ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಪ್ರಯಾಣಿಕರಿಗೆ ಭರ್ಜರಿ ಸಿಹಿಸುದ್ದಿ ಎನ್ನುವಂತೆ ನಿಗಮದ ಪ್ರತಿಷ್ಠಿತ ಸಾರಿಗೆ ಬಸ್ಸುಗಳ ಪ್ರಯಾಣದ ಟಿಕೆಟ್ ದರದಲ್ಲಿ ರಿಯಾಯಿತಿಯನ್ನು ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸಾರ್ವಜನಿಕ ಪ್ರಯಾಣಿಕರಿಗೆ ಕರಾರಸಾ ನಿಗಮವು ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸುತ್ತಿದ್ದು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಿಗಮದ ವತಿಯಿಂದ ಆಯ್ದ ಮಾರ್ಗಗಳಾದ ಬೆಂಗಳೂರು-ಮಂಗಳೂರು, ಬೆಂಗಳೂರು-ಕುಂದಾಪುರ, ಬೆಂಗಳೂರು-ಉಡುಪಿ, ಬೆಂಗಳೂರು-ಧರ್ಮಸ್ಥಳ, ಬೆಂಗಳೂರು-ಕುಕ್ಕೆಸುಬ್ರಮಣ್ಯ, ಬೆಂಗಳೂರು-ಪುತ್ತೂರು, ಬೆಂಗಳೂರು-ಮಡಿಕೇರಿ/ವಿರಾಜಪೇಟೆ. ಬೆಂಗಳೂರು-ದಾವಣಗೆರೆ, ಬೆಂಗಳೂರು-ಶಿವಮೊಗ್ಗ/ಸಾಗರ, ಬೆಂಗಳೂರು-ಚೆನ್ನೈ, ಬೆಂಗಳೂರು-ಹೈದರಾಬಾದ್/ಸಿಕಂದರಾಬಾದ್, ಬೆಂಗಳೂರು-ತಿರುಪತಿ, ಬೆಂಗಳೂರು-ಮಂತ್ರಾಲಯ, ಬೆಂಗಳೂರು-ಪೂನಾ/ಮುಂಬೈ, ಬೆಂಗಳೂರು-ವಿಜಯವಾಡ, ಬೆಂಗಳೂರು-ಎರ್ನಾಕುಲಂ, ಬೆಂಗಳೂರು-ಮದುರೈ, ಬೆಂಗಳೂರು-ಕೋಯಿಮತ್ತೂರು, ಬೆಂಗಳೂರು-ತಿಶ್ರೂರು ಇನ್ನು ಕೆಲವು ಆಯ್ದ ಮಾರ್ಗಗಳಲ್ಲಿ ಕಾರ್ಯಾಚರಣೆ ಮಾಡುತ್ತಿರುವ ಪ್ರತಿಷ್ಠಿತ ಸಾರಿಗೆಗಳಾದ ರಾಜಹಂಸ, ನಾನ್ ಎಸಿ ಸ್ಲೀಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್, ಎಸಿ ಸ್ಲೀಪರ್, ಮಲ್ಟಿ ಆಕ್ಸೆಲ್ ಎಸಿ ಸ್ಲೀಪರ್ ಮಾದರಿಯ ಸಾರಿಗೆಗಳ ಪ್ರಯಾಣದರಗಳಲ್ಲಿ ಶೇಕಡ 5 ರಿಂದ 15 ರವರೆಗೆ ರಿಯಾಯಿತಿ ನೀಡಲಾಗಿದೆ. ಸದರಿ ರಿಯಾಯಿತಿಯು ದಿನಾಂಕ:05.01.2026 ರಿಂದ ಜಾರಿಗೆ ಬರಲಿದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ ksrtc.in ಗೆ ಭೇಟಿ ನೀಡಿ. ಸಾರ್ವಜನಿಕ ಪ್ರಯಾಣಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಈ ಮೂಲಕ ಕೋರಲಾಗಿದೆ.
ಸಾಗರದ ‘ಕರಕುಶಲ ಕರ್ಮಿ’ಗಳಿಗೆ ಬೇಡಿಕೆ ಈಡೇರಿಸಲು ಅಗತ್ಯ ಕ್ರಮ: ‘ಶಾಸಕ ಗೋಪಾಲಕೃಷ್ಣ ಬೇಳೂರು’ ಭರವಸೆ
ರಾಜ್ಯ ಸರ್ಕಾರದಿಂದ ‘ಬಳ್ಳಾರಿ ಶೂಟೌಟ್’ ಮುಚ್ಚಿ ಹಾಕಲು ಷಡ್ಯಂತ್ರ್ಯ: HDK ಗಂಭೀರ ಆರೋಪ








