ಬೆಂಗಳೂರು: ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಮಹತ್ವದ ನಿರ್ಧಾರ ಎನ್ನುವಂತೆ, ರಾಜ್ಯಾಧ್ಯಂತ ಬೀದಿ ನಾಯಿಗಳ ಸಂತಾನ ನಿಯಂತ್ರಣ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಇಂದು ನಗರಾಭಿವೃದ್ಧಿ ಇಲಾಖೆ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಸೇವಾ ಇಲಾಖೆಯಿಂದ ಜಂಟಿ ಸುತ್ತೋಲೆ ಹೊರಡಿಸಲಾಗಿದೆ.
ಇಲಾಖೆ ಹೊರಡಿಸಿರುವಂತ ಸುತ್ತೋಲೆಯಲ್ಲಿ ರಾಜ್ಯದ ಎಲ್ಲಾ ಪುರಸಭೆ, ನಗರಸಭೆ, ಪಟ್ಟಣ ಪಂಚಾಯ್ತಿ, ನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂತಾನ ನಿಯಂತ್ರಣ( Animal Birth Control – ABC) ಯೋಜನೆಯನ್ನು ಕೈಗೊಳ್ಳುವುದು ಸಂಬಂಧ ಪಟ್ಟ ಸ್ಥಳೀಯ ಸಂಸ್ಥೆಗಳ ಆದ್ಯ ಕರ್ತವ್ಯವಾಗಿರುತ್ತದೆ ಎಂದು ಹೇಳಿದೆ.
ಈ ಯೋಜನೆಯನ್ನು ಕ್ರಮಬದ್ಧವಾಗಿ ಅನುಷ್ಠಾನಗೊಳಿಸುವುದರಿಂದ ಬೀದಿ ನಾಯಿಗಳ ಸಂಖ್ಯೆ ನಿಯಂತ್ರಣವಾಗುವುದರ ಜೊತೆಗೆ ನಾಯಿ ಕಡಿತ ಮತ್ತು ರೆಬೀಸ್ ರೋಗ ನಿಯಂತ್ರಣ ಮಾಡಲು ಸಾಧ್ಯವಾಗುವುದು ಎಂದು ತಿಳಿಸಿದೆ.
ಎಬಿಸಿ ನಿಯಮದಡಿಯಲ್ಲಿ ರಾಜ್ಯಾಧ್ಯಂತ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಣಗೊಳಿಸಲು, ಕೆಲ ಮಾರ್ಗಸೂಚಿ ಕ್ರಮಗಳನ್ನು ಕೂಡ ಇಲಾಖೆ ಹೊರಡಿಸಿದೆ.
BIGG NEWS : ಲಂಚ ಪಡೆಯುತ್ತಿದ್ದ ‘ಅಂಬೇಡ್ಕರ್ ಅಭಿವೃದ್ಧಿ ನಿಗಮ’ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ