ನೆಲಮಂಗಲ: ಗ್ರಾಮ ಪಂಚಾಯ್ತಿ ಸದಸ್ಯನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿರುವಂತ ಘಟನೆ ನೆಲಮಂಗಲದ ಇಸ್ಲಾಂಪುರದಲ್ಲಿ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಇಸ್ಲಾಂಪುರದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯ ಸಲೀಂ ಮೇಲೆ ಗುಂಡಿನ ದಾಳಿಯನ್ನು ಅಪರಿಚಿತರು ನಡೆಸಿದ್ದಾರೆ.
ಗ್ರಾಮ ಪಂಚಾಯ್ತಿ ಸದಸ್ಯ ಸಲೀಂ ಮನೆಯ ಬಳಿಯಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತಿದ್ದಂತ ಸಂದರ್ಭದಲ್ಲಿ ದಿಢೀರ್ ಅಪರಿಚಿತರು ಫೈರಿಂಗ್ ಮಾಡಿದ್ದಾರೆ. ಗುಂಡಿನ ದಾಳಿಯ ಬಳಿಕ ಅಪರಿಚಿತರು ಅಲ್ಲಿಂದ ಪರಾರಿಯಾಗಿದ್ದಾರೆ.
ಅಪರಿಚಿತರ ಗುಂಡಿನ ದಾಳಿಯಿಂದಾಗಿ ಗ್ರಾಮ ಪಂಚಾಯ್ತಿ ಸದಸ್ಯ ಸಲೀಂ ಕೈ, ಕಾಲಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅದೃಷ್ಟವಶಾತ್ ಸಲೀಂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
CRIME NEWS: ಬೆಂಗಳೂರಲ್ಲಿ ಮಹಿಳೆ ಹತ್ಯೆಗೈದು ಶವ ಆಟೋದಲ್ಲಿ ಎಸೆದು ಹೋಗಿದ್ದ ಇಬ್ಬರು ಆರೋಪಿಗಳು ಅರೆಸ್ಟ್
BIG NEWS : ಅಕ್ರಮವಾಗಿ `BPL’ ರೇಷನ್ ಕಾರ್ಡ್ ಪಡೆದವರಿಗೆ ಸರ್ಕಾರದಿಂದ ಬಿಗ್ ಶಾಕ್.!








