ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಯ ಅತಿಥಿ ಶಿಕ್ಷಕರಿಗೆ ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಗೌರವ ಧನವನ್ನು ಹೆಚ್ಚಳ ಮಾಡಿ ಆದೇಶಿಸಿದೆ. ಈ ಮೂಲಕ ಸರ್ಕಾರಿ ಶಾಲಾ-ಕಾಲೇಜಿನ ಅತಿಥಿ ಶಿಕ್ಷಕ, ಉಪನ್ಯಾಸಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.
ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ನೇಮಕ ಮಾಡಿಕೊಂಡು ಕಾರ್ಯ ನಿರ್ವಹಿಸಲಾದ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಅನುಕ್ರಮವಾಗಿ ರೂ.7500/- ಮತ್ತು ರೂ.8000/- ಗಳಿಗೆ ನಿಗಧಿಪಡಿಸಿ ಆದೇಶಿಸಲಾಗಿತ್ತು ಎಂದಿದ್ದಾರೆ.
ಸದರಿ ಗೌರವ ಸಂಭಾವನೆಯನ್ನು ಪರಿಷ್ಕರಿಸಿ ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರುಗಳಿಗೆ ರೂ.10000/- ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಅತಿಥಿ ಶಿಕ್ಷಕರುಗಳಿಗೆ ರೂ.10,500/- ಗಳ ಗೌರವ ಸಂಭಾವನೆಯನ್ನು ನಿಗಧಿಪಡಿಸಿಸಲಾಗಿತ್ತು ಎಂದು ತಿಳಿಸಿದ್ದಾರೆ.
ಸದರಿ ಗೌರವ ಸಂಭಾವನೆಯನ್ನು ಪರಿಷ್ಕರಿಸಿ ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರುಗಳಿಗೆ ರೂ.10000/- ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಅತಿಥಿ ಶಿಕ್ಷಕರುಗಳಿಗೆ ರೂ.10,500/- ಗಳ ಗೌರವ ಸಂಭಾವನೆಯನ್ನು ನಿಗಧಿಪಡಿಸಿಪಡಿಸಲಾಗಿತ್ತು ಎಂದು ಹೇಳಿದ್ದಾರೆ.
ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ ದಿನಾಂಕ:10.10.2023 ರ ಪತ್ರದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವ ಅತಿಥಿ ಶಿಕ್ಷಕರುಗಳಿಗೆ ವಸ್ತುತ ನೀಡಲಾಗುತ್ತಿರುವ ಗೌರವ ಸಂಭಾವನೆಯನ್ನು ಹೆಚ್ಚಳ ಮಾಡಿ ಪರಿಷ್ಕರಿಸುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುತ್ತಾರೆ ಎಂದು ತಿಳಿಸಿದ್ದಾರೆ.
2025-26 ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ಅತಿಥಿ ಶಿಕ್ಷಕರು / ಅತಿಥಿ ಉಪನ್ಯಾಸಕರುಗಳಿಗೆ ಪುಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ ರೂ.2000/- (ಎರಡು ಸಾವಿರ ರೂಪಾಯಿಗಳು ಮಾತ್ರ ಹೆಚ್ಚಿಸಲು ಮೇಲೆ (4) ರಲ್ಲಿ ಓದಲಾದ Budget Advice ನಲ್ಲಿ ಆರ್ಥಿಕ ಇಲಾಖೆಯ ತಿಳಿಸಲಾಗಿರುತ್ತದೆ. ಅದರಂತೆ ಈ ಕೆಳಕಂಡ ಆದೇಶಿದ್ದಾರೆ.
ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆ / ಪದವಿಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಬೋಧಕ ಹುದ್ದೆಗಳ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನೇಮಕಾತಿ ಮಾಡಿಕೊಳ್ಳಲಾಗುತ್ತಿರುವ ಅತಿಥಿ ಶಿಕ್ಷಕರು / ಅತಿಥಿ ಉಪನ್ಯಾಸಕರುಗಳ ಗೌರವ ಸಂಭಾವನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡಂತೆ ವರಿಷ್ಕರಿಸಿ ಆದೇಶಿಲಾಗಿದೆ ಎಂದು ತಿಳಿಸಿದ್ದಾರೆ.
ಹೀಗಿದೆ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳದ ವಿವರ
- ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ರೂ.10,000ದಿಂದ ರೂ.12,000ಕ್ಕೆ ಗೌರವಧನ ಹೆಚ್ಚಳ ಮಾಡಲಾಗಿದೆ.
- ಸರ್ಕಾರಿ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ರೂ.10,500ರಿಂದ ರೂ.12,500ಕ್ಕೆ ಹೆಚ್ಚಳ ಮಾಡಲಾಗಿದೆ.
- ಸರ್ಕಾರಿ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರಿಗೆ ರೂ.12,000ದಿಂದ ರೂ.14,000ಕ್ಕೆ ಗೌರವಧನ ಹೆಚ್ಚಳ ಮಾಡಲಾಗಿದೆ.
ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ:ಆಇ 351 ವೆಚ್ಚ-8/2025 ದಿನಾಂಕ: 28.04.2025 ರಲ್ಲಿ ನೀಡಿರುವ ಸಹಮತಿಯೊಂದಿಗೆ ಹೊರಡಿಸಲಾಗಿದೆ.
BIG NEWS: ಅವರು ನಮ್ಮ ತಲೆಗೆ ಹೊಡೆದ್ರೆ, ನಾವು ಎದೆ ಬಗೆಯುತ್ತೇವೆ: ಪಾಕ್‌ಗೆ ರಾಜನಾಥ್ ಸಿಂಗ್ ಖಡಕ್ ಸಂದೇಶ
BIG NEWS : ರಾಜ್ಯದ ʻಆಸ್ತಿʼ ಮಾಲೀಕರಿಗೆ ಗುಡ್ ನ್ಯೂಸ್ : ʻಬಿ-ಖಾತಾʼ ನೀಡುವ ಅವಧಿ 3 ತಿಂಗಳು ವಿಸ್ತರಣೆ.!