ಬೆಂಗಳೂರು : ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ ಸಲ್ಲಿಸಿರುವ ಅರ್ಜಿ ಅಂಗೀಕೃತವಾಗದ ಅಭ್ಯರ್ಥಿಗಳು ಇದೇ ಆಗಸ್ಟ್ 26ರೊಳಗೆ ಪೂರಕ ದಾಖಲೆಗಳನ್ನು ಸಲ್ಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ತಿಳಿಸಿದೆ.
ಪ್ರಾಧಿಕಾರವು ಪೂರಕ ದಾಖಲೆಗಳನ್ನು ಪರಿಗಣಿಸಿ ಅರ್ಜಿಗಳನ್ನು ದೃಢೀಕರಿಸಲಿದೆ. ಅರ್ಜಿದಾರರು ತಮ್ಮ ಅರ್ಜಿ ಸ್ಥಿತಿಯನ್ನು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಲಭ್ಯವಿರುವ ಲಿಂಕ್ ಮೂಲಕ ಪರಿಶೀಲಿಸಬಹುದು.
ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀ್ಕ್ಷೆಗೆ ಹಾಜರಾಗಬೇಕು. ಸೆ. 29 ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ.
ಇನ್ನು ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಆಗಸ್ಟ್ 26 ರೊಳಗೆ ಪೂರಕ ದಾಖಲೆಗಳನ್ನು ಸಲ್ಲಿಸಬೇಕು. ಅರ್ಜಿದಾರರು ತಮ್ಮ ಅರ್ಜಿ ಸ್ಥಿತಿಯನ್ನು ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಲಭ್ಯವಿರುವ ಲಿಂಕ್ ಮೂಲಕ ಪರಿಶೀಲಿಸಬಹುದು ಎಂದು ಹೇಳಿದ್ದಾರೆ.