ಸುಭಾಷಿತ :

Wednesday, January 22 , 2020 12:12 PM

ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ಯಶ್ : ರಾಕಿಂಗ್ ಸ್ಟಾರ್ ಗೆ ಜೀ ಕ್ಯೂ ಇಂಡಿಯಾ ಪ್ರಶಸ್ತಿ ನೀಡಿ ಗೌರವ


Tuesday, November 12th, 2019 12:27 pm

ಸ್ಪೆಷಲ್ ಡೆಸ್ಕ್ : ಕೆಜಿಎಫ್ ಚಿತ್ರದ ಮೂಲದ ದೇಶಾದ್ಯಂತ ಹೆಸರುವಾಸಿಯಾಗಿರುವ ದಿ ಜೀ ಕ್ಯೂ 50′ ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರ ಪಟ್ಟಿಯಲ್ಲಿ ರಾಕಿಂಗ್ ಸ್ಟಾರ್ ಯಶ್ ಕೂಡ ಸ್ಥಾನ ಪಡೆದಿದ್ದಾರೆ.

50 ಅತ್ಯಂತ ಪ್ರಭಾವಶಾಲಿಗಳಲ್ಲಿ ಹೆಸರು ಪಡೆದ ಏಕೈಕ ಕನ್ನಡಿಗ ಎಂದರೆ ಅದು ಯಶ್ . ‘ಕೆಜಿಎಫ್’ ಸಿನಿಮಾ ಮೂಲಕ ಯಶ್ ನ್ಯಾಶನಲ್ ಸ್ಟಾರ್ ಆಗಿ ಹೊರಹೊಮ್ಮಿದ್ದರು. ಬಾಲಿವುಡ್ ನಿರ್ದೇಶಕ ಕರಣ್ ಜೋಹರ್ ಅವರು ಯಶ್‌ಗೆ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಮುಂಬೈನಲ್ಲಿ ನಡೆದ ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು ಭಾಗವಹಿಸಿದ್ದರು. ವಿವಿಧ ಕ್ಷೇತ್ರದಲ್ಲಿ ಯುವಕರಲ್ಲಿ ಸಂಚಲನ ಮೂಡಿಸಿದ ಭಾರತದ 50 ಶ್ರೇಷ್ಠ ಯುವ ಪ್ರಭಾವಶಾಲಿಗಳಿಗೆ ಜೀ ಕ್ಯೂ ಇಂಡಿಯಾ ಪ್ರಶಸ್ತಿಯನ್ನ ನೀಡಿ ಪುರಸ್ಕರಿಸಿದೆ.

ಅಮೆರಿಕಾದ ನ್ಯೂಯಾರ್ಕ್ ಮೂಲದ ಅಂತರಾಷ್ಟ್ರೀಯ ಜಿ ಕ್ಯೂ ಪುರುಷರ ಮಾಸ ಪತ್ರಿಕೆ, ದಿ ಜಿ ಕ್ಯೂ ಇಂಡಿಯಾ ಆಯೋಜಿಸಿದ್ದ, ಜಿಕ್ಯೂ 50 ಅತ್ಯಂತ ಪ್ರಭಾವಶಾಲಿ ಯುವ ಭಾರತೀಯರು ಪಟ್ಟಿಯಲ್ಲಿ ರಾಕಿಂಗ್ ಸ್ಟಾರ್ ಯಶ್ ಸ್ಥಾನ ಪಡೆದುಕೊಂಡಿದ್ದಾರೆ.

ಯಶ್ ಅವರು ಕೆಜಿಎಫ್ ಚಿತ್ರದ ಮೂಲಕ ದೇಶಾದ್ಯಂತ ಸುದ್ದಿಯಾಗಿದ್ದರು. ಇದೀಗ ಅವರಿಗೆ ಪ್ರತಿಷ್ಠಿತ ‘ದಿ ಜೀ ಕ್ಯೂ 50’ ಗೌರವ ಕೂಡ ಲಭಿಸಿದೆ. .

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions