಿಯಲ್ ಪೊಲೀಸ್’ ಕತೆ: ಏನು ಅಂತ ಈ ಸುದ್ದಿ ಓದಿ.! | Karnataka Police
430 ನಮ್ಮ ಕ್ಲೀನಿಕ್ಗಳನ್ನು ರಾಜ್ಯದಲ್ಲಿ ಪ್ರಾರಂಭಿಸಲಾಗುತ್ತಿದ್ದು, ಇದರಲ್ಲಿ 240 ಕ್ಲಿನಿಕ್ಗಳು ಬೆಂಗಳೂರು ನಗರದ ಪ್ರತಿಯೊಂದು ವಾರ್ಡ್ ಗಳಲ್ಲಿ ಇರಲಿದೆ. 4 ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸುವ ಕಾರ್ಯ ಈಗಾಗಲೇ ಪ್ರಾರಂಭವಾಗಿದೆ ಎಂದು ತಿಳಿಸಿದರು.