ಚಿತ್ರದುರ್ಗ: ಗ್ರಾಮ ಪಂಚಾಯ್ತಿ ಸದಸ್ಯನ ವಿರುದ್ಧ ಜಾತಿ ನಿಂದನೆ, ಲೈಂಗಿಕ ದೌರ್ಜನ್ಯದ ಆರೋಪ ಕೇಳಿ ಬಂದಿದೆ. ಈ ಸಂಬಂಧ ದೂರು ಕೂಡ ದಾಖಲಾಗಿದ್ದು, ಪೊಲೀಸರು ಗ್ರಾಮ ಪಂಚಾಯ್ತಿ ಸದಸ್ಯನನ್ನು ಬಂಧಿಸಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ಗ್ರಾಮ ಪಂಚಾಯ್ತಿ ಸದಸ್ ದೇವರಾಜ ವಿರುದ್ಧ, ಸಿರಿಗೆರೆ ಗ್ರಾಮ ಪಂಚಾಯ್ತಿ ಕ್ಲರ್ ಜಯರಾಮ್ ಎಂಬುವರು ಜಾತಿ ನಿಂದನೆ, ಲೈಂಗಿಕ ದೌರ್ಜನ್ಯದ ಆರೋಪದಡಿ ದೂರು ನೀಡಿದ್ದಾರೆ.
ಗ್ರಾಮ ಪಂಚಾಯ್ತಿ ಅಧ್ಯಕ್ಷೆ, ಪಿಡಿಓಗೆ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಕ್ಲರ್ಕ್ ಜಯರಾಮ್ ನೀಡಿರುವಂತ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ದೂರು ಆಧರಿಸಿ ಭರಮಸಾಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಗ್ರಾಮ ಪಂಚಾಯ್ತಿ ಸದಸ್ಯ ದೇವರಾಜ ಎಂಬುವರನ್ನು ಬಂಧಿಸಿದ್ದಾರೆ.
ರಾಜ್ಯದಲ್ಲಿ ಬಹುದೊಡ್ಡ ಖೋಟಾನೋಟು ಜಾಲ ಪತ್ತೆ: ಪಿಸಿ ಸೇರಿ ನಾಲ್ವರು ಆರೋಪಿಗಳ ಬಂಧನ
ಕೊಬ್ಬರಿ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ: ಲಕ್ಷಾಂತರ ಮೌಲ್ಯದ ಕೊಬ್ಬರಿ ಸುಟ್ಟು ಕರಕಲು