ಬೆಂಗಳೂರು: ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರವು ಮತ್ತೊಂದು ಹಗರಣವನ್ನು ವಿಶೇಷ ತನಿಖಾ ದಳದ ಅಧಿಕಾರಿಗಳಿಗೆ ವಹಿಸಿ ಅಧಿಕೃತವಾಗಿ ಆದೇಶ ಹೊರಡಿಸಿದೆ. ಅದೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಕೇಸ್ ಆಗಿದೆ.
ಇಂದು ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಅಧೀಕ್ಷಕರಾದ ಚಂದ್ರಶೇಖರ್ ಪಿ ರವರು ಅವರಾಹ್ನ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಅನುದಾನ ಹಣವು ದುರುಪಯೋಗವಾಗಿರುವುದಾಗಿ ಆರೋಪಿಸಿ ಡೆತ್ ನೋಟ್ ಬರೆದು, ದಿನಾಂಕ: 26.05.2024 ರಂದು ಆತ್ಮಹತ್ಯೆಗೆ ಶರಣಾಗಿರುವುದಾಗಿ ಮೃತರ ಪತ್ನಿಯು ನೀಡಿದ ದೂರಿನ ಮೇರೆಗೆ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪುಕರಣ ದಾಖಲಾಗಿರುತ್ತದೆ ಎಂದಿದ್ದಾರೆ.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದ ಮುಖ್ಯ ನಿಬಂಧಕರಾದ ಎ. ರಾಜಶೇಖರ್ ರವರು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಅನುದಾನ ಹಣವು ಬ್ಯಾಂಕ್ ಮೂಲಕ ದುರ್ಬಳಕೆಯಾಗಿರುವುದಾಗಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ನಗರದ ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿರುತ್ತದೆ ಎಂದು ತಿಳಿಸಿದ್ದಾರೆ.
ಈ ಮೇಲ್ಕಂಡ ಪ್ರಕರಣಗಳನ್ನು ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳ ಗಂಭೀರತೆಯನ್ನು ಸರ್ಕಾರವು ವರಿಗಣಿಸಿ ಈ ಕುರಿತು ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿ ಇರುವ ರಾಜ್ಯದ ವಿಶೇಷ ತನಿಖಾ ಸಂಸ್ಥೆಯಾದ ಸಿಐಡಿಯ ಒಂದು ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ.
ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆ ವಿನೋಬನಗರ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:83/2024 ಕಲಂ 360 ರ/ವಿ 34 ಐಪಿಸಿ ಹಾಗೂ ಬೆಂಗಳೂರು ನಗರ, ಹೈಗೌಂಡ್ ಪೊಲೀಸ್ ಠಾಣೆ ಅಪರಾಧ ಸಂಖ್ಯೆ:118/2024 ಕಲಂ 149, 409, 420, 467, 471 ಐಪಿಸಿ ಪ್ರಕರಣಗಳ ಸಮಗ್ರ ತನಿಖೆಯನ್ನು ಕೈಗೊಳ್ಳಲು ತಾಂತ್ರಿಕ ಪರಿಣಿತಿ ಇರುವ ರಾಜ್ಯದ ವಿಶೇಷ ತನಿಖಾ ಸಂಸ್ಥೆಯಾದ ಸಿಐಡಿಯ ಈ ಕೆಳಕಂಡ ಒಂದು ವಿಶೇಷ ತನಿಖಾ ತಂಡ (Special Investigation Team) ವನ್ನು ರಚಿಸಿ ಸರ್ಕಾರವು ಅದೇಶಿಸಿದೆ.
1. ಮನೀಷ್ ಖರ್ಬೀಕರ್ ಐಪಿಎಸ್, ಅಪರ ಪೊಲೀಸ್ ಮಹಾನಿರ್ದೇಶಕರು, ಆರ್ಥಿಕ ಅಪರಾಧಗಳು, ಸಿ.ಐ.ಡಿ, ಬೆಂಗಳೂರು.- ಮುಖ್ಯಸ್ಥರು
2. ಶಿವಪ್ರಕಾಶ್ ದೇವರಾಜು, ಐಪಿಎಸ್, ಉಪ ಪೊಲೀಸ್ ಆಯುಕ್ತರು, ಸಂಚಾರ ದಕ್ಷಿಣ ವಿಭಾಗ, ಬೆಂಗಳೂರು ನಗರ- ಸದಸ್ಯರು
3. ಹರಿರಾಮ್ ಶಂಕರ್ ಐಪಿಎಸ್, ಪೊಲೀಸ್ ಅಧೀಕ್ಷಕರು, ರಾಜ್ಯ ಗುಪ್ತವಾರ್ತೆ, ಬೆಂಗಳೂರು – ಸದಸ್ಯರು
4.ರಾಘವೇಂದ್ರ ಕೆ. ಹೆಗಡೆ, ಪೊಲೀಸ್ ಅಧೀಕ್ಷಕರು, ಸಿ.ಐ.ಡಿ, ಬೆಂಗಳೂರು – ಸದಸ್ಯರು
ಮೇಲ್ಕಂಡ ಎರಡು ಪ್ರಕರಣಗಳೂ ಸೇರಿದಂತೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ‘ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನಡೆದಿರುವ ಆರ್ಥಿಕ ಅವ್ಯವಹಾರಗಳ ಮತ್ತು ಸಂಬಂಧಿತ ಇತರೆ ಅವ್ಯವಹಾರ ಪ್ರಕರಣಗಳ ಕುರಿತು ರಾಜ್ಯದ ಇತರ ಪೊಲೀಸ್ ಠಾಣೆಗಳಲ್ಲಿ ದಾಖಲಾದ / ದಾಖಲಾಗಬಹುದಾದ ಎಲ್ಲ ಪ್ರಕರಣಗಳನ್ನು ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರು ಈ ವಿಶೇಷ ತನಿಖಾ ತಂಡ (Special Investigation Team) ಕ್ಕೆ ವರ್ಗಾಯಿಸುವುದು ಹಾಗೂ ವಿಶೇಷ ತನಿಖಾ ತಂಡಕ್ಕೆ ಪುಕರಣದ ತನಿಖೆಗಾಗಿ ಇತರ ಸದಸ್ಯರುಗಳ ಅವಶ್ಯಕತೆ ಇದ್ದಲ್ಲಿ ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರ ಅನುಮೋದನೆಯೊಂದಿಗೆ ತನಿಖಾ ತಂಡಕ್ಕೆ ಸೇರಿಸಿಕೊಳ್ಳುವುದು.
ವಿಶೇಷ ತನಿಖಾ ತಂಡವು(Special Investigation Team) ಸಿಐಡಿಯಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಳ್ಳುವುದು.
ಪೊಲೀಸ್ ಮಹಾನಿರ್ದೇಶಕರು, ಸಿಐಡಿ ರವರ ಮೇಲ್ವಿಚಾರಣೆಯಲ್ಲಿ ಈ ವಿಶೇಷ ತನಿಖಾ ತಂಡ (Special Investigation Team) ವು ಕಾರ್ಯನಿರ್ವಹಿಸುವುದು.
ವಿಶೇಷ ತನಿಖಾ ತಂಡವು ಮೇಲ್ಕಂಡ ಪ್ರಕರಣಗಳು ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನಡೆದಿರುವ ಆರ್ಥಿಕ ಆವ್ಯವಹಾರಗಳ ಮತ್ತು ಸಂಬಂಧಿತ ಇತರ ಅವ್ಯವಹಾರಗಳ ಸಮಗ್ರ ತನಿಖೆಯನ್ನು ನಡೆಸಿ, ತನಿಖಾ ವರದಿಯನ್ನು ಮಹಾನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರು, ಬೆಂಗಳೂರು ರವರ ಮುಖಾಂತರ ಶೀಘ್ರವಾಗಿ ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿದೆ.
ಕಾಂಗ್ರೆಸ್ ಸರಕಾರ ಕರ್ನಾಟಕ ರಾಜ್ಯವನ್ನು ಮುಸ್ಲಿಂ ರಾಜ್ಯವೆಂದು ಘೋಷಣೆ ಮಾಡಲಿ: ಕೆ.ಎಸ್ ಈಶ್ವರಪ್ಪ ಸವಾಲು
ಉದ್ಯೋಗವಾರ್ತೆ: ಶೀಘ್ರವೇ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಕ್ರಮ: ಸಿಎಂ ಸಿದ್ದರಾಮಯ್ಯ