ಬೆಂಗಳೂರು : ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಹಳೆಯ ಜಿಲ್ಲಾ ಆಸ್ಪತ್ರೆಯ ಕಟ್ಟಡವನ್ನು ನೆಲಸಮಗೊಳಿಸಿ ಇದೇ ಜಾಗದಲ್ಲಿ 300 ಹಾಸಿಗೆಗಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಕಳುಹಿಸಿಕೊಡಲಾಗಿದೆ. ಅನುದಾನದ ಲಭ್ಯತೆಯನ್ನು ಆಧರಿಸಿ ಕಾರವಾರದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ತಿಳಿಸಿದರು.
ಗುರುವಾರದಂದು ವಿಧಾನ ಸಭೆಯ ಪ್ರಶ್ನೋತ್ತರ ಕಲಾಪದ ವೇಳೆ ಕುಮಟಾ ಶಾಸಕರಾದ ದಿನಕರ್ ಕೇಶವಶೆಟ್ಟಿ ಇವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಯಾವುದೇ ಭೂಮಿಯನ್ನು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗೆ ಹಸ್ತಾಂತರವಾಗಿರುವುದಿಲ್ಲ ಮತ್ತು ಸದರಿ ಪ್ರಸ್ತಾವನೆಗೆಗೆ ಯಾವುದೇ ರೀತಿಯ ಅನುದಾನ ಮಂಜೂರಾಗಿರುವುದಿಲ್ಲ.
ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬೇಡಿಕೆ ಇದ್ದು ಈಗಾಗಲೇ ಇಲಾಖೆಯಿಂದ ಆಸ್ಪತ್ರೆ ನಿರ್ಮಾಣ ಕಾರ್ಯಕ್ಕೆ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದ ರೈತರ ಪಂಪ್ ಸೆಟ್ ಗಳಿಗೆ 7 ಗಂಟೆಗಳ ಕಾಲ 3 ಪೇಸ್ ವಿದ್ಯುತ್ ಸರಬರಾಜು – ಸಚಿವ ಕೆ..ಜೆ ಜಾರ್ಜ್
ರಾಜ್ಯದಲ್ಲಿ ಗಲಭೆ ಸೃಷ್ಟಿಸಿದರೇ ಸ್ವಯಂಪ್ರೇರಿತ ಕೇಸ್ ದಾಖಲು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ