ಬೆಂಗಳೂರು: ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಯೂನಿಫಾರ್ಮ್ ಕೊಡುವ ಬಗ್ಗೆ ತೀರ್ಮಾನಿಸಿದೆ. ಮಾಂಟೆಸ್ಸರಿ ತರಗತಿಗಳು ಆರಂಭಗೊಂಡ ನಂತರ ಅಂಗನವಾಡಿ ಹೆಸರನ್ನು ಬದಲಿಸಲು ಸರ್ಕಾರ ಚಿಂತನೆ ನಡೆಸಿದೆ. ಕರ್ನಾಟಕದ ಅಂಗನವಾಡಿ ಕೇಂದ್ರಗಳು ಇಡೀ ದೇಶಕ್ಕೆ ಮಾದರಿಯಾಗಿದ್ದು, ಅಂಗನವಾಡಿ ಕಾರ್ಯಕರ್ತರ ಹಿತರಕ್ಷಣೆಗೆ ಬದ್ಧವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಬೆಂಗಳೂರಿನ ಗೃಹಕಚೇರಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ (ಎಐಟಿಯುಸಿ) ಕಾರ್ಯಕರ್ತರು ಭೇಟಿ ಮಾಡಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.

ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸುವ ಬಗ್ಗೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಲಾಗಿದೆ. ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಚಿವರು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರ ಕಳವಳ ಅರ್ಥ ಆಗುತ್ತದೆ. ಆದರೆ, ಈಗಾಗಲೇ ಅಂಗನವಾಡಿ ಕೇಂದ್ರಗಳ ಅಸ್ತಿತ್ವದ ಬಗ್ಗೆ ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೂ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಕಾರ್ಯಕರ್ತೆಯರು ಯಾವುದೇ ಆತಂಕಕ್ಕೆ ಒಳಗಾಗುವುದು ಬೇಡ ಎಂದರು‌.

ಈ ವೇಳೆ ಅಂಗನವಾಡಿ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಜಯಮ್ಮ, ಕಾರ್ಯದರ್ಶಿ ಬಿ. ಅಮ್ಜದ್ ಸೇರಿದಂತೆ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಿವಮೊಗ್ಗ: ಜು.6ರಂದು ‘ಪ್ರೆಸ್ ಟ್ರಸ್ಟ್ ಆಫ್ ಸಾಗರ್’ದಿಂದ ‘ಪತ್ರಿಕಾ ದಿನ’ ಆಚರಣೆ

BREAKING: ಪೋಕ್ಸೋ ಕೇಸ್: ಜು.15ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ‘ಬಿಎಸ್ ಯಡಿಯೂರಪ್ಪ’ಗೆ ಸಮನ್ಸ್ ಜಾರಿ | BS Yediyurappa

Share.
Exit mobile version