ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿಸುದ್ದಿಯನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಅದೇ ಸರ್ಕಾರಿ ನೌಕರರ ಸಂಬಳ ಪ್ಯಾಕೇಜ್ ಖಾತೆಯಡಿ ಬ್ಯಾಂಕುಗಳು ನೀಡುತ್ತಿರುವ ಸೌಲಭ್ಯಗಳ ಜೊತೆಗೆ ಕಡಿಮೆ ಬಡ್ಡಿದರದಲ್ಲಿ ಗೃಹ ಸಾಲ, ವೈಯಕ್ತಿಕ ಸಾಲ ಸೌಲಭ್ಯ ಸಂಬಂಧ ಏ.15ರಂದು ಬ್ಯಾಂಕ್ ಅಧಿಕಾರಿಗಳ ಜೊತೆಗೆ ಸಭೆ ಕರೆಯಲಾಗಿದೆ.
ಈ ಸಂಬಂಧ ರಾಜ್ಯ ಸರ್ಕಾರದಿಂದ ಸಭಾ ಸೂಚನಾ ಪತ್ರವನ್ನು ಹೊರಡಿಸಲಾಗಿದ್ದು, ರಾಜ್ಯ ಸಚಿವ ಸಂಪುಟದ ತೀರ್ಮಾನಿಸಿದಂತೆ ಅಧಿಕಾರಿ, ನೌಕರರು ಮತ್ತು ಅವಲಂಬಿತ ಕುಟುಂಬದ ಸದಸ್ಯರ ಹಿತಾಸಕ್ತಿಗಳನ್ನು ರಕ್ಷಿಸುವ ಸಲುವಾಗಿ ವಿವಿಧ ಬ್ಯಾಂಕುಗಳು ಒದಗಿಸುವ ವಿಶಿಷ್ಟ ಸೌಲಭ್ಯಗಳನ್ನು ಪಡೆಯಲು ಸಹಕಾರಿಯಾಗುವಂತೆ ಸಂಬಳ ಪ್ಯಾಕೇಜ್ ಗಳ ಅಡಿಯಲ್ಲಿ ಖಾತೆಗಳನ್ನು ತೆರೆಯುವುದು, ಆಯ್ಕೆ ಮಾಡಿಕೊಳ್ಳುವುದನ್ನು ರಾಜ್ಯ ಸರ್ಕಾರವು ಕಡ್ಡಾಯಗೊಳಿಸಿದೆ ಎಂದಿದೆ.
ಸದರಿ ಯೋಜನೆಯಡಿ ಸರ್ಕಾರದ ಎಲ್ಲಾ ಅಧಿಕಾರಿಗಳು/ನೌಕರರು ಬ್ಯಾಂಕುಗಳು ನೀಡುತ್ತಿರುವ ಸಂಬಳ ಪ್ಯಾಕೇಜು ಖಾತೆಯಾಗಿ ಪರಿವರ್ತಿಸಿಕೊಳ್ಳಲು ಬ್ಯಾಂಕುಗಳು ಅನುಕೂಲ ಮಾಡಿಕೊಡ ಬೇಕಾಗಿದ್ದು, ಸದರಿ ವಿಷಯದಲ್ಲಿ ಏನಾದರೂ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ನಿವಾರಣೆ ಮಾಡುವುದು ಅವಶ್ಯಕವಾಗಿರುತ್ತದೆ ಎಂಬುದಾಗಿ ಹೇಳಿದೆ.
ಮುಂದುವರೆದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು ರಾಜ್ಯ ಸರ್ಕಾರಿ ನೌಕರರ ಪರವಾಗಿ ಬ್ಯಾಂಕುಗಳು ಸಂಬಳ ಪ್ಯಾಕೇಜು ಖಾತೆಯಾಗಿ ಪರಿವರ್ತಿಸಿಕೊಳ್ಳುವ ಅಧಿಕಾರಿ/ನೌಕರರಿಗೆ, ರಾಷ್ಟ್ರೀಕೃತ ಬ್ಯಾಂಕುಗಳು, ಗೃಹ ಸಾಲ, ವೈಯಕ್ತಿಕ ಸಾಲ ಮತ್ತು ವಾಹನ ಖರೀದಿ ಸಾಲಗಳನ್ನು ರಿಯಾಯಿತಿ ಬಡ್ಡಿ ದರದಲ್ಲಿ ನೀಡುವ ಸಂಬಂಧ ಮನವಿ ಮಾಡಿದ್ದಾರೆ ಎಂಬುದಾಗಿ ತಿಳಿಸಿದೆ.ಟ
ಈ ಹಿನ್ನೆಲೆಯಲ್ಲಿ, ಮೇಲಿನ ವಿಷಯಗಳನ್ನು ಚರ್ಚಿಸಲು ಪ್ರಮುಖ ರಾಷ್ಟ್ರೀಕೃತ ಬ್ಯಾಂಕುಗಳ ಅಧಿಕಾರಿಗಳೊಂದಿಗೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಸರ್ಕಾರದ ಕಾರ್ಯದರ್ಶಿ (ವಿತ್ತೀಯ ಸುಧಾರಣೆ) ರವರ ಅಧ್ಯಕ್ಷತೆಯಲ್ಲಿ ದಿನಾಂಕ 15.04.2025 ರಂದು ಮಧ್ಯಾಹ್ನ 4.00 ಗಂಟೆಗೆ, ಕೊಠಡಿ ಸಂಖ್ಯೆ: 701, 7ನೇ ಮಹಡಿ, ಬಹುಮಹಡಿ ಕಟ್ಟಡ, ಬೆಂಗಳೂರು ಇಲ್ಲಿ ಸಭೆಯನ್ನು ನಡೆಸಲು ತೀರ್ಮಾನಿಸಲಾಗಿದೆ. ಈ ಸಭೆಗೆ ಅಗತ್ಯ ಮಾಹಿತಿಯೊಂದಿಗೆ ತಪ್ಪದೇ ಹಾಜರಾಗುವಂತೆ ಕೋರಿದೆ.
ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ: ರಾಹುಲ್ ಗಾಂಧಿಗೆ ನೀಡಿದ್ದ ಸಮನ್ಸ್ ರದ್ದತಿಗೆ ಕೋರ್ಟ್ ನಕಾರ
ಶಾಸಕ ಶಿವರಾಜ ಪಾಟೀಲ್ ಲೊಕೇಶನ್ ಟ್ರ್ಯಾಕ್ ಆರೋಪ: ಮಾಹಿತಿ ಪಡೆದು ಕ್ರಮ- ಗೃಹ ಸಚಿವ ಡಾ.ಜಿ ಪರಮೇಶ್ವರ್