ಬೆಂಗಳೂರು: ರಾಜ್ಯ ಸರ್ಕಾರ ಸ್ವೀಕರಿಸಿರುವುದು ಕಾಂತರಾಜು ವರದಿನಾ ಜಯ ಪ್ರಕಾಶ ಹೆಗಡೆ ವರದಿನಾ ಎಂದು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಇಂದು ಮಾಧ್ಯಮಗಳಿಗೆ ಮಾತನಾಡಿದ ಅವರು, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜು ಅವರಿಗೆ ನೀಡಿದ ಆದೇಶದಲ್ಲಿ ಜಾತಿ ಗಣತಿ ಮಾಡಲು ಆದೇಶ ಇರಲಿಲ್ಲ. ಆಗ ಚುನಾವಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರದಿ ಸ್ವೀಕಾರ ಮಾಡಲಿಲ್ಲ. ಜಾತಿ ಗಣತಿ ಯಾರು ಮಾಡಬೇಕು ಎಂದು ಸುಪ್ರೀಂ ಕೋರ್ಟ್ ನಲ್ಲಿ ಐದಾರು ಅರ್ಜಿ ವಿಚಾರಣೆ ಹಂತದಲ್ಲಿವೆ ಎಂದರು.
ಈಗ ನೀಡಿರುವ ವರದಿಯಲ್ಲಿ ಕೆಲವು ಜಾತಿಗಳ ಉಪಜಾತಿಗಳನ್ನು ಬೇರ್ಪಡಿಸಿದ್ದಾರೆ. ಕೆಲವು ಜಾತಿಗಳ ಉಪ ಜಾತಿಗಳನ್ನು ಬೇರ್ಪಡಿಸಿಲ್ಲ ಎಂಬ ಮಾಹಿತಿ ಇದೆ. ಈ ವರದಿ ಬಗ್ಗೆ ಸರ್ಕಾರ ತನ್ನ ನಿಲುವು ಸ್ಪಷ್ಟಪಡಿಸಲಿ,. ಈ ವರದಿ ಸಾರ್ವಜನಿಕವಾಗಿ ಚರ್ಚೆಯಾಗಲಿ. ನಾವು ಹಿಂದುಳಿದ ವರ್ಗದವರ ವಿರೋಧಿಗಳಲ್ಲ. ಜನಸಂಖ್ಯೆಗೆ ಅನುಗುಣವಾಗಿ ಅವರಿಗೆ ನ್ಯಾಯ ಸಿಗಬೇಕು. ಈ ವರದಿ ಚುನಾವಣೆಯ ಹಿನ್ನೆಲೆಯಲ್ಲಿ ರಾಜಕೀಯಕ್ಕೆ ಬಳಕೆಯಾಗಬಾರದು ಎಂದು ಹೇಳಿದರು.
Job Alert: ‘ಉದ್ಯೋಗಾಕಾಂಕ್ಷಿ’ಗಳ ಗಮನಕ್ಕೆ: ‘KPSC’ಯಿಂದ ‘364 ಭೂಮಾಪಕರ’ ಹುದ್ದೆಗಳ ಭರ್ತಿಗೆ ಅಧಿಸೂಚನೆ
ಪಿಎಂ ‘ಜೀವನ್ ಜ್ಯೋತಿ ಬಿಮಾ ಯೋಜನೆ’ ಪ್ರಯೋಜನಗಳೇನು.? ಅರ್ಹತೆಯೇನು.? ಇಲ್ಲಿದೆ, ಮಾಹಿತಿ