ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯತಿ ನೌಕರರು ಡಿ.19 ರಿಂದ ಸುವರ್ಣಸೌಧದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದು, ಈ ಮೂಲಕ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ರಾಜ್ಯ ಸರ್ಕಾರಕ್ಕೆ ಬಿಗ್ ಶಾಕ್ ಎದುರಾಗಲಿದೆ.
ರಾಜ್ಯದ ಗ್ರಾಮ ಪಂಚಾಯತ್ ನೌಕರರಿಗೆ ಸಿ ಮತ್ತು ಡಿ ದರ್ಜೆ ಸ್ಥಾನಮಾನ ನೀಡಬೇಕು ಗ್ರಾಮ ಪಂಚಾಯತಿ ನೌಕರರ ‘ಬೃಹತ್ ಪ್ರತಿಭಟನೆಮತ್ತು ನೌಕರರ ವಿವಿಧ ಬೇಡಿಕೆಗಳನ್ನು ಇಡೇರಿಸಲು ಒತ್ತಾಯಿಸಿ ನೌಕರರು ಡಿ.19 ರಿಂದ ಪ್ರತಿಭಟನೆ ನಡೆಸಲಿದ್ದು, ಡಿ.12 ರಂದು ಗ್ರಾಮಪಂಚಾಯತ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ ಇದೆ ಎನ್ನಲಾಗಿದೆ. ತಮ್ಮ ವಿವಿಧ ಮೂಲಭೂತ ಬೇಡಿಕೆಗಳಿಗಾಗಿ ರಾಜ್ಯ ಮಟ್ಟದ ಬೃಹತ್ ಹೋರಾಟಕ್ಕೆ ಇಳಿಯುತ್ತೇವೆ ಎಂದು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ರಾಜ್ಯ ಸಮಿತಿಯ ರಾಜ್ಯಾಧ್ಯಕ್ಷರು ಡಾ. ದೇವಿಪ್ರಸಾದ್ ಬೊಲ್ಮ ಧರ್ಮಸ್ಥಳ ತಿಳಿಸಿದ್ದಾರೆ.
ಸಚಿವರಿಗೆ, ಸರ್ಕಾರಕ್ಕೆ ಈ ಬಗ್ಗೆ ಹಲವು ಮನವಿಗಳನ್ನು ಸಲ್ಲಿಸಿದರೂ ಸಹ ಬಡ ನೌಕರರ ಸಮಸ್ಯೆಗಳಿಗೆ ಸ್ಪಂದನೆ ಸಿಕ್ಕಿಲ್ಲ ಹೀಗಾಗಿ ಪ್ರತಿಭಟನೆಗೆ ಇಳಿಯುತ್ತಿರುವುದಾಗಿ ತಿಳಿಸಿದ್ದಾರೆ.ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಿಲ್ಲ್ ಕಲೇಕ್ಟರ್ , ಕ್ಲರ್ಕ್/ಕ್ಲಕ್, ಹಾಗೂ ಡಾಟ ಎಂಟ್ರೀ ಅಪರೇಟರ್ ಗಳಿಗೆ ಸಿ ದರ್ಜೆ ಸ್ಥಾನಮಾನ ನೀಡಬೇಕು ಹಾಗೂ ಅಟೆಂಡರ್, ಕ್ಲೀನರ್ಸ್, ವಾಟರ್ ಮ್ಯಾನ್, ಚಾಲಕ ಇತ್ಯಾದಿ ವೃಂದದವರಿಗೆ ಡಿ ದರ್ಜೆ ನೀಡಿ, ನಗರ ಮತ್ತು ಪಟ್ಟಣ ಪಂಚಾಯತ್ ನಂತೆ ವೇತನ ನಿಗಧಿಪಡಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಲಿದ್ದಾರೆ.
How To Control Ants: ನಿಮ್ಮ ಮನೆಗಳಲ್ಲಿ ಇರುವೆಗಳ ಕಾಟಾನಾ? ನಿಯಂತ್ರಿಸಲು ಇಲ್ಲಿವೆ ಸಿಂಪಲ್ ಮನೆಮದ್ದುಗಳು
BIGG NEWS : ರಾಜ್ಯದ ಯುವ ಜನತೆಗೆ ಭರ್ಜರಿ ಗುಡ್ ನ್ಯೂಸ್ : ‘ಯುವ ನೀತಿ’ಗೆ ಸಂಪುಟ ಅಸ್ತು, ಪ್ರತ್ಯೇಕ ಬಜೆಟ್ ಘೋಷಣೆ