ವಿಜಯಪುರ: ಶಾಲೆಯ ಶೌಚಾಲಯವನ್ನು ವಿದ್ಯಾರ್ಥಿಗಳಿಂದಲೇ ಕ್ಲೀನ್ ಮಾಡಿಸಿದ ಘಟನೆ ಹಸಿಯಾಗಿರೋ ಮುನ್ನವೇ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕರೊಬ್ಬರ ದರ್ಬಾರ್ ಹೊರ ಬಿದ್ದಿದೆ. ವಿದ್ಯಾರ್ಥಿಗಳಿಂದಲೇ ತಮ್ಮ ಕಾರನ್ನು ಕ್ಲೀನ್ ಮಾಡಿಸಿರೋ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣದ ಸರ್ಕಾರಿ ಶಾಸಕರ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ, ತಮ್ಮ ಕಾರನ್ನು ವಿದ್ಯಾರ್ಥಿಗಳಿಂದ ಕ್ಲೀನ್ ಮಾಡಿಸಿಕೊಂಡಿರೋ ಆರೋಪ ಕೇಳಿ ಬಂದಿದೆ.
ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಸವರಾಜ ರಕ್ಕಸಗಿ ಎಂಬುವರೇ ಶಾಲೆಯ ಮಕ್ಕಳಿಂದ ತಮ್ಮ ಕಾರನ್ನು ಕ್ಲೀನ್ ಮಾಡಿಸಿಕೊಂಡಿರೋ ಆರೋಪ ಎದುರಿಸುತ್ತಿರುವವರು ಆಗಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಕಾರನ್ನು ನೀರಿನಿಂದ ತೊಳೆಯುತ್ತಿರೋ ವೀಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ವೀಡಿಯೋ ವೈರಲ್ ಆಗುತ್ತಿದ್ದಂತೇ ಶಾಲಾ ಮುಖ್ಯ ಶಿಕ್ಷಕ ಬಸವರಾಜ ರಕ್ಕಸಗಿ ಅವರ ವಿರುದ್ಧ ಸಾರ್ವಜನಿಕರು ಅಸಮಾಧಾನ ಹೊರ ಹಾಕಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಆಗ್ರಹಿಸಿದ್ದಾರೆ.
BREAKING: ಚೆಕ್ ಬೌನ್ಸ್ ಪ್ರಕರಣ: ನಿರ್ದೇಶಕ ‘ರಾಜ್‌ಕುಮಾರ್ ಸಂತೋಷಿ’ಗೆ ಜಾಮೀನು