ತುಮಕೂರು : ಸಿನಿಮೀಯ ರೀತಿಯಲ್ಲಿ ಗ್ರಾ.ಪಂ. ಸದಸ್ಯನ ಕಿಡ್ನ್ಯಾಪ್ ಪ್ರಕರಣ ಸಂಬಂಧ ಅಮೃತೂರು ಪೊಲೀಸರಿಂದ ಮೂವರು ಆರೋಪಿಗಳ ಬಂಧನವಾಗಿದೆ.
ಗ್ರಾಮ ಪಂಚಾಯ್ತಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಮತ ಚಲಾಯಿಸಲು ಮುಂದಾಗಿದ್ದ ಸದಸ್ಯನನ್ನು ಅಪಹರಣ ಮಾಡಿದ್ದ ಮೂವರು ಆರೋಪಿಗಳನ್ನು ಅಮೃತೂರು ಪೊಲೀಸರು ಬಂಧಿಸಿದ್ದಾರೆ.ಬಂಧಿತರನ್ನು ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಸಮೀಪದ ಚಲಮಸಂದ್ರ ಗ್ರಾಮದ ನಿವಾಸಿಗಳಾದ ಕುಮಾರ್, ಮಧು, ಸುದೀಪ್ ಎಂದು ಗುರುತಿಸಲಾಗಿದೆ.
ಮೂವರು ಆರೋಪಿಗಳು ಪಂಚಾಯ್ತಿ ಸದಸ್ಯ ಮಂಜುನಾಥ್ ಅವರನ್ನು ಕಾರಿನಲ್ಲಿ ಕಿಡ್ನಾಪ್ ಮಾಡಿದ್ದರು. . ಈ ಘಟನೆ ನಡೆದ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಹಾಗೂ ಅಮೃತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಮೈಸೂರಿನಲ್ಲಿ 2 ದಿನ ಜೆಡಿಎಸ್ ಸಮಾಲೋಚನಾ ಸಭೆ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಉಪಸ್ಥಿತಿ, HDK ನೇತೃತ್ವ