ಬೆಂಗಳೂರು : ತಾಲೂಕು ಹಂತದಲ್ಲಿ ಕ್ರೀಡಾ ಇಲಾಖೆಯ 176 ಕೋಚ್ ಕಂ ಸಂಯೋಜಕರ ಹುದ್ದೆಗಳನ್ನು ಮಂಜೂರು ಮಾಡಿ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಇದೇ ಮೊದಲ ಬಾರಿಗೆ ತಾಲೂಕು ಮಟ್ಟದ ಹುದ್ದೆಗಳ ಮಂಜೂರು ಮಾಡಲಾಗಿದ್ದು, 176 ಕೋಚ್ ಕಂ ಸಂಯೋಜಕರ ಹುದ್ದೆಗಳ ಸೃಜನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 235 ಕೋಚ್ ಹುದ್ದೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು, ಆದರೆ ಸರ್ಕಾರ 176 ಹುದ್ದೆಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಹೆಚ್ಚಿನ ಮಾಹಿತಿ ಶೀಘ್ರದಲ್ಲೇ ಅಪ್ ಡೇಟ್ ಆಗಲಿದೆ.
ನವೆಂಬರ್ 1 ರಿಂದ ಸೀಟ್ ಬೆಲ್ಟ್ ಕಡ್ಡಾಯ
ನವೆಂಬರ್ 1ರಿಂದ ಜಾರಿಗೆ ಬರುವಂತೆ ದೆಹಲಿಯಲ್ಲಿ ವಾಹನ ಚಾಲನೆ ( Vehicle Driving ) ವೇಳೆಯಲ್ಲಿ ಸೀಟ್ ಬೆಲ್ಟ್ ( Seat Belt ) ಕಡ್ಡಾಯಗೊಳಿಸಲಾಗಿದೆ. ಈ ಬೆನ್ನಲ್ಲೇ ರಾಜ್ಯದಲ್ಲೂ ಸೀಟ್ ಬೆಲ್ಟ್ ಧರಿಸೋದು ಕಡ್ಡಾಯವಾಗಿದೆ. ವಾಹನ ಚಾಲನೆ ವೇಳೆಯಲ್ಲಿ ಸೀಟ್ ಬೆಲ್ಟ್ ಧರಿಸೋದು ಕಡ್ಡಾಯಗೊಳಿಸಿ ಡಿಜಿ-ಐಜಿಪಿ ಪ್ರವೀಣ್ ಸೂದ್ ( DG-IGP Praveen Sood ) ಆದೇಶ ಹೊರಡಿಸಿದ್ದಾರೆ.
ಈ ಕುರಿತಂತೆ ಇಂದು ಆದೇಶ ಹೊರಡಿಸಿರುವಂತ ಅವರು, ಇಂದಿನಿಂದಲೇ ಜಾರಿಗೆ ಬರುವಂತೆ ರಾಜ್ಯದಲ್ಲಿ ವಾಹನ ಚಾಲಾಯಿಸುವ ಸಂದರ್ಭದಲ್ಲಿ ಸೀಟ್ ಬೆಲ್ಟ್ ಧರಿಸೋದು ಕಡ್ಡಾಯಗೊಳಿಸಲಾಗಿದೆ. ಒಂದು ವೇಳೆ ಸೀಟ್ ಬೆಲ್ಟ್ ಅನ್ನು ಧರಿಸದೇ ವಾಹನವನ್ನು ಚಲಾಯಿಸಿದ್ರೇ ಅಂತವರಿಗೆ 1 ಸಾವಿರ ದಂಡ ವಿಧಿಸಲಾಗುತ್ತದೆ ಎಂದಿದ್ದಾರೆ.ಅಂದಹಾಗೇ ವಾಹನ ಚಲಾಯಿಸುವಂತ ಸಂದರ್ಭದಲ್ಲಿ ಸೀಟ್ ಬೆಲ್ಟ್ ಧರಿಸದೇ ಇದ್ದರೇ ಅಪಘಾತವಾದಂತ ಸಂದರ್ಭದಲ್ಲಿ ಏರ್ ಬ್ಯಾಗ್ ಓಪನ್ ಆಗುವುದಿಲ್ಲ. ಹೀಗೆ ಏರ್ ಬ್ಯಾಗ್ ಓಪನ್ ಆಗದೇ ಇದ್ದಾಗ ಅಪಘಾತದ ವೇಳೆಯಲ್ಲಿ ಸಾವು ನೋವು ಸಂಭವಿಸಿವೆ. ಈ ಹಿನ್ನಲೆಯಲ್ಲಿಯೇ ಕೇಂದ್ರ ಸರ್ಕಾರ ಸೀಟ್ ಬೆಲ್ಟ್ ಧರಿಸೋದು ಕಡ್ಡಾಯಗೊಳಿಸೋ ಕರಡನ್ನು ಪ್ರಕಟಿಸಿತ್ತು.
‘ಭೂತಾರಾಧನೆ’ ಹಿಂದೂ ಸಂಸ್ಕೃತಿಯ ಒಂದು ಭಾಗ : ನಟ ಚೇತನ್ ಹೇಳಿಕೆಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಟಾಂಗ್