ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಅಂಕುಶದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ಬಲವಂತದ ಸಾಲ ವಸೂಲಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸೋದಕ್ಕೆ ಮುಂದಾಗಿದೆ.
ಹೌದು. ಮೈಕ್ರೋ ಫೈನಾನ್ಸ್‌ಗಳ ನಿಯಮ ಬಾಹಿರ ಸಾಲ ವಸೂಲಿಗೆ ಅಂಕುಶ ಬಿದ್ದಿದೆ. ಸಾರ್ವಜನಿಕರ ಹಿತಕ್ಕಾಗಿ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿ ಮಾಡಲು ನಿರ್ಧರಿಸಲಾಗಿದೆ.
ಬಲವಂತದ ಸಾಲ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ. ಪೊಲೀಸರಿಗೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಹೊಸ ಕಾನೂನಿನಲ್ಲಿ ಅವಕಾಶ ಕಲ್ಪಿಸಿಕೊಡಲಾಗುವುದು.
ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ತೀರ್ಮಾನ ಮಾಡಲಾಗಿದ್ದು, ಸಾಲ ಪಡೆದು ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ನೊಂದವರ ಪರ ನಮ್ಮ ಸರ್ಕಾರ ನಿಂತಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಮೈಕ್ರೋ ಫೈನಾನ್ಸ್‌ಗಳ ನಿಯಮ ಬಾಹಿರ ಸಾಲ ವಸೂಲಿಗೆ ಅಂಕುಶ ಬಿದ್ದಿದೆ.
ಸಾರ್ವಜನಿಕರ ಹಿತಕ್ಕಾಗಿ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿ ಮಾಡಲು ನಿರ್ಧರಿಸಲಾಗಿದೆ.
ಬಲವಂತದ ಸಾಲ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುತ್ತದೆ.
ಪೊಲೀಸರಿಗೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲು ಹೊಸ… pic.twitter.com/IOPZGByJVu
— DIPR Karnataka (@KarnatakaVarthe) January 25, 2025
BIG NEWS: ಫೆ.8ರಿಂದ ಮಾರ್ಚ್.3ರವರೆಗೆ ವಿಧಾನಸೌಧದ ಆವರಣದಲ್ಲಿ ‘ಪುಸ್ತಕ ಮೇಳ’ ಆಯೋಜನೆ | Book Fair