ಬೆಂಗಳೂರು : ಬೆಂಗಳೂರಿನಲ್ಲಿ ತ್ಯಾಜ್ಯ ವಿಲೇವಾರಿ ಹೇಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಪಿಐಎಲ್ ವಿಚಾರ ನಡೆಯುತ್ತಿದ್ದು ಈ ವೇಳೆ ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ ತ್ಯಾಜ್ಯ ಸಂಸ್ಕರಣ ಘಟಕ ಸ್ಥಾಪಿಸಲಾಗುತ್ತದೆ ಇದಕ್ಕೆ ನೂರಾರು ಎಕರೆ ಅವಶ್ಯಕತೆ ಇದ್ದು ಅದಕ್ಕೆ ಕಾಲಾವಕಾಶ ನೀಡಿ ಎಂದು ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮನವಿ ಮಾಡಿದೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರದ ಕೈಗೆ ಸಿಕ್ಕು `ತಾಲಿಬಾನ್’ ಆಗಿ ಬದಲಾಗುತ್ತಿದೆ : ಬಿಜೆಪಿ ವಾಗ್ದಾಳಿ
ಇಂದು ಬೆಂಗಳೂರಿನ ತ್ಯಾಜ್ಯ ವಿಲೇವಾರಿ ಕುರಿತಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಪಿಐಎಲ್ ವಿಚಾರಣೆ ನೆಡೆಯಿತು. ಚೆನ್ನೈನಲ್ಲಿ ಕ್ವಾರಿ ಇಂದಾದ ಹಳ್ಳದಲ್ಲಿ ಕುಡಿಯುವ ನೀರನ್ನು ಸಂಗ್ರಹಿಸುತ್ತಾರೆ.ಆದರೆ ಬೆಂಗಳೂರಲ್ಲಿ ತ್ಯಾಜ್ಯ ಸಂಗ್ರಹಿಸಿ ಪರಿಸರವನ್ನು ಹಾಳು ಮಾಡಲಾಗುತ್ತಿದೆ ಎಂದು ಬಿಬಿಎಂಪಿ ಕಸ ವಿಲೇವಾರಿಗೆ ಅರ್ಜಿದಾರರ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ : ವೈದ್ಯರ ನಿರ್ಲಕ್ಷದಿಂದ ‘ಬಾಣಂತಿ-ಮಗು’ ಸಾವು : ಕಠಿಣ ಕ್ರಮ ಕೈಗೊಳ್ಳುವಂತೆ ಕುಟುಂಬಸ್ಥರ ಆಗ್ರಹ
ಈ ವೇಳೆ ಬೆಂಗಳೂರಿನ ನಾಲ್ಕು ದಿಕ್ಕಿನಲ್ಲಿ ತ್ಯಾಜ್ಯ ಸಂಸ್ಕರಣ ಘಟಕ ಸ್ಥಾಪಿಸಲಾಗುತ್ತದೆ.ಘಟಕ ಸ್ಥಾಪನೆಗೆ ನೂರಾರು ಎಕರೆ ಜಮೀನಿನ ಅವಶ್ಯಕತೆ ಇದೆ ಈ ಬಗ್ಗೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಕಾಲಾವಕಾಶ ಕೋರಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯನ್ನು ಜೂನ್ ಮೊದಲ ವಾರಕ್ಕೆ ಹೈಕೋರ್ಟ್ ನಿಗದಿಪಡಿಸಿದೆ.