ಬೆಂಗಳೂರು : ಪೊಲೀಸ್ ಠಾಣೆಯ ಆವರಣದಲ್ಲಿ ಬೆಂಬಲಿಗರ ಪರ ಧರಣಿ ಕುಳಿತಿದ್ದು, ಹಾಗೂ ಪಿ ಎಸ್ ಐ ಗೆ ದಮ್ಕಿ ಹಾಕಿದ ಆರೋಪದ ಅಡಿಯಲ್ಲಿ ಇದೀಗ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸಲು ಪೊಲೀಸರು ಅವರ ನಿವಾಸಕ್ಕೆ ತೆರಳಿದ್ದಾರೆ. ಈ ಕುರಿತಂತೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು ಶಾಸಕರನ್ನು ಬಂಧಿಸುವ ದುಸಾಹಸಕ್ಕೆ ಕೈ ಹಾಕಿದರೆ ಮುಂದೆ ಆಗುವಂತಹ ಅನಾಹುತಕ್ಕೆ ಸರ್ಕಾರ ಹಾಗೂ ಇಲಾಖೆ ಹೊಣೆಯಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಶಾಸಕ ಹರೀಶ್ ಪೂಂಜಾ ಬಂಧನ ಸಾಧ್ಯತೆ ವಿಚಾರವಾಗಿ ಹರೀಶ್ ಪೂಂಜಾ ಬಂಧನಕ್ಕೆ ಯತ್ನಿಸುತ್ತಿರುವುದು ಖಂಡನಿಯ. ಪೂಂಜಾ ಭಾಷಣ ನೋಡಿದ್ದೇನೆ. ಅವರ ಜೊತೆ ಚರ್ಚಿಸಿದ್ದೇನೆ. ವಿಷಯ ಮರೆಮಾಚುವ ಕೆಲಸ ಪೊಲೀಸರು ಮಾಡುತ್ತಿದ್ದಾರೆ. ಶಾಸಕರು ಉದ್ವೇಗದಲ್ಲಿ ಕೆಲವು ಮಾತುಗಳನ್ನು ಹೇಳಿದ್ದಾರೆ ಅದು ಸರಿಯಲ್ಲ ಎಂದು ಪೂಂಜಾರಿಗು ಗೊತ್ತಾಗಿದೆ.
ಪದೇ ಪದೇ ಬಿಜೆಪಿಗರ ಮೇಲೆ ದಬ್ಬಾಳಿಕೆ ಸಹಿಸಲು ಆಗುವುದಿಲ್ಲ. ಶಾಸಕರನ್ನು ಅರೆಸ್ಟ್ ಮಾಡುವದು ಸಾಹಸಕ್ಕೆ ಕೈ ಹಾಕಿದರೆ ಮುಂದಾಗುವುದಕ್ಕೆಲ್ಲ ಸರ್ಕಾರ ಇಲಾಖೆ ಹೊಣೆ ಆಗುತ್ತದೆ. ಪೊಲೀಸರಿಗೆ ನಾನು ಎಚ್ಚರಿಕೆ ಕೊಡುತ್ತಿದ್ದೇನೆ. ಕಾನೂನು ಸುವ್ಯವಸ್ಥೆ ಅಲೆಗಡಲು ನೀವೇ ಕುಮ್ಮಕ್ಕು ಕೊಡುತ್ತಿದ್ದೀರಿ ಶಶಿ ರಾಜ್ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಶಾಸಕರ ಬಂಧನಕ್ಕೆ ಮುಂದಾಗುವುದನ್ನು ಕೈಬಿಡಬೇಕು ಗೃಹ ಸಚಿವರು ಎಸ್ಪಿ ಜೊತೆ ಮಾತನಾಡಿ ಸೂಚನೆ ಕೊಡಬೇಕು ಎಂದು ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದರು.